Homeಮುಖಪುಟಕೇರಳ | ಕೊಲೆ ಪ್ರಕರಣ - 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ

ಕೇರಳ | ಕೊಲೆ ಪ್ರಕರಣ – 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ

- Advertisement -
- Advertisement -

ಸುಮಾರು ಆರು ವರ್ಷಗಳ ಹಿಂದೆ ಯೂತ್ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ (21) ಮತ್ತು ಶರತ್ಲಾಲ್ ಪಿಕೆ (24) ಹತ್ಯೆಗೆ ಸಂಚು ರೂಪಿಸಿದ್ದಕ್ಕಾಗಿ 10 ಸಿಪಿಎಂ ಕಾರ್ಯಕರ್ತರಿಗೆ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶೇಷಾದ್ರಿನಾಥನ್ ಶುಕ್ರವಾರ ಎರಡು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಫೆಬ್ರವರಿ 17, 2019 ರಂದು ಕೃಪೇಶ್ ಮತ್ತು ಶರತ್ಲಾಲ್ ದೇವಸ್ಥಾನದ ಸ್ವಾಗತ ಸಮಿತಿಯ ಸಭೆಯಿಂದ ಹಿಂದಿರುಗುತ್ತಿದ್ದಾಗ ಆರೋಪಿಗಳು ಅವರ ಕೊಲೆಗೆ ಸಂಚು ರೂಪಿಸಿದ್ದರು. ಕೇರಳ

ಎರಡನೇ ಆರೋಪಿ ಸಾಜಿ ಸಿ ಜಾರ್ಜ್‌ನನ್ನು ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಕ್ಕಾಗಿ ಸಿಪಿಐ(ಎಂ)ನ ಮಾಜಿ ಶಾಸಕ ಕೆ.ವಿ. ಕುಂಞಿರಾಮನ್, ಕಾಂಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ. ಮಣಿಕಂಠನ್ ಮತ್ತು ಇತರ ಇಬ್ಬರಿಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಎರಡು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 10 ಅಪರಾಧಿಗಳು ತಲಾ 2 ಲಕ್ಷ ರೂ. ದಂಡ ಹಾಗೂ 14, 20, 21 ಮತ್ತು 22 ಆರೋಪಿಗಳಿಗೆ ತಲಾ 10,000 ರೂ.ಗಳ ದಂಡದೊಂದಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 5,2019 ರಂದು ನಡೆದ ವಿಚಾರಣೆಯ ಪ್ರಕಾರ, ಕಳ್ಳಿಯೋಟ್‌ನಲ್ಲಿ ಎಸ್‌ಎಫ್‌ಐ ಮತ್ತು ಯೂತ್ ಕಾಂಗ್ರೆಸ್ ನಡುವಿನ ಘರ್ಷಣೆಯ ನಂತರ, ಶರತ್ ಲಾಲ್ ಮತ್ತು ಇತರರು ಮೊದಲ ಪ್ರಕರಣದ ಅಪರಾಧಿ ಪೀತಾಂಬರನ್ ಮತ್ತು ಇನ್ನೋರ್ವ ಅಪರಾಧಿ ಸುರೇಂದ್ರನ್ ಅಲಿಯಾಸ್ ವಿಷ್ಣು ಸುರ ಮೇಲೆ ಹಲ್ಲೆ ನಡೆಸಿದ್ದರು. ಫೆಬ್ರವರಿ 17, 2019ರಂದು, ಕೃಪೇಶ್ ಮತ್ತು ಶರತ್ ಲಾಲ್ ಅವರು ಪೆರುಮ್ಕಾಲಿಯಾಟ್ಟಂ ದೇವಸ್ಥಾನದ ಉತ್ಸವದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಕಳ್ಳಿಯೋಟ್-ತನ್ನಿತೋಡ್ ರಸ್ತೆಯಲ್ಲಿ ಅವರ ಮೇಲೆ ದಾಳಿ ನಡೆದಿತ್ತು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಸಾವನ್ನಪ್ಪಿದ್ದರು.

ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಕೃಪೇಶ್ ಅವರ ತಂದೆ ಪಿವಿ ಕೃಷ್ಣನ್ ಮತ್ತು ಸಹೋದರಿ ಕೃಷ್ಣಪ್ರಿಯಾ ಮತ್ತು ಶರತ್‌ಲಾಲ್ ಅವರ ತಾಯಿ ಲತಾ ಮತ್ತು ಸಹೋದರಿ ಅಮೃತಾ ಅವರು ಶಿಕ್ಷೆಯ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ ಎಂದು ಆನ್‌ಮನೋರಮ ವರದಿ ಮಾಡಿದೆ. ಕೇರಳ

ಕೊಲೆ ಮತ್ತು ಪಿತೂರಿಗಾಗಿ ಜೀವಾವಧಿ ಶಿಕ್ಷೆಗೆ ಗುರಿಯಾದವರಲ್ಲಿ ಸಿಪಿಎಂನ ಪೆರಿಯ ಸ್ಥಳೀಯ ಸಮಿತಿಯ ಮಾಜಿ ಸದಸ್ಯ ಪೀತಾಂಬರನ್ ಎ, ಸಾಜಿ ಸಿ ಜಾರ್ಜ್, ಸುರೇಶ್ ಕೆ ಎಂ, ಅನಿಲ್ ಕುಮಾರ್ ಅಲಿಯಾಸ್ ಅಬು, ಗಿಜಿನ್, ಶ್ರೀರಾಗ್ ಆರ್, ಅಶ್ವಿನ್ ಎ ಅಲಿಯಾಸ್ ಅಪ್ಪು ಮತ್ತು ಸಿಐಟಿಯು ಕಾರ್ಯಕರ್ತ ಸುಬೀಶ್ ಸೇರಿದ್ದಾರೆ. ರಂಜಿತ್ ಟಿ ಮತ್ತು ಎ ಸುರೇಂದ್ರನ್ ಅಲಿಯಾಸ್ ವಿಷ್ಣು ಸೂರಾ ಅವರಿಗೆ ನ್ಯಾಯಾಲಯವು ಶರತ್‌ಲಾಲ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಉದ್ಮಾ ಕ್ಷೇತ್ರದ ಮಾಜಿ ಶಾಸಕ ಮತ್ತು ಸಿಪಿಎಂನ ಜಿಲ್ಲಾ ಕಾರ್ಯದರ್ಶಿ ಸಮಿತಿ ಸದಸ್ಯ ಕೆ.ವಿ. ಕುಂಞಿರಾಮನ್, ಸಿಪಿಎಂ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯ, ಕಾಞಂಗಾಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ ಮಣಿಕಂಠನ್, ರಾಘವನ್ ವೆಲುತೋಳಿ (ಮಾಜಿ ಪಕ್ಕಂ ಸ್ಥಳೀಯ ಕಾರ್ಯದರ್ಶಿ ಮತ್ತು ಸಿಪಿಎಂನ ವರ್ತಕರ ವಿಭಾಗ, ಕೇರಳ ವ್ಯಾಪಾರಿ ವ್ಯವಸಾಯಿ ಸಮಿತಿಯ ಮಾಜಿ ಜಿಲ್ಲಾ ಅಧ್ಯಕ್ಷ), ಮತ್ತು ಕೆ ವಿ ಭಾಸ್ಕರನ್ (ಸಿಪಿಎಂ-ನಿಯಂತ್ರಿತ ಪನಾಯಲ್ ಸೇವಾ ಸಹಕಾರಿ ಬ್ಯಾಂಕ್‌ನ ನಿವೃತ್ತ ಕಾರ್ಯದರ್ಶಿ) ಇದೀಗ ಅಪರಾಧಿ ಎಂದು ಸಾಬೀತಾಗಿರುವ ಎರಡನೇ ಆರೋಪಿಯನ್ನು ಪೊಲೀಸ್ ಕಸ್ಟಡಿಯಿಂದ ಬಲವಂತವಾಗಿ ಕರೆದೊಯ್ದಿದ್ದಕ್ಕಾಗಿ ಐಪಿಸಿಯ ಸೆಕ್ಷನ್ 225 ರ ಅಡಿಯಲ್ಲಿ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

ಇದನ್ನೂ ಓದಿ: ರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ

ರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...