Homeಕರ್ನಾಟಕಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ - ಸಿಪಿಐ(ಎಂ)

ಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ – ಸಿಪಿಐ(ಎಂ)

- Advertisement -
- Advertisement -

ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ ಕೇಂದ್ರ-ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಹೋರಾಟಗಳನ್ನು ತೀವ್ರಗೊಳಿಸಲು ಮತ್ತು ಕರ್ನಾಟಕದಲ್ಲಿ ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಪಕ್ಷವು ತೀರ್ಮಾನಿಸಿದೆ ಎಂದು ಸಿಪಿಐ(ಎಂ)ನ ನೂತನ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಕೆ. ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ಪಕ್ಷದ ರಾಜ್ಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ”ಕೇಂದ್ರದ ಮೋದಿ ಸರ್ಕಾರವು ದೇಶದ ಬಹುಸಂಖ್ಯಾತ ಬಡವರನ್ನು ಬಲಿಕೊಟ್ಟು ಮತೀಯವಾದಿ ನೀತಿಗಳ ನೆರಳಲ್ಲಿ ಕಾರ್ಪೊರೇಟ್ ಬಂಡವಾಳದಾರರ ಹಿತಕ್ಕಾಗಿ ನವ-ಉದಾರವಾದಿ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಇತ್ತ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಮೋದಿ ಸರ್ಕಾರದ ರೀತಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂದು ಸಮ್ಮೇಳನದಲ್ಲಿ ಮಂಡಿಸಿದ ರಾಜಕೀಯ ವರದಿಯಲ್ಲಿ ವಿಶ್ಲೇಷಿಸಿದೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಮತ್ತು ರಾಜ್ಯದ ಸರ್ಕಾರದ ನೀತಿಯಿಂದಾಗಿ ಬಡವರು, ಕೂಲಿ ಕಾರ್ಮಿಕರು, ರೈತರು, ಕಾರ್ಮಿಕರು ಮತ್ತು ಇತರೆ ದುಡಿಯುವ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಉದ್ಯೋಗ ಅಭದ್ರತೆ, ರೈತರ ಬೆಳೆಗೆ ಸಿಗದ ಬೆಲೆ, ಬಲವಂತದ ಭೂಸ್ವಾಧೀನ, ಶಿಕ್ಷಣ, ಆರೋಗ್ಯ, ಮತ್ತು ಇತರೆ ನಾಗರೀಕ ಸೇವೆಗಳ ದುಬಾರಿ, ಇತ್ಯಾದಿ ಸಮಸ್ಯೆಗಳಿಂದಾಗಿ ಜರ್ಜರಿತಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿರುವ ಕುರಿತು ಸಮ್ಮೇಳನ ಆತಂಕ ವ್ಯಕ್ತಪಡಿಸಿದೆ” ಎಂದಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆರೆಸ್ಸೆಸ್ ಮತ್ತು ಅದರ ಪರಿವಾರ ಸಂಘಟನೆಗಳು ಜನರ ಧಾರ್ಮಿಕ ನಂಬಿಕೆಗಳನ್ನು ದುರುಪಯೋಗಪಡಿಸಿಕೊಂಡು ಮತೀಯವಾದಿ ನೆಲೆಯಲ್ಲಿ ಜನರ ಐಕ್ಯತೆಯನ್ನು ಮುರಿಯಲು ನಡೆಸುತ್ತಿರುವ ಪ್ರಯತ್ನಗಳನ್ನು ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ಪಕ್ಷದ ಸಮ್ಮೇಳನವು ಅಭಿಪ್ರಾಯಪಟ್ಟಿದೆ. ಕೋಮು ವಿಭಜನೆ ತಡೆಗಟ್ಟುವ ವಿಚಾರದಲ್ಲಿ ಹಾಗೂ ಜನತೆಯ ಐಕ್ಯತೆಯನ್ನು ಕಾಪಾಡಲು ಸಿಪಿಐ(ಎಂ)ನ ಕಾರ್ಯಕರ್ತರು ಮುಂಚೂಣಿಯಲ್ಲಿರುವಂತೆ ಪಕ್ಷದ ಕಾರ್ಯಕರ್ತರಿಗೆ ಸಮ್ಮೇಳನವು ಕರೆ ನೀಡಿದೆ” ಎಂದು ಡಾ.ಪ್ರಕಾಶ್ ಹೇಳಿದ್ದಾರೆ.

ಭೂರಹಿತ ಕುಟುಂಬಗಳಿಗೆ ಮನೆ ನಿವೇಶನ, ಅರಣ್ಯ ಸಾಗುವಳಿದಾರರಿಗೆ ರಕ್ಷಣೆ, ಬಲವಂತದ ಭೂಸ್ವಾಧೀನ ಕೈಬಿಡಲು, ಕರಾಳ ಕೃಷಿ ಕಾಯ್ದೆಗಳ ರದ್ದತಿಗಾಗಿ, ಸಾರ್ವಜನಿಕ ಆಸ್ತಿಗಳ ಖಾಸಗೀಕರಣದ ವಿರುದ್ಧ, ಫೆಬ್ರವರಿ 10 ರಂದು ತಿಂಗಳಲ್ಲಿ ನಡೆಯುವ ಪಾದಯಾತ್ರೆಗೆ ಪಕ್ಷವು ಬೆಂಬಲ ನೀಡುವುದಾಗಿ ಪ್ರಕಾಶ್ ಅವರು ಹೇಳಿದ್ದಾರೆ.

ಐಸಿಡಿಎಸ್ ಯೋಜನೆ ದುರ್ಬಲಗೊಳಿಸುವುದರ ವಿರುದ್ಧ, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಕಡಿವಾಣಕ್ಕೆ ಒತ್ತಾಯಿಸಿ, ಸಾರ್ವಜನಿಕ ಪಡಿತರ ವ್ಯವಸ್ಥೆ ಬಲಪಡಿಸಲು ಹಾಗೂ ಬಡವರ ಬಿಪಿಎಲ್ ಕಾರ್ಡ್ ರದ್ಧತಿ ವಿರೋಧಿಸಿ, ಸಾಗರ ಮಾಲ ಯೋಜನೆಯಿಂದ ಕರಾವಳಿ ಜನರ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ನಿವಾರಣೆಗೆ ಒತ್ತಾಯಿಸಿ, ಕೃತಕ ಬುದ್ಧಿಮತ್ತೆಯಿಂದ ಹೆಚ್ಚುತ್ತಿರುವ ಉದ್ಯೋಗ ನಷ್ಟವನ್ನು ತಡೆಗಟ್ಟಲು, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶ) ಕಾಯ್ದೆಯಿಂದ ಐಟಿ/ಐಟಿಇಎಸ್ ವಲಯಕ್ಕೆ ವಿನಾಯಿತಿ ನೀಡಿರುವುದನ್ನು ವಿರೋಧಿಸಿ, ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಶೀಘ್ರವೇ ನಡೆಸುವಂತೆ ಒತ್ತಾಯಿಸುವ ನಿರ್ಣಯಗಳು ಸೇರಿದಂತೆ 33 ನಿರ್ಣಯಗಳನ್ನು ಪಕ್ಷದ ರಾಜ್ಯ ಸಮ್ಮೇಳನವು ಅಂಗೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಪಂಚಾಯಿತಿ, ಹಮಾಲಿ, ಸಾರಿಗೆ ಇತ್ಯಾದಿ ಶ್ರಮಜೀವಿ ವರ್ಗಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಮ್ಮೇಳನ ನಿರ್ಣಯ ಕೈಗೊಂಡಿದೆ ಮತ್ತು ಈ ನಿಟ್ಟಿನಲ್ಲಿ ನಡೆಯುವ ಹೋರಾಟಗಳನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ನೀತಿಗಳಲ್ಲಿ ವ್ಯತ್ಯಾಸವಿಲ್ಲದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಕಾರ್ಯನಿರ್ವಹಿಸುತ್ತಿರುವುದನ್ನು ಪಕ್ಷದ ರಾಜ್ಯ ಸಮ್ಮೇಳನವು ಗುರುತಿಸಿದೆ. ಜನರ ಸಂಕಷ್ಟಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದವನ್ನು ಬೆಳೆಸಲಾಗುತ್ತಿದೆ. ಜನತೆಗೆ ನೀತಿಗಳ ಪರ್ಯಾಯ ಮತ್ತು ರಾಜಕೀಯ ಪರ್ಯಾಯ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನತೆಗೆ ಅಗತ್ಯವಾದ ಒಂದು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನವು ತೀರ್ಮಾನಿಸಿದ್ದು, ರಾಜ್ಯದ ಎಡ ಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು, ಸಂಘಟನೆಗಳು, ಶಕ್ತಿಗಳು ಮತ್ತು ವ್ಯಕ್ತಿಗಳನ್ನು ಒಗ್ಗೂಡಿಸಿ ಈ ರಂಗವನ್ನು ಕಟ್ಟಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೋರಾಟಗಳು ಮತ್ತು ಆಂದೋಲನಗಳಲ್ಲಿ ಸಿಪಿಐ(ಎಂ) ಮತ್ತು ಇತರೆ ಕಮ್ಯುನಿಸ್ಟ್ ಪಕ್ಷಗಳು ಮುಂಚೂಣಿಯಲ್ಲಿದ್ದರೂ ಚುನಾವಣೆಗಳಲ್ಲಿ ಕಮ್ಯುನಿಸ್ಟ್ ಪಕ್ಷಗಳ ಮತಗಳಿಕೆ ಪ್ರಮಾಣ ಕುಸಿಯುತ್ತಿರುವುದನ್ನು ಗಂಭೀರವಾಗಿ ಸಮ್ಮೇಳನವು ವಿಮರ್ಶಿಸಿದ್ದು, ಕೆಳಹಂತದ ಪಕ್ಷ ಸಂಘಟನೆಗೆ ಒತ್ತು ಮತ್ತು ಸಮೂಹಗಳ ರಾಜಕೀಯ ಪ್ರಜ್ಞೆಯನ್ನು ಎತ್ತರಿಸಬೇಕೆಂದು ಸಮ್ಮೇಳನವು ತೀರ್ಮಾನ ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...