Homeಕರ್ನಾಟಕಪ್ರೊ.ಮುಝಫ್ಫರ್ ಅಸ್ಸಾದಿ ನಿಧನ: ಗೆಳೆಯನ ಕುರಿತು ರಹಮತ್ ತರೀಕೆರೆ....

ಪ್ರೊ.ಮುಝಫ್ಫರ್ ಅಸ್ಸಾದಿ ನಿಧನ: ಗೆಳೆಯನ ಕುರಿತು ರಹಮತ್ ತರೀಕೆರೆ….

- Advertisement -
- Advertisement -

ಏನೂ ತೋಚುತ್ತಿಲ್ಲ.
ಇಂದು ಮುಂಜಾನೆ ಬೆಳಕನ್ನು ಹರಿಯಲು ಬಿಡದಂತೆ ಆವರಿಸಿದ ತಣ್ಣನೆಯ ಕಾವಳ, ಗೆಳೆಯನ ಸಾವಿನ ಘೋರಸುದ್ದಿಯಾಗಿ ಹೀಗೆ ತನುಮನವನ್ನು ಆವರಿಸುತ್ತದೆ ಎಂದು ಊಹಿಸಿರಲಿಲ್ಲ..‌ ಪ್ರೀತಿಯ ಗೆಳೆಯ ಕಾಣದ ಲೋಕಕ್ಕೆ ಇಷ್ಟು ಬೇಗ ತೆರಳುವನೆಂದು, ಆತನಿಗೆ ಶ್ರದ್ಧಾಂಜಲಿ ಅರ್ಪಿಸಬೇಕಾಗುವುದು ಎಂದು ಊಹಿಸಿರಲಿಲ್ಲ. ಹೋಗಿ ಬಾ ಮಿತ್ರ, ಅಲ್ಬಿದಾ..

ಅಸ್ಸಾದಿಯವರು ನಿವೃತ್ತರಾದಾಗ ಬರೆದಿದ್ದ ಈ ಬರೆಹವನ್ನು ಹಂಚಿಕೊಂಡಿರುವೆ.

ಭಾರತದ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಲ್ಲಿ ಹಲವಾರು ಮಾದರಿಯವರಿದ್ದಾರೆ. ಒಂದು: ಸಂಶೋಧನೆ ಮತ್ತು ಪಾಠಪ್ರವಚನಗಳಿಂದ ತಪ್ಪಿಸಿಕೊಂಡು, ವಿಶ್ವವಿದ್ಯಾನಿಲಯ ಇಲ್ಲವೆ ಸರ್ಕಾರದ ಬೇರೆಬೇರೆ ಅಧಿಕಾರ ಸ್ಥಾನಗಳಲ್ಲಿ ಇಡೀ ವೃತ್ತಿಜೀವನ ಮುಗಿಸುವವರು. ಎರಡು: ಒಳ್ಳೆಯ ಅಧ್ಯಾಪಕರಾಗಿರುತ್ತಾರೆ. ಆದರೆ ಸಂಶೋಧನೆ ಅಥವಾ ಬರವಣಿಗೆಯ ಕಲೆ ಇರುವುದಿಲ್ಲ. ಮೂರು: ಅತ್ಯುತ್ತಮ ಬೋಧನೆಯ ಜತೆ ಸಂಶೋಧನೆಯನ್ನೂ ಮಾಡುವವರು. ಇವರಲ್ಲಿ ಕೆಲವರ ಸಂಶೋಧನೆಯು ಸಂಶೋಧಕ ಸಮುದಾಯ ಸ್ತರವನ್ನು ಮಾತ್ರ ದೃಷ್ಟಿಯಲ್ಲಿಟ್ಟುಕೊಂಡು ಸೃಷ್ಟಿಯಾಗುತ್ತದೆ. ಅದಕ್ಕೆ ಸಾಮಾನ್ಯ ಓದುಗರ ಜತೆ ನೇರ ಸಂಬಂಧ ಇರುವುದಿಲ್ಲ. ನಾಲ್ಕು: ಏಕಕಾಲಕ್ಕೆ ಬೋಧನೆ ಸಂಶೋಧನೆ ಮತ್ತು ಸಮಾಜ ಬದಲಾವಣೆಯ ಪ್ರಕ್ರಿಯೆಯಲ್ಲಿ ತೊಡಗಿಕೊಂಡವರು. ಇವರು ತಮ್ಮ ಸಂಶೋಧನೆಯ ಫಲಿತವನ್ನು ಸಾರ್ವಜನಿಕ ಉಪನ್ಯಾಸಗಳ ಅಥವಾ ಜನಪ್ರಿಯ ಬರಹಗಳ ಮೂಲಕ ಸಾಮಾನ್ಯ ಓದುಗರಿಗೆ ಸರಳವಾದ ಭಾಷೆಯಲ್ಲಿ ಹಂಚಿಕೊಳ್ಳುವವರು; ಅದನ್ನು ನಾಡಿನ ಸಾಮಾಜಿಕ ರಾಜಕೀಯ ಚಳವಳಿಗಳಲ್ಲಿಯೂ ತೊಡಗಿಸುವವರು. ಆ ಜ್ಞಾನವು ಸರ್ಕಾರದ ನೀತಿನಿರೂಪಣೆಯಲ್ಲಿ ಉಪಯೋಗವಾಗುವಂತೆ ಮಾಡುವವರು, ವಿದ್ವತ್ತಿನ ಈ ಮಾದರಿಯನ್ನು ಜ್ಞಾನದ ಬಹುಸ್ತರೀಯ ಅಥವಾ ಜನೋಪಯೋಗಿ ಮಾದರಿ ಎನ್ನಬಹುದು.

ಡಿ.ಆರ್.ನಾಗರಾಜ್, ಕಾಂಚ ಐಲಯ್ಯ, ಆನಂದ ತೇಲ್ತುಂಬ್ಡೆ, ಗಣೇಶ್ ಎನ್.ದೇವಿ, ಯೋಗೇಂದ್ರ ಯಾದವ್, ವಸು ಮಳಲಿ, ಎ.ನಾರಾಯಣ, ಚಂದ್ರಪೂಜಾರಿ, ಟಿ.ಆರ್. ಚಂದ್ರಶೇಖರ, ಬಿಳಿಮಲೆ, ಮುಜಾಫರ್ ಅಸ್ಸಾದಿ ಮೊದಲಾದವರು ಈ ಮಾದರಿಯವರು. ಪತ್ರಕರ್ತರಲ್ಲಿ ಪಿ.ಸಾಯಿನಾಥ್ ಅವರು ಈ ಮಾದರಿಗೆ ನೆನಪಾಗುತ್ತಾರೆ.

ಅಸ್ಸಾದಿಯವರು ವಿದ್ಯಾರ್ಥಿಸ್ನೇಹಿಯಾದ ಪ್ರಾಧ್ಯಾಪಕರೆಂದು ಕೇಳಿರುವೆ. ಜತೆಗೆ ಅವರು ತಮ್ಮ ಜನೋಪಯೋಗಿ ಸಂಶೋಧನೆ, ಉಪನ್ಯಾಸ ಮತ್ತು ಬರೆಹಗಳಿಂದಾಗಿ ಶೈಕ್ಷಣಿಕ ವಲಯದಲ್ಲಿ ಮಾತ್ರವಲ್ಲ, ಸಾರ್ವಜನಿಕ ಬದುಕಿನಲ್ಲಿಯೂ ದೊಡ್ಡಸಂಖ್ಯೆಯ ಸಂಗಾತಿಗಳು, ಓದುಗರು, ಅಭಿಮಾನಿಗಳನ್ನು ಗಳಿಸಿದ್ದಾರೆ. ಅವರ ಈ ವ್ಯಕ್ತಿತ್ವಕ್ಕೆ ಅವರು ಜೆಎನ್‌ಯುನಲ್ಲಿ ಕಲಿತಿದ್ದು ಕೂಡ ಒಂದು ಕಾರಣವಿರಬಹುದು. ಇದರಿಂದ ಕನ್ನಡಿಗನೊಬ್ಬ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯಗಳಲ್ಲಿ ಕರ್ನಾಟಕದ ಬಗೆಗಿನ ತಿಳಿವನ್ನು ಹಂಚಿಕೊಳ್ಳುವುದು; ಕರ್ನಾಟಕದ ಹಳ್ಳಿಗಾಡು ಮತ್ತು ಕಾಡುಪ್ರದೇಶಗಳಿಗೆ ಹೋಗಿ ಬುಡಕಟ್ಟು ಜನರೊಂದಿಗೆ ಸಂವಾದ ಮಾಡುವುದು; ಅಲ್ಲಿ ಪಡೆದ ಅನುಭವ ಮತ್ತು ಜ್ಞಾನವನ್ನು ಪ್ರಭುತ್ವದ ನೀತಿನಿರೂಪಣ ಸಭೆಗಳಲ್ಲಿ ಹಂಚಿಕೊಳ್ಳುವುದು ಸಾಧ್ಯವಾಯಿತು.

ಅಸ್ಸಾದಿ ಅರಬಸ್ಥಾನದ ಒಂದು ಸಮುದಾಯದ ಹೆಸರು. ಅಸ್ಸಾದಿಯವರ ಪೂರ್ವಜರು ಬಗ್ದಾದು ಕಡೆಯಿಂದ ಭಾರತಕ್ಕೆ ವಲಸೆ ಬಂದು ಕರಾವಳಿ ಸೀಮೆಯಲ್ಲಿ ನೆಲೆ ನಿಂತವರು. ಮುಜಾಫರ್ ಅವರು ಉಡುಪಿ ಸಮೀಪದ ಶಿರ್ವದಲ್ಲಿ ಹುಟ್ಟಿದರು. ಕರ್ನಾಟಕದ ಕರಾವಳಿಯು ಅತಿಹೆಚ್ಚು ಜನಭಾಷೆಗಳು, ಹಲವಾರು ಆದಿವಾಸಿಗಳು, ವಿಭಿನ್ನ ಧರ್ಮಗಳು, ಆಹಾರ ಪದ್ಧತಿಗಳು ಇರುವ ವಿಶಿಷ್ಟ ಪ್ರದೇಶ. ಇದು ದುರದೃಷ್ಟವಶಾತ್ ಏಕರೂಪೀ ಸಂಸ್ಕೃತಿ ಹೇರಿಕೆಯ ಮತ್ತು ಮಹಿಳೆಯರ, ಅಲ್ಪಸಂಖ್ಯಾತರ ಮಾನವ ಹಕ್ಕುಗಳನ್ನು ದಮನಿಸುವ ಪ್ರಯೋಗಶಾಲೆಯೂ ಆಗಿಬಿಟ್ಟಿದೆ. ಇಂತಹ ಸಾಮಾಜಿಕ ವಾಸ್ತವ ಮತ್ತು ಸೈದ್ಧಾಂತಿಕ ಪ್ರಯೋಗಶಾಲೆಯ ಹಿನ್ನೆಲೆಯ ಪ್ರದೇಶದಿಂದ ಬಂದ ಅಸ್ಸಾದಿ, ಜಿ.ರಾಜಶೇಖರ, ಪುರುಷೋತ್ತಮ ಬಿಳಿಮಲೆ, ಚಂದ್ರಪೂಜಾರಿ, ದಿನೇಶ್ ಅಮಿನ್‌ಮಟ್ಟು, ಪಟ್ಟಾಭಿರಾಮ ಸೋಮಯಾಜಿ, ಸಂವರ್ತ ಸಾಹಿಲ್ ಮೊದಲಾದ ಚಿಂತಕರ ಮಾತು ಮತ್ತು ಬರಹಗಳಲ್ಲಿ, ಭಾರತದ ಆತ್ಮದಂತಿರುವ ಬಹುತ್ವ ತತ್ವವು ಪ್ರತಿಪಾದಿತವಾಗಿದೆ. ಈ ತತ್ವಕ್ಕೆ ಮೂಲಭೂತವಾದ ಮತ್ತು ಮತೀಯವಾದ ಎರಡನ್ನೂ ಪ್ರತಿರೋಧಿಸುವ ಶಕ್ತಿಯೂ ಒದಗಿದೆ. ಇದಕ್ಕೆ ಬೇಕಾಗಿ ಅಸ್ಸಾದಿಯವರಿಗೆ ಉರ್ದು, ತುಳು, ಕನ್ನಡ, ಇಂಗ್ಲೀಷ್ ಭಾಷೆಗಳಲ್ಲಿ ಪ್ರಭುತ್ವವಿದೆ. ಈ ಭಾಷಿಕ ಬಹುತ್ವವು ಅವರನ್ನು ಸಾಂಸ್ಕೃತಿಕ ಬಹುತ್ವವನ್ನು ಪ್ರತಿಪಾದಿಸುವಂತೆ ಮಾಡಿದೆ ಕೂಡ. ಅಸ್ಸಾದಿ‌‌ ನಮ್ಮ‌ನಡುವಿನ ಬಹುತ್ವದ ಚಿಂತಕರು.

ಅನೇಕ ಸಲ ಕೋಮುಸೌಹಾರ್ದ ಅಥವಾ ಮತೀಯವಾದ ವಿರೋಧಿಸುವ ಚಿಂತನೆಯು, ಸಮಾಜದಲ್ಲಿ ಆಳವಾಗಿರುವ ವರ್ಗಭೇದ ಮತ್ತು ಸಾಮಾಜಿಕ ತಾರತಮ್ಯದ ಆಯಾಮಗಳನ್ನು ಅರ್ಥ ಮಾಡಿಕೊಳ್ಳದೆ ಇಲ್ಲವೇ ಪರಿಗಣಿಸದೇ ಹೋಗುವ ಸಾಧ್ಯತೆಗಳಿವೆ. ಅಸ್ಸಾದಿಯವರ ಸಂಶೋಧನ ಬರಹ ಮತ್ತು ಉಪನ್ಯಾಸಗಳ ವಿಶೇಷತೆಯೆಂದರೆ, ಅವು ನಮ್ಮ ಸಮಾಜದ ಬಡತನ ಮತ್ತು ಸಾಮಾಜಿಕ ಭೇದಗಳನ್ನು, ಅವುಗಳ ನಡುವಿರುವ ಅಂತಃಸಂಬಂಧವನ್ನು ಮರೆಯುವುದಿಲ್ಲ. ಅವನ್ನು ಎಚ್ಚರಿಕೆಯಿಂದ ಗುರುತಿಸುತ್ತವೆ ಮತ್ತು ವಿಶ್ಲೇಷಿಸುತ್ತವೆ. ಸಮಸ್ಯೆಯಿಂದ ಹೊರಬರುವ ಕಾರ್ಯಸಾಧ್ಯವಾದ ಸಲಹೆ ಸೂಚನೆಗಳ ಮೂಲಕ ಮುಗಿಯುತ್ತವೆ.

ಈ ದೃಷ್ಟಿಯಿಂದ ಮುಸ್ಲಿಮರಲ್ಲಿರುವ ಪಂಗಡ ಅಥವಾ ಜಾತಿಪದ್ಧತಿಯನ್ನು ಕುರಿತ ಅಸ್ಸಾದಿಯವರ ‘ಅಲ್ಪಸಂಖ್ಯಾತರು ಮತ್ತು ಜಾತಿವ್ಯವಸ್ಥೆ’ ಪುಸ್ತಕವು ಅತ್ಯುತ್ತಮ ನಿದರ್ಶನವಾಗಿದೆ. ಈ ಪುಸ್ತಕದಲ್ಲಿರುವ ೪೦೮ ಅಡಿ ಟಿಪ್ಪಣಿಗಳು ಮತ್ತು ಅಲ್ಲಿ ಉಲ್ಲೇಖಗೊಂಡಿರುವ ಕೃತಿಗಳು, ಅಸ್ಸಾದಿಯವರ ವ್ಯಾಪಕವಾದ ಅಧ್ಯಯನದ ಪ್ರತೀಕವಾಗಿವೆ.

ಇದು ಜಗತ್ತಿನ ಮುಸ್ಲಿಮರೆಲ್ಲ ಒಂದೇ, ಮುಸ್ಲಿಮರಲ್ಲಿ ಜಾತಿ ವ್ಯವಸ್ಥೆ ಇಲ್ಲ ಎಂದು ನಂಬಿರುವ ಮತ್ತು ಪ್ರತಿಪಾದಿಸುವ ಮಹನೀಯರಿಗೆ ಅಷ್ಟೇನು ಪ್ರಿಯವಾದ ಪುಸ್ತಕವಲ್ಲ. ಆದರೆ ಒಬ್ಬ ವಿದ್ವಾಂಸ ತನ್ನ ಸಮುದಾಯಕ್ಕೆ ತನ್ನ ಬೌದ್ಧಿಕತೆಯಿಂದ ಸೇವೆ ಸಲ್ಲಿಸುವ ವಿಧಾನವೆಂದರೆ, ಅದರೊಳಗಿರುವ ವೈರುಧ್ಯಗಳನ್ನು ಕಹಿಸತ್ಯಗಳನ್ನು ಬಹಿರಂಗಪಡಿಸುವುದು; ತನ್ನ ಸಮುದಾಯದೊಳಗಿನ ದಮನಿತ ಸ್ತರ ವರ್ಗಗಳಿಗೆ ಸಾಮಾಜಿಕ, ಆರ್ಥಿಕ ನ್ಯಾಯ ಸಿಗುವ ದಿಸೆಯಲ್ಲಿ ನೆರವಾಗುವುದು; ಅವರ ನಿಜವಾದ ಎದುರಾಳಿಗಳ ಬಗ್ಗೆ ಎಚ್ಚರವನ್ನು ಕೊಡುವುದು. ಅವರನ್ನು ಕುರಿತು ಪ್ರಭುತ್ವವನ್ನು ಸಂವೇದನಶೀಲಗೊಳಿಸುವುದು; ಈ ಹಿನ್ನೆಲೆಯಲ್ಲಿ ಅಸ್ಸಾದಿಯವರು ಲಿಂಗಾಯತ ಧರ್ಮದ ಸಮಿತಿಯಲ್ಲಿ ಕೆಲಸ ಮಾಡಿದ್ದನ್ನು; ಮೈಸೂರು ಸೀಮೆಯ ಕಾಡುಗಳಲ್ಲಿರುವ ಅದಿವಾಸಿಗಳ ಸ್ಥಳಾಂತರ ಮತ್ತು ಪುನರ್‌ವಸತಿ ಕುರಿತಂತೆ ಉಚ್ಚನ್ಯಾಯಾಲಯವು ನೇಮಿಸಿದ ಸಮಿತಿಯ ಅಧ್ಯಕ್ಷರಾಗಿ ಅವರು ಕೊಟ್ಟ ವರದಿಯನ್ನು; ರೈತರ ಆತ್ಮಹತ್ಯೆ ಮತ್ತು ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ನಡೆಸಿದ ಅಧ್ಯಯನವನ್ನು ಚುನಾವಣೆಗಳಲ್ಲಿ ದಮನಿತ ಸಮುದಾಯಗಳು ಮತದಾನ ಮಾಡುವ ಪ್ರವೃತ್ತಿಯನ್ನು ಕುರಿತ ವಿಶ್ಲೇಷಣೆಗಳನ್ನು ಗಮನಿಸಬಹುದು.

ಕೆಲವು ವರ್ಷಗಳ ಹಿಂದೆ ನಾವು, ಕರ್ನಾಟಕದ ಲೇಖಕರು, ವಕೀಲರು, ಪತ್ರಕರ್ತರು, ಚಳವಳಿಗಾರರು ಸೇರಿಕೊಂಡು ‘ಮುಸ್ಲಿಂ ಚಿಂತಕರ ಚಾವಡಿ’ ಎಂಬ ಸಂಘಟನೆ ಕಟ್ಟಿದೆವು. ಮುಜಾಫರ್ ಅಸ್ಸಾದಿಯವರು ಅದರ ಪ್ರಥಮ ಅಧ್ಯಕ್ಷರಾಗಿ ಮಾಡಿದ ಮೊದಲನೇ ಕಾರ್ಯಕ್ರಮವೆಂದರೆ, ಭಾರತದ ಮುಸ್ಲಿಮರ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಅವಸ್ಥೆಯ ಬಗ್ಗೆ ಜಸ್ಟೀಸ್ ಸಾಚಾರ್‌ ಅವರು ಕೊಟ್ಟಿರುವ ವರದಿಯ ಮೇಲೆ ಚರ್ಚೆ ಏರ್ಪಡಿಸಿದ್ದು. ಭಾರತದ ಮುಸ್ಲಿಮರಿಗೆ ತುರ್ತು ಅಗತ್ಯ ಇರುವುದು ಮಸೀದಿಗಳಲ್ಲ. ಘನತೆಯಿಂದ ಬದುಕುವ ಆರ್ಥಿಕ ಹಾಗೂ ಸಾಮಾಜಿಕ ಬದುಕು. ರಾಜಕೀಯ ಪ್ರಾತಿನಿಧ್ಯ ಎಂಬುದು ಅವರ ನಂಬಿಕೆ. ಅವರಿಗೆ ಸಾಮಾಜಿಕ ಕ್ರಿಯಾಶೀಲತೆಗೆ ಮತ್ತು ಸಾಮುದಾಯಿಕ ಸಂಘಟನೆಗೆ ತಮ್ಮ ಸಂಶೋಧನೆಯ ಬಲದಿಂದ ಚಿಂತನೆಯ ಚೌಕಟ್ಟು ಕೊಡುವ ವಿಶಿಷ್ಟ ತರಬೇತಿಯಿದೆ. ಚಾರಿತ್ರಿಕ ಅರಿವಿನಿಂದ ಕೂಡಿರುವ ಈ ಚೌಕಟ್ಟಿಗೆ ವರ್ತಮಾನವನ್ನು ಬದಲಿಸುವ ಕಳಕಳಿಯಿದೆ. ಅವರ ಅಧ್ಯಯನಗಳು ಚರಿತ್ರೆ, ಸಮಾಜ ವಿಜ್ಞಾನ, ರಾಜಕೀಯಶಾಸ್ತ್ರ, ಮಾನವಶಾಸ್ತ್ರಗಳ ಬಹುಶಿಸ್ತೀಯ ತಿಳಿವಳಿಕೆಯಿಂದ ರೂಪುಗೊಂಡಿರುವುದೇ ಇದಕ್ಕೆ ಕಾರಣ.

ಅಸ್ಸಾದಿಯವರ ಈ ಬಹುಶಿಸ್ತೀಯ ಮತ್ತು ಜನಪರ ವಿದ್ವತ್ತಿನ ತಾರ್ಕಿಕ ಆಯಾಮವೇ ಅವರು ಪತ್ರಿಕೆಗಳಲ್ಲಿ ಲೇಖನ ಅಂಕಣ ಬರೆಯುವುದು. ಕನ್ನಡದಲ್ಲಿ ಸಾಹಿತ್ಯದ ಹಿನ್ನೆಲೆಯವರಿಗೆ ಹೋಲಿಸಿದರೆ, ಸಮಾಜ ವಿಜ್ಞಾನದ ಹಿನ್ನೆಲೆಯವರು ಕನ್ನಡದಲ್ಲಿ ತಮ್ಮ ತಿಳಿವಳಿಕೆಯನ್ನು ಪತ್ರಿಕೆಗಳಲ್ಲಿ ಹಂಚಿಕೊಳ್ಳುವುದು ಇಲ್ಲವೇ ಟಿವಿ ಚರ್ಚೆಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆ. ಆದರೆ ಅಸ್ಸಾದಿಯವರು ಇದಕ್ಕೆ ಅಪವಾದ. ಅವರ ಪತ್ರಿಕಾ ಲೇಖನಗಳು ಬಹಳ ಜನಪ್ರಿಯವಾಗಿವೆ. ಅವರ ಅಂಕಣ ಬರೆಹಗಳಿಗೆ ಮಾಧ್ಯಮ ಅಕಾಡೆಮಿಯ ಬಹುಮಾನ ಬಂದಿದ್ದು ಸಹಜವಾಗಿವೆ.

ಜೆಎನ್‌ಯು ಮತ್ತು ಶಿಕಾಗೊ ವಿಶ್ವವಿದ್ಯಾಲಯಗಳಲ್ಲಿ ಕಲಿತ, ಮಂಗಳೂರು, ಗೋವಾ ಮತ್ತು ಮೈಸೂರು ವಿಶ್ವವಿದ್ಯಾನಿಲಯಗಳಲ್ಲಿ ನಾಲ್ಕು ದಶಕಗಳ ಕಾಲ ಸಹಸ್ರಾರು ವಿದ್ಯಾರ್ಥಿಗಳಿಗೆ ಕಲಿಸಿದ, ಜಗತ್ತಿನ ಅನೇಕ ವಿಶ್ವವಿದ್ಯಾಲಯಗಳಲ್ಲಿ ಕರ್ನಾಟಕ ಕುರಿತ ತಮ್ಮ ಜ್ಞಾನವನ್ನು ಹಂಚಿಕೊಂಡ, ರಾಜ್ಯಶಾಸ್ತ್ರ ಮತ್ತು ಸಮಾಜ ವಿಜ್ಞಾನಗಳ ತಿಳಿವಳಿಕೆಯನ್ನು ನಾಡಿನ ಓದುಗರಿಗೆ ಅಂಕಣಗಳ ಮೂಲಕ ಉಣಬಡಿಸಿದ ಪ್ರೊ.ಅಸ್ಸಾದಿಯವರು, ಇಂದು (30-8-2023) ಸೇವೆಯಿಂದ ನಿವೃತ್ತರಾಗುತ್ತಿದ್ದಾರೆ. ಅವರ ತಿಳಿವಳಿಕೆಯು, ಸಮಾನತೆಯ ಕರ್ನಾಟಕವನ್ನು ಕಟ್ಟಲು ನೆರವಾಗಿದೆ ಮತ್ತು ಮುಂದೆ ಕೂಡ ನೆರವಾಗಲಿದೆ. ‘ಜ್ಞಾನದ ಬಹುಸ್ತರೀಯ ಅಥವಾ ಜನೋಪಯೋಗಿ ಮಾದರಿ’ ಎಂದೂ ವಿರಮಿಸುವುದಿಲ್ಲ.

ಹಿರಿಯ ಚಿಂತಕ, ಲೇಖಕ ಪ್ರೊ.ಮುಝಫ್ಫರ್ ಅಸ್ಸಾದಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...