Homeಕರ್ನಾಟಕವೈರಲ್ ವಿಡಿಯೊ ನಂತರ ಅಮಾನತುಗೊಂಡಿದ್ದ ಮಧುಗಿರಿ ಡಿವೈಎಸ್ಪಿ ಬಂಧನ

ವೈರಲ್ ವಿಡಿಯೊ ನಂತರ ಅಮಾನತುಗೊಂಡಿದ್ದ ಮಧುಗಿರಿ ಡಿವೈಎಸ್ಪಿ ಬಂಧನ

- Advertisement -
- Advertisement -

ಮಧುಗಿರಿ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಎ.ರಾಮಚಂದ್ರಪ್ಪ(58) ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ಅವರು ತಮ್ಮ ಕಚೇರಿಯಲ್ಲೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್ ಆದ ನಂತರ ಅವರನ್ನು ಅಮಾನತು ಮಾಡಲಾಗಿತ್ತು. ಶನಿವಾರ ಬೆಳಗ್ಗೆ ತುಮಕೂರು ಜಿಲ್ಲೆಯ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದ್ದು, ಪ್ರಸ್ತುತ ಮಧುಗಿರಿ ಜೈಲಿನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ವೈರಲ್ ವಿಡಿಯೊ

ಗುರುವಾರದಂದು ಅವರ ವಿಡಿಯೊ ಹೊರಬಿದ್ದ ಬೆನ್ನಲ್ಲೇ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರನ್ನು ಅಮಾನತುಗೊಳಿಸಿ, ಇಲಾಖಾ ತನಿಖೆಗೆ ಆದೇಶಿಸಿದ್ದರು. ವಿಡಿಯೋದಲ್ಲಿ ಕಾಣಿಸಿಕೊಂಡಿರುವ 30 ವರ್ಷದ ಮಹಿಳೆ ಶುಕ್ರವಾರ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಧಿಕಾರದಲ್ಲಿರುವ ವ್ಯಕ್ತಿಯಿಂದ ಲೈಂಗಿಕ ಸಂಭೋಗ (BNS 68), ಲೈಂಗಿಕ ಕಿರುಕುಳ (BNS 75), ಮತ್ತು ಮಹಿಳೆಯ ಘನತೆಗೆ ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕ್ರಿಯೆ (BNS 79) ಸೇರಿದಂತೆ ಅನೇಕ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೈರಲ್ ವಿಡಿಯೊ

ಪ್ರಕರಣದ ಕುರಿತು ಮಾತನಾಡಿದ ತುಮಕೂರು ಜಿಲ್ಲೆಯ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ., “30 ವರ್ಷದ ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಡಿವೈಎಸ್‌ಪಿಯನ್ನು ಬಂಧಿಸಲಾಗಿದೆ. ಅವರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಹೇಳಿದ್ದಾರೆ.

ಡಿವೈಎಸ್ಪಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಸಮವಸ್ತ್ರದಲ್ಲಿದ್ದಾಗ ಕೃತ್ಯವನ್ನು ಎಸಗಿದ್ದು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ. 35 ಸೆಕೆಂಡುಗಳ ವೀಡಿಯೊವನ್ನು ಅವರ ಕಚೇರಿಯ ಹೊರಗಿನ ಕಿಟಕಿಯ ಮೂಲಕ ರೆಕಾರ್ಡ್ ಮಾಡಲಾಗಿದೆ. ವಿಡಿಯೊ ದಾಖಲೆ ಮಾಡುತ್ತಿರುವುದನ್ನು ಗಮನಿಸಿದ ಮಹಿಳೆಯು ಅಧಿಕಾರಿಗೆ ಎಚ್ಚರಿಸಿದ್ದರು.

ಮಹಿಳೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಡಿವೈಎಸ್ಪಿ ಕಚೇರಿಗೆ ಬಂದಿದ್ದರು ಪೊಲೀಸ್ ಮೂಲಗಳು ತಿಳಿಸಿವೆ ಎಂದು TNIE ವರದಿ ಉಲ್ಲೇಖಿಸಿದೆ. ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಿರುವುದನ್ನು ಖಚಿತಪಡಿಸಿರುವ ಕೇಂದ್ರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಲಾಭು ರಾಮ್, ‘‘ಘಟನೆ ಹಿನ್ನೆಲೆಯಲ್ಲಿ ಡಿವೈಎಸ್ಪಿ ಅವರನ್ನು ಅಮಾನತುಗೊಳಿಸಲಾಗಿದೆ,’’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ದೆಹಲಿ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...