ದಂತೇವಾಡ: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭಾನುವಾರದಂದು ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹತ್ಯೆಯಾಗಿದ್ದು, ಒಬ್ಬ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಮೃತಪಟ್ಟಿದ್ದಾರೆ ಎಂದು ಬಸ್ತಾರ್ ನ ಐಜಿ ಪಿ.ಸುಂದರರಾಜ್ ತಿಳಿಸಿದ್ದಾರೆ.
ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮದ್ ಅರಣ್ಯದಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಐಜಿ ತಿಳಿಸಿದ್ದಾರೆ.
ಶನಿವಾರ ತಡರಾತ್ರಿ ಗುಂಡಿನ ಚಕಮಕಿ ನಿಂತಿದ್ದು, ಸ್ಥಳದಿಂದ ನಾಲ್ವರು ನಕ್ಸಲೀಯರ ಮೃತದೇಹಗಳು, ಎಕೆ-47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ (SLR) ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತಪಟ್ಟ ಹೆಡ್ ಕಾನ್‌ಸ್ಟೆಬಲ್ ಕರಮ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇತ್ತೀಚಿನವರೆಗೂ ಮಾವೋವಾದಿಗಳ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟ ಛತ್ತೀಸಗಡದಲ್ಲಿ ಭದ್ರತಾ ಪಡೆಗಳು ಕಳೆದ ಕೆಲವು ತಿಂಗಳುಗಳಲ್ಲಿ ಅನೇಕ ನಕ್ಸಲೀಯರನ್ನು ಮಟ್ಟಹಾಕಿವೆ.
ಶುಕ್ರವಾರ ಮುಂಜಾನೆ, ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಕಂಡೇಶರ್ ಗ್ರಾಮದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ನಕ್ಸಲೀಯರು ಹತರಾಗಿದ್ದರು. ಎನ್‌ಕೌಂಟರ್ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿತ್ತು.
ಕಳೆದ ವರ್ಷ ಡಿಸೆಂಬರ್‌ನಲ್ಲಿ, ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಇಬ್ಬರು ಕೋಬ್ರಾ ಕಮಾಂಡೋಗಳು ಗಾಯಗೊಂಡಿದ್ದರು.
ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ನೇಂದ್ರ-ಪುನ್ನೂರು ಅರಣ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಸ್ಥಳದಿಂದ ಒಟ್ಟು ಎರಡು 12 ಬೋರ್ ಬಂದೂಕುಗಳು, ನಕ್ಸಲ್ ಸಮವಸ್ತ್ರಗಳು, ಸಾಹಿತ್ಯ, ಸ್ಫೋಟಕಗಳು ಮತ್ತು ಇತರ ನಕ್ಸಲ್ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.


