Homeಮುಖಪುಟಪೂಜಾ ಸ್ಥಳಗಳ ಕಾಯಿದೆಯ ಕಟ್ಟುನಿಟ್ಟಿನ ಅನುಷ್ಠಾನ ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಲಿರುವ ಇಂಡಿಯಾ ಮಿತ್ರಪಕ್ಷಗಳು

ಪೂಜಾ ಸ್ಥಳಗಳ ಕಾಯಿದೆಯ ಕಟ್ಟುನಿಟ್ಟಿನ ಅನುಷ್ಠಾನ ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಲಿರುವ ಇಂಡಿಯಾ ಮಿತ್ರಪಕ್ಷಗಳು

- Advertisement -
- Advertisement -

ಕಾಂಗ್ರೆಸ್, ಸಮಾಜವಾದಿ ಪಕ್ಷ (ಎಸ್‌ಪಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಎಡ ಪಕ್ಷಗಳನ್ನು ಒಳಗೊಂಡಿರುವ ಇಂಡಿಯಾ ಒಕ್ಕೂಟದ ಪಕ್ಷಗಳು, ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಕಾಪಾಡಿಕೊಳ್ಳಲು ಬಯಸುವ 1991 ರ ಪೂಜಾ ಸ್ಥಳಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ವರದಿಯಾಗಿದೆ.

1991 ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಕೋರಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಲ್ಲಿಸಿದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿಸಿದೆ ಮತ್ತು ಫೆಬ್ರವರಿ 17 ರಂದು ಇದೇ ರೀತಿಯ ಅರ್ಜಿಗಳ ಜೊತೆಗೆ ಅವರ ಅರ್ಜಿಯನ್ನು ಆಲಿಸಲು ಕೋರ್ಟ್ ಆದೇಶಿಸಿದೆ. ಪೂಜಾ ಸ್ಥಳಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಡಿಯಾ ಒಕ್ಕೂಟದ ಪಕ್ಷಗಳು ಸುಪ್ರೀಂಕೋರ್ಟ್‌ನಲ್ಲಿ ಜಂಟಿ ಅರ್ಜಿಯನ್ನು ಸಲ್ಲಿಸಲು ಚರ್ಚೆಗಳನ್ನು ನಡೆಸುತ್ತಿದ್ದರೂ, ಅವರು ಇನ್ನೂ ಒಮ್ಮತವನ್ನು ಕಂಡುಕೊಂಡಿಲ್ಲ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಹೇಳಿದೆ. “ಇಂಡಿಯಾ ಒಕ್ಕೂಟದ ಪಕ್ಷಗಳ ಉನ್ನತ ನಾಯಕತ್ವವು ಇನ್ನೂ ಮಾತುಕತೆ ನಡೆಸುತ್ತಿದೆ. ಆದರೆ, ಅವರು ಪ್ರತ್ಯೇಕವಾಗಿ ಅರ್ಜಿಸಲ್ಲಿಸುವ ರೀತಿ ತೋರುತ್ತದೆ” ಎಂದು ನಾಯಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಸುಪ್ರಿಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕಾಂಗ್ರೆಸ್ ದೃಢವಾಗಿದ್ದು, ಪಕ್ಷವು ಸಾಧ್ಯವಾದಷ್ಟು ಬೇಗ ಅರ್ಜಿಯನ್ನು ರಚಿಸುವ ಪ್ರಕ್ರಿಯೆಯಲ್ಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕೇರಳದಲ್ಲಿ ಕಾಂಗ್ರೆಸ್ ಮಿತ್ರಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಕೂಡ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

ಪ್ರಧಾನಮಂತ್ರಿ ಪಿ.ವಿ. ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆಯನ್ನು ತಂದಿತು. ರಾಮಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ಸಂಸತ್ತು ಇದನ್ನು ಅಂಗೀಕರಿಸಿತ್ತು. ಮುಂದಿನ ವಾರ ಪಕ್ಷವು ಸುಪ್ರೀಂಕೋರ್ಟ್‌ಗೆ ತೆರಳಲಿದೆ ಎಂದು ಎಂದು ಸಮಾಜವಾಗಿ ಪಕ್ಷದ ಮೂಲಗಳು ತಿಳಿಸಿವೆ.

ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಆರಾಧನಾ ಸ್ಥಳಗಳ ಕಾಯಿದೆಯ ಬಗ್ಗೆ ಪಕ್ಷದ ಬದ್ಧತೆಯನ್ನು ಒತ್ತಿಹೇಳಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ಇಂಡಿಯಾ ಒಕ್ಕೂಟದ ಮತ್ತೊಂದು ಪಕ್ಷವಾದ ಆರ್‌ಜೆಡಿ ರಾಜ್ಯಸಭಾ ಸಂಸದ ಮನೋಜ್ ಝಾ ಅವರು 1991 ರ ಕಾಯಿದೆಯನ್ನು ಜಾರಿಗೊಳಿಸುವಂತೆ ಕೋರಿ ಡಿಸೆಂಬರ್‌ನಲ್ಲಿ ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಪಕ್ಷವು ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯಲ್ಲಿದೆ ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ಸಿಪಿಐ(ಎಂ) ಕೂಡ ಪ್ರತ್ಯೇಕ ಅರ್ಜಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ಪಿತಾಂಪುರ್ ಪ್ರತಿಭಟನೆ ಹಿನ್ನಲೆ | ಭೋಪಾಲ್‌ನ ವಿಷಕಾರಿ ತ್ಯಾಜ್ಯ ದಹನ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...