Homeಮುಖಪುಟರಾಯಚೂರು | ರಿಮ್ಸ್‌ನಲ್ಲಿ ಮತ್ತೊಬ್ಬರು ಬಾಣಂತಿ ಸಾವು : ಮೂರು ತಿಂಗಳಲ್ಲಿ 12 ಮಂದಿ ಮೃತ

ರಾಯಚೂರು | ರಿಮ್ಸ್‌ನಲ್ಲಿ ಮತ್ತೊಬ್ಬರು ಬಾಣಂತಿ ಸಾವು : ಮೂರು ತಿಂಗಳಲ್ಲಿ 12 ಮಂದಿ ಮೃತ

- Advertisement -
- Advertisement -

ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಜನವರಿ 5ರಂದು ಮತ್ತೊಬ್ಬರು ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ರಾಯಚೂರು ರಿಮ್ಸ್ ಆಸ್ಪತ್ರೆಯಲ್ಲಿ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಾಣಂತಿ ಸರಸ್ವತಿ (24 ) ಮೃತಪಟ್ಟಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಜನವರಿ 2ರಂದು ಸರಸ್ವತಿ ಅವರಿಗೆ ಸಿಸೇರಿಯನ್ ಹೆರಿಗೆಯಾಗಿತ್ತು. ನಂತರ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜನವರಿ 5ರಂದು ಅವರು ಸಾವನ್ನಪ್ಪಿದ್ದಾರೆ. ಸದ್ಯ ವೆಂಟಿಲೇಟರ್‌ನಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರಿದಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ ಬಳಿಕ ಸರಸ್ವತಿ ಕೊನೆಯುಸಿರೆಳೆದಿದ್ದಾರೆ.

ವರದಿಯ ಪ್ರಕಾರ, ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಸಾವನ್ನಪ್ಪಿದ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 5 ಮಂದಿ ರಿಮ್ಸ್ ಆಸ್ಪತ್ರೆಯಲ್ಲೇ ಸಾವಿಗೀಡಾಗಿದ್ದಾರೆ.

ಸಿಸೇರಿಯನ್ ಹೆರಿಗೆಗೆ ಒಳಗಾಗಿದ್ದ ಬಾಣಂತಿಯೊಬ್ಬರು ಹೊಸ ವರ್ಷದ ಮೊದಲ ದಿನದಂದೇ  ಸಾವನ್ನಪ್ಪಿದ್ದರು. ದೇವದುರ್ಗ ತಾಲೂಕಿನ ಮಸೀದಾಪೂರ ಗ್ರಾಮದ ಶಿವಲಿಂಗಮ್ಮ (22) ಮೃತ ಮಹಿಳೆ. ಚೊಚ್ಚಲ ಹೆರಿಗೆಯ ಬಳಿಕ ಕೊನೆಯುಸಿರೆಳದ ಈಕೆಯನ್ನು ಡಿಸೆಂಬರ್ 27ರಂದು ಮಾನವಿ ಆಸ್ಪತ್ರೆಯಿಂದ ರಿಮ್ಸ್ ದಾಖಲಿಸಲಾಗಿತ್ತು.

ಇದನ್ನೂ ಓದಿ : ಬೆಂಗಳೂರು| ಟ್ರಾವೆಲ್ ಹಿಸ್ಟರಿ ಇಲ್ಲದ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...