Homeಮುಖಪುಟಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿ; ಕ್ರಮ ಕೈಗೊಳ್ಳಲು ಮಧ್ಯಪ್ರದೇಶ ಸರ್ಕಾರಕ್ಕೆ 6 ವಾರಗಳ ಕಾಲಾವಕಾಶ

- Advertisement -
- Advertisement -

ಯೂನಿಯನ್ ಕಾರ್ಬೈಡ್ ಫ್ಯಾಕ್ಟರಿ ತ್ಯಾಜ್ಯದ ಬಗ್ಗೆ ಸುರಕ್ಷತಾ ಪ್ರೋಟೋಕಾಲ್‌ಗಳ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜೊತೆಗೆ, ಮಾಧ್ಯಮಗಳು ಈ ಬಗ್ಗೆ ತಪ್ಪು ಸುದ್ದಿ ನೀಡುವುದನ್ನು ನಿಷೇಧಿಸಿದೆ.

ಸೋಮವಾರ ನಡೆದ ವಿಚಾರಣೆಯಲ್ಲಿ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಶಾಂತ್ ಸಿಂಗ್, ಕಂಟೈನರ್‌ಗಳು ತ್ಯಾಜ್ಯವನ್ನು ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವಂತಿಲ್ಲ ಮತ್ತು ಪಿತಾಂಪುರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ ನಂತರ ಅವುಗಳನ್ನು ಇಳಿಸಲು ಅನುಮತಿ ಕೋರಿದ್ದೇವೆ ಎಂದು ಹೇಳಿದರು.

ಯೂನಿಯನ್ ಕಾರ್ಬೈಡ್ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಕಾಲ್ಪನಿಕ ಮತ್ತು ನಕಲಿ ಸುದ್ದಿಗಳಿಂದಾಗಿ ಪಿತಾಂಪುರ ಟೌನ್‌ಶಿಪ್‌ನಲ್ಲಿ ಅಶಾಂತಿ ಉಂಟಾಗಿದೆ ಎಂದು ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಪೀಠವು, ಈ ವಿಷಯದ ಬಗ್ಗೆ ಯಾವುದೇ ತಪ್ಪು ಸುದ್ದಿಗಳನ್ನು ಪ್ರಸಾರ ಮಾಡದಂತೆ ಮುದ್ರಣ, ರೇಡಿಯೋ ಮತ್ತು ದೃಶ್ಯ ಮಾಧ್ಯಮವನ್ನು ನಿರ್ಬಂಧಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಭೋಪಾಲ್‌ನಿಂದ ಪಿತಾಂಪುರಕ್ಕೆ ಸ್ಥಳಾಂತರಿಸಲಾದ ತ್ಯಾಜ್ಯವನ್ನು 12 ಮುಚ್ಚಿದ ಕಂಟೈನರ್‌ಗಳಲ್ಲಿ ಇಳಿಸಲು ರಾಜ್ಯವು ಮೂರು ದಿನಗಳ ಕಾಲಾವಕಾಶವನ್ನು ಕೋರಿತು. ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ತ್ಯಾಜ್ಯವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ರಾಜ್ಯದ ಆದ್ಯತೆಯಾಗಿದೆ ಎಂದು ಹೇಳಿದೆ.

ವಿಚಾರಣೆಯಲ್ಲಿ, ಅರ್ಜಿದಾರರ ಪರ ವಕೀಲ ಅಭಿನವ್ ಧನೋಡ್ಕರ್ ಅವರು ವಿಷಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದರಿಂದ ಪಿತಾಂಪುರ, ಮೋವ್ ಮತ್ತು ಧಾರ್ ನಿವಾಸಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಮೂರು ಹಂತಗಳಲ್ಲಿ ತ್ಯಾಜ್ಯವನ್ನು ನಾಶಪಡಿಸುವ ಕುರಿತು ಸರ್ಕಾರವು ಚರ್ಚಿಸಿದ್ದು, ತ್ಯಾಜ್ಯವನ್ನು ಸುಡುವುದರಿಂದ ಮಾರಣಾಂತಿಕ ರೋಗಗಳು ಹರಡುವುದಲ್ಲದೆ ಭೂಮಿ ಮತ್ತು ನೀರನ್ನು ಕಲುಷಿತಗೊಳಿಸುತ್ತದೆ, ಇದು ಹಾನಿಕಾರಕವಾಗಿದೆ ಎಂದು ಧನೋದ್ಕರ್ ಹೇಳಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸುರೇಶ್, ಮುಂದಿನ ವಿಚಾರಣೆಯ ದಿನಾಂಕವಾಗಿ ಫೆಬ್ರವರಿ 18, ಅಂದರೆ ಆರು ವಾರಗಳ ನಂತರ ನಿರ್ಧರಿಸಲಾಗುತ್ತದೆ.

ಡಿಸೆಂಬರ್ 2-3, 1984 ರ ಮಧ್ಯರಾತ್ರಿಯಲ್ಲಿ, ಭೋಪಾಲ್‌ನ ಯೂನಿಯನ್ ಕಾರ್ಬೈಡ್ ಕೀಟನಾಶಕ ಕಾರ್ಖಾನೆಯಿಂದ ಮೀಥೈಲ್ ಐಸೊಸೈನೇಟ್ (ಎಂಐಸಿ) ಅನಿಲ ಸೋರಿಕೆಯಾಯಿತು. ಇದರಿಂದ ಕನಿಷ್ಠ 5,479 ಜನರ ಸಾವಿಗೆ ಕಾರಣವಾಯಿತು. ಸಾವಿರಾರು ಜನರು ಗಂಭೀರವಾದ ಗಾಯಗಳು ಮತ್ತು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಡಿಸೆಂಬರ್ 3, 2024 ರಂದು ಕೊನೆಯ ವಿಚಾರಣೆಯ ಸಂದರ್ಭದಲ್ಲಿ, ನಿಷ್ಕ್ರಿಯಗೊಂಡ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ ಬಿದ್ದಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಲು ವಿಫಲವಾದ ಕಾರಣಕ್ಕಾಗಿ ಹೈಕೋರ್ಟ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.

ಅನಿಲ ದುರಂತದ 40 ವರ್ಷಗಳ ನಂತರವೂ ಅಧಿಕಾರಿಗಳು “ಜಡತ್ವದ ಸ್ಥಿತಿಯಲ್ಲಿ” ಇದ್ದಾರೆ, ಅದು ಮತ್ತೊಂದು ದುರಂತಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ.

ನಾಲ್ಕು ವಾರಗಳಲ್ಲಿ ಸ್ಥಳದಿಂದ ತ್ಯಾಜ್ಯವನ್ನು ತೆಗೆದು ಸಾಗಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿತ್ತು. ನಿರ್ದೇಶನವನ್ನು ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಯ ಎಚ್ಚರಿಕೆ ನೀಡಿತು.

ಮುಖ್ಯಮಂತ್ರಿ ಮೋಹನ್ ಯಾದವ್ ಮಾತನಾಡಿ, “ನಾವು ಜನರಿಗೆ ಏನು ಹೇಳಿದ್ದೇವೆ, ಅದನ್ನೇ ಹೈಕೋರ್ಟ್‌ನಲ್ಲಿ ಪುನರಾವರ್ತಿಸಿದ್ದೇವೆ. ನಾವು ಯೂನಿಯನ್ ಕಾರ್ಬೈಡ್ ತ್ಯಾಜ್ಯವನ್ನು ಹೈಕೋರ್ಟ್‌ನ ನಿರ್ದೇಶನದಂತೆ ಪಿತಾಂಪುರಕ್ಕೆ ಸ್ಥಳಾಂತರಿಸಿದ್ದೇವೆ ಎಂದು ಹೇಳಿದ್ದೇವೆ” ಎಂದರು.

“ಕಕ್ಷಿದಾರರ ವಾದ ಆಲಿಸಿದ ನಂತರ, ಹೈಕೋರ್ಟ್ ಅವರ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಅದರ ತೀರ್ಪಿಗೆ ನಾನು ಗೌರವಾನ್ವಿತ ಹೈಕೋರ್ಟಿಗೆ ಧನ್ಯವಾದ ಹೇಳುತ್ತೇನೆ. ಸರ್ಕಾರದ ಉದ್ದೇಶವನ್ನು ತಿಳಿದುಕೊಂಡ ನಂತರ ಹೈಕೋರ್ಟ್ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.. ನಾವು ಗೌರವಾನ್ವಿತ ಹೈಕೋರ್ಟ್ ಅನ್ನು ಸಂಪರ್ಕಿಸಿದ ನಂತರವೇ ಮುಂದುವರಿಯುತ್ತೇವೆ. ಗೌರವಾನ್ವಿತ ಹೈಕೋರ್ಟನ್ನು ನಾವೆಲ್ಲರೂ ನಂಬುತ್ತೇವೆ; ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಕೇಳುತ್ತೇವೆ ಎಂದು ನಾನು ಹೇಳಲು ಬಯಸುತ್ತೇನೆ, ಆದ್ದರಿಂದ ಸ್ಥಳೀಯರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಕೋರುತ್ತೇನೆ” ಎಂದು ಯಾದವ್ ಹೇಳಿದರು.

ಜನವರಿ 1 ರ ಸಂಜೆ, ಭೋಪಾಲ್ ಗ್ಯಾಸ್ ಫ್ಯಾಕ್ಟರಿಯಿಂದ 358 ಮೆಟ್ರಿಕ್ ಟನ್ ತ್ಯಾಜ್ಯವನ್ನು ಹೊಂದಿರುವ 12 ಕಂಟೇನರ್‌ಗಳನ್ನು ಭೋಪಾಲ್‌ನಿಂದ ಪಿತಾಂಪುರಕ್ಕೆ ಸಾಗಿಸಲಾಯಿತು. ಅಲ್ಲಿ ಅವುಗಳನ್ನು ರಾಮ್ಕಿ ಎನ್ವಿರೋ ಇಂಡಸ್ಟ್ರೀಸ್ ಸುಡಬೇಕಿತ್ತು. ಪಿತಾಂಪುರದ ಜನರು ಮತ್ತು ಸ್ಥಳೀಯ ಸಂಸ್ಥೆಗಳು ಈ ತ್ಯಾಜ್ಯವು ಅಲ್ಲಿಗೆ ಬಂದಾಗಿನಿಂದಲೂ ವಿರೋಧಿಸುತ್ತಿವೆ.

ಪ್ರತಿಭಟನೆಗಳು ಹೆಚ್ಚಾದ ನಂತರ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಜನವರಿ 3 ರಂದು ಉನ್ನತ ಮಟ್ಟದ ಸಭೆಯನ್ನು ಕರೆದರು. ಅಲ್ಲಿ ಸದ್ಯಕ್ಕೆ ತ್ಯಾಜ್ಯವನ್ನು ಸುಡುವುದಿಲ್ಲ ಮತ್ತು ಎಲ್ಲಾ ವಿಷಯಗಳನ್ನು ಹೈಕೋರ್ಟ್‌ಗೆ ತರಲಾಗುವುದು ಎಂದು ನಿರ್ಧರಿಸಲಾಯಿತು. ಜನರು ಮತ್ತು ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಮಾತನಾಡುವ ಮೂಲಕ ಅವರ ಮನವೊಲಿಸುವುದಕ್ಕೆ ಸರ್ಕಾರ ಮತ್ತು ಆಡಳಿತ ನಿರ್ಧರಿಸಿದೆ.

ಇದನ್ನೂ ಓದಿ; ಚೀನಾ, ಟಿಬೆಟ್‌ನಲ್ಲಿ ಪ್ರಬಲ ಭೂಕಂಪನ; 30ಕ್ಕೂ ಹೆಚ್ಚು ಜನರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...