ಯುವತಿಯೊಬ್ಬರಿಗೆ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸೋಮಶೇಖರ್ ಅಲಿಯಾಸ್ ಜಿಮ್ ಸೋಮ ವಿರುದ್ದ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.
ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 26 ವರ್ಷದ ಯುವತಿ ನೀಡಿರುವ ದೂರು ಆಧರಿಸಿ ಅಶೋಕನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆಯ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಈ ಸಮಯದಲ್ಲಿ ಯುವತಿ ಸೋಮಶೇಖರ್ ಬಳಿ ಮದುವೆಗಾಗಿ 6 ಲಕ್ಷ ರೂಪಾಯಿ ಹಣದ ಸಹಾಯ ಕೇಳಿದ್ದರು.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಣ ಕೊಡುವುದಾಗಿ ಸಂತ್ರಸ್ತೆಯನ್ನು ಬೆಂಗಳೂರಿನ ಆಕೆಯ ಪಿಜಿಯಿಂದ ಲ್ಯಾಂಗ್‌ಫೋರ್ಡ್ ರಸ್ತೆಯ ತನ್ನ ಫ್ಲ್ಯಾಟ್‌ಗೆ ಕರೆದೊಯ್ದ ಸೋಮಶೇಖರ್ ಮದ್ಯಕುಡಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ತನ್ನ ದುಷ್ಕೃತ್ಯದ ಕುರಿತು ಯಾರಿಗೂ ಹೇಳದಂತೆ ಆರೋಪಿ ಸೋಮಶೇಖರ್ ಬೆದರಿಕೆ ಹಾಕಿದ್ದರು. ಘಟನೆ ನಡೆದು ಮೂರು ತಿಂಗಳ ಬಳಿಕ ಯುವತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಸೋಮಶೇಖರ್ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಆರೋಪಿ ಸೋಮಶೇಖರ್ 2018ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.
ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್, ಮತ್ತಿತರ ಆರೋಪಿಗಳ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ


