ಚಿಕ್ಕಮಗಳೂರು: ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾವೋವಾದಿ ಹೋರಾಟಗಾರರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ತಮ್ಮ ಶರತ್ತುಗಳನ್ನು ಸರ್ಕಾರದ ಮುಂದಿರುವ ನಕ್ಸಲ್ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದಾರೆ.

ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ. “ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂಧ್ರ ಪ್ರದೇಶದ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗುವುದಾಗಿ ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ಆರು ಮಂದಿ ನಕ್ಸಲ್ ಹೋರಾಟಗಾರರು ಬುಧವಾರ (ಜ.8) ಸರ್ಕಾರದ ಎದುರು ಶರಣಾಗಲಿದ್ದಾರೆ. ಅವರಿಗೆ ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು” ಎಂದು ಸರ್ಕಾರ ತಿಳಿಸಿದೆ.
ನಕ್ಸಲ್ ಮುಖಂಡ ವಿಕ್ರಮ್ ಗೌಡ ಎನ್‌ಕೌಂಟರ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಎನ್‌ಕೌಂಟರ್ ನಕಲಿ ಎಂಬ ಆರೋಪಗಳು ಕೇಳಿ ಬಂದಿದ್ದವು.
ಮಾವನಹಕ್ಕುಗಳ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು. ಎನ್‌ಕೌಂಟರ್ ಪರಿಹಾರವಲ್ಲ, ನಕ್ಸಲರನ್ನು ಶರಣಾಗತಿ ಮಾಡಿಸಿ ಅವರಿಗೆ ಸೂಕ್ತ ಪರಿಹಾರದ ಪ್ಯಾಕೇಜ್ ನೀಡಬೇಕು ಎಂದು ಮನವಿ ಮಾಡಿದ್ದರು.
ಸಿಎಂ ಸಿದ್ದರಾಮಯ್ಯ ಅವರು ನಕ್ಸಲರು ಶರಣಾಗುವಂತೆ ಮನವಿ ಮಾಡಿದ್ದರು. ಹಿಂಸಾತ್ಮಕ ಚಟುವಟಿಕೆಗಳನ್ನು ತೊರೆದು ಸಮಾಜದ ಮುಖ್ಯವಾಹಿನಿಗೆ ಬಂದರೆ ಸೂಕ್ತ ಪರಿಹಾರ ಪ್ಯಾಕೇಜ್ ನೀಡಲಾಗುವುದು ಎಂದು ಭರವಸೆ ನೀಡಿದ್ದರು.
ಪತ್ರಿಕಾ ಹೇಳಿದ್ದ ನೀಡಿದ್ದ ಸಿಎಂ, “ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲಿಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾದರೆ, ಆ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ” ಎಂದಿದ್ದರು.
ಶರಣಾಗುವ ನಕ್ಸಲರು ಮುಖ್ಯವಾಹಿನಿಗೆ ಬಂದರೆ ತಮ್ಮ ಆತ್ಮಗೌರವಕ್ಕೆ ಯಾವುದೇ ಧಕ್ಕೆ ಆಗಬಾರದು ಮತ್ತು ಹೋರಾಟದ ಮಾರ್ಗವನ್ನು ಬದಲಾಯಿಸಿ ಪ್ರಜಾತಾಂತ್ರಿಕ ಚಟುವಟಿಕೆಗಳನ್ನು ತೊಡಗಿಸಿಕೊಳ್ಳಲು ತಡೆಯಾಗಬಾರದು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಜಾಮೀನಿನ ಮೇಲೆ ಹೊರಬರಲು ಸಹಕಾರ : ಶರಣಾಗುವ ನಕ್ಸಲರ ಮೇಲೆ ಹಲವು ಪ್ರಕರಣಗಳಿದ್ದು, ಜೈಲಿನಲ್ಲೇ ಕೊಳೆಯುವ ಪರಿಸ್ಥಿತಿ ಎದುರಾಗಬಾರದು. ಮುಖ್ಯವಾಹಿನಿಗೆ ಬಂದ ಬಳಿಕ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕಾರ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಮುಂದಿನ ಜೀವನದ ದೃಷ್ಟಿಯಿಂದ ಆರ್ಥಿಕ ನೆರವಿನ ಮನವಿಯನ್ನು ಮಾಡಿದ್ದಾರೆ ಎಂಬ ಮಾಹಿತಿ ಇದೆ.
ಸರ್ಕಾರಿ ದಾಖಲೆಗಳಲ್ಲಿ ದಲಿತ ಯುವಕನನ್ನು ಸಾಯಿಸಿ ಮಾಡಿದ್ದೇನು ಗೊತ್ತೇ?


