Homeಕರ್ನಾಟಕಚಿಕ್ಕಮಗಳೂರು| 'ಶಾಂತಿಗಾಗಿ ನಾಗರಿಕ ವೇದಿಕೆ' ನೇತೃತ್ವದಲ್ಲಿ ನಕ್ಸಲ್ ನಾಯಕರ ಶರಣಾಗತಿಗೆ ಕ್ಷಣಗಣನೆ

ಚಿಕ್ಕಮಗಳೂರು| ‘ಶಾಂತಿಗಾಗಿ ನಾಗರಿಕ ವೇದಿಕೆ’ ನೇತೃತ್ವದಲ್ಲಿ ನಕ್ಸಲ್ ನಾಯಕರ ಶರಣಾಗತಿಗೆ ಕ್ಷಣಗಣನೆ

- Advertisement -
- Advertisement -

ಕಳೆದ ವರ್ಷ ನಕ್ಸಲ್ ನಾಯಕ ವಿಕ್ರಂಗೌಡ ಹತ್ಯೆ ನಂತರ, ಉಳಿದ ನಕ್ಸಲ್ ಹೋರಾಟಗಾರರ ಜೀವದ ಬಗ್ಗೆ ರಾಜ್ಯದ ನಾಗರೀಕರು ಆತಂಕ ವ್ಯಕ್ತಪಡಿಸಿದ್ದರು. ಇದೀಗ ಉಳಿದ ಆರು ಜನ ಹೋರಾಟಗಾರರು ಇಂದು ಶರಣಾಗುತ್ತಿದ್ದು, ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ಅವರ ನೇತೃತ್ವದಲ್ಲಿ ರಚನೆಯಾದ ‘ಶಾಂತಿಗಾಗಿ ನಾಗರಿಕ ವೇದಿಕೆ’ ಇದರ ನೇತೃತ್ವ ವಹಿಸಿದೆ.

ನಕ್ಸಲ್ ಶರಣಾಗತಿ ರಾಜ್ಯ ಸರ್ಕಾರ ಕರೆ ನೀಡಿದ ಬಳಿಕ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಇಂದು ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದೆ ಶರಣಾಗತಿಗೆ ಕ್ಷಣಗಣನೆ ಆರಂಭವಾಗಿದೆ.

ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ತೂರು, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶ್ 2024ರ ನಕ್ಸಲ್ ಶರಣಾಗತಿ ಪ್ಯಾಕೇಜ್‌ನಡಿ ಸಮಾಜದ ಮುಖ್ಯವಾಹಿಗೆ ಬರುವುದು ಬಹುತೇಕ ಖಚಿತವಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ಸಮೀಪದಲ್ಲಿ ನಕ್ಸಲ್ ಮುಖಂಡ ವಿಕ್ರಮ್ ಗೌಡ ಎನ್‌ಕೌಂಟರ್ ಬಳಿಕ ಭೂಗತರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ನಕ್ಸಲ್ ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನಕ್ಸಲ್ ನಾಯಕರು ಮುಖ್ಯವಾಹಿನಿಗೆ ಬರಬೇಕು ಎಂದು ಕರೆಕೊಟ್ಟಿದ್ದರು.

ತಾವು ಮುಖ್ಯವಾಹಿನಿಗೆ ಬರುವ ಕುರಿತು ಮುಂಡಗಾರು ಲತಾ ಅವರು ಸಮಿತಿ ಸದಸ್ಯರ ಮುಂದೆ ಮಾತನಾಡಿ, “ಕರ್ನಾಟಕ, ತಮಿಳುನಾಡು ಹಾಗೂ ಕೇರಳದ ಆರು ಜನ ಕಾಮ್ರೇಡ್‌ಗಳು ಮುಖ್ಯವಾಹಿನಿಗೆ ಬರಬೇಕು ಎಂದುಕೊಂಡಿದ್ದೇವೆ. ಸಕಾರಾತ್ಮಕವಾಗಿ ಯೋಚಿಸಿ ನಿರ್ಧಾರ ಮಾಡಿದ್ದೇವೆ” ಎಂದಿದ್ದಾರೆ.

“ಮೊದಲ ಹಂತದಲ್ಲಿ ನಾವು ಒಂದು ಕಡೆ ಸೇರಿ ಚರ್ಚಿಸಿದ್ದೇವೆ. ಈಗ ಎರಡನೇ ಹಂತದಲ್ಲಿ ಮುಖ್ಯವಾಹಿನಿಗೆ ಬರಲು ಉತ್ಸುಕರಾಗಿದ್ದೇವೆ. ಎರಡು ಸಮತಿಯವರು ನಮ್ಮನ್ನು ಬಂದು ಭೇಟಿಯಾಗಿದ್ದಾರೆ. ಸರ್ಕಾರದ ನಿರ್ಧಾರಗಳ ಬಗ್ಗೆ ಮನವರಿಕೆ ಮಾಡಿದ್ದಾರೆ. ಸಮಿತಿಯವರ ಮಾತುಗಳ ನಮಗೆ ಖುಷಿ ತಂದಿವೆ. ನಾವೆಲ್ಲ ಕಾಮ್ರೇಡ್‌ಗಳು ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಡುತ್ತೇವೆ. ಸರ್ಕಾರ ನಮ್ಮ ಭರವಸೆ ಈಡೇರಿಸುತ್ತದೆ ಎಂಬ ವಿಶ್ವಾಸ ನಮಗಿದೆ. ಸಮಿತಿಯ ಸದಸ್ಯರು ಸಾಕಷ್ಟು ಶ್ರಮ ಹಾಕಿ ನಮ್ಮನ್ನು ಮುಖ್ಯವಾಹಿನಿಗೆ ಕರೆತರಲು ಶ್ರಮಿಸಿದ್ದಾರೆ. ಅವರ ಮಾತಿಗೆ ಬೆಲೆ ಕೊಡುತ್ತೇವೆ. ಪ್ರಜಾತಾಂತ್ರಿಕವಾಗಿ ಮತ್ತು ಸಂವಿಧಾನಾತ್ಮಕವಾಗಿ ಹೋರಾಟ ಮುಂದುವರಿಯುತ್ತದೆ. ಜನರ ಪರವಾಗಿ ನಾವು ಕೊನೆ ತನಕ ನಿಲ್ಲುತ್ತೇವೆ. ಈ ವಿಚಾರದಲ್ಲಿ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ನಮ್ಮ ಉಸಿರು ಇರೋವರೆಗೂ ನಮ್ಮ ಹೋರಾಟ ಇರಲಿದೆ” ಎಂದು ಮುಂಡಗಾರು ಲತಾ ಸ್ಪಷ್ಟಪಡಿಸಿದ್ದಾರೆ.

ಶರಣಾಗುವ ನಕ್ಸಲರು ಯಾರು?

ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ)
ವನಜಾಕ್ಷಿ (ಬಾಳೆಹೊಳೆ ಕಳಸ)
ಸುಂದರಿ (ಕುಂತಲೂರು ದಕ್ಷಿಣ ಕನ್ನಡ)
ಮಾರಪ್ಪ ಅರೋಳಿ (ಕರ್ನಾಟಕ)
ವಸಂತ ಟಿ (ತಮಿಳುನಾಡು)
ಎನ್. ಜೀಶಾ (ಕೇರಳ)

ಶರಣಾಗುತ್ತಿರುವ ನಕ್ಸಲ್‌ ಕಾರ್ಯಕರ್ತರ ಸಂಕ್ಷಿಪ್ತ ಪರಿಚಯ

ಲತಾ ಮುಂಡಗಾರು: ಶೃಂಗೇರಿ ತಾಲೂಕಿನ ಲತಾ ಮಂಡಗಾರು ಬಡ ಆದಿವಾಸಿ ದಂಪತಿಯ ದೊಡ್ಡ ಕುಟುಂಬದ ಹೆಣ್ಣುಮಗಳು ಬಡತನ ಹಾಗೂ ಶಾಲೆಯ ಮಾಸ್ತರರ ಕಿರುಕುಳಗಳಿಂದಾಗಿ 6ನೆಯ ತರಗತಿಗೆ ಓದು ನಿಲ್ಲಿಸಿದರು. ಅಂತ್ಯದ ನೂರಾರು ಆದಿವಾಸಿ ಕುಟುಂಬಗಳಂತೆಯೇ ಈ ಕುಟುಂಬವು ಸಹ ಕುದುರೆಮುಖ ರಾಷ್ಟ್ರೀಯ ಉದ್ಯಾನ ಯೋಜನೆಯಡಿ ಮನೆ ಕಳೆದುಕೊಳ್ಳುವ ಪರಿಸ್ಥಿತಿ ಬಂದಾಗ ಅದರ ವಿರುದ್ಧದ ಹೋರಾಟ ನಡೆಸುತ್ತಿದ್ದ ಚಳುವಳಿಯ ಭಾಗವಾದರು ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಬೆಲೆ ನೀಡದ ಸರ್ಕಾರದ ಧೋರಣೆಗೆ ಬೇಸತ್ತು 2000ರಲ್ಲಿ 18ನೇ ವಯಸ್ಸಿನಲ್ಲಿ ಸಶಸ್ತ್ರ ಹೋರಾಟಕ್ಕೆ ಧುಮುಕಿ ಅಂದಿನಿಂದ ಕರ್ನಾಟಕ ಹಾಗೂ ಕೇರಳಗಳಲ್ಲಿ ಸಂಚರಿಸುವ ದಳದ ಭಾಗವಾಗಿದ್ದು ಇಂದು ಮತ್ತೆ ಜನಪದ ಚಳುವಳಿಗಳಲ್ಲಿ ಪ್ರಜಾತಂತ್ರವಾಗಿ ಹೋರಾಟಗಳನ್ನು ನಡೆಸಲು ಮುಖ್ಯವಾಹಿನಿಯ ಭಾಗವಾಗುತ್ತಿದ್ದಾರೆ. ಕೇವಲ 6ನೇ ತರಗತಿಯವರೆಗೆ ಓದಿರುವ ಲತಾರವರು ಯೋಜನೆಗಳ ಸ್ಪಷ್ಟತೆ ಹಾಗೂ ಬದ್ಧತೆ ಬೆರಗು ಹುಟ್ಟಿಸುವಂಥದ್ದು. ಈಗಿನ ನಕ್ಸಲ್ ತಂಡದ ನಾಯಕಿ ಎಂದು ಹೇಳಬಹುದು.

ಸುಂದರಿ ಕುತ್ಲೂರು: ಸುಂದರಿಯೂ ಸಹ ಲತಾ ರೀತಿಯಲ್ಲಿ ಆದಿವಾಸಿ ಮಹಿಳೆ. ಐದು ಜನರು ಮಕ್ಕಳಲ್ಲಿ ಆರನೆಯವರು ಬಡತನ ಹಾಗೂ ಶಾಲೆ ದೂರವಿದ್ದುದರಿಂದ ಮೂರನೆಯ ತರಗತಿಯ ನಂತರ ಶಾಲೆ ತೊರೆದರು. ಇವರ ಕುಟುಂಬವೂ ಸಹ ಕುದುರೆಮುಖ ರಾಷ್ಟ್ರೀಯ ಉದ್ಯಾನ ಯೋಜನೆಯಿಂದಾಗಿ ತನ್ನ ಎಲ್ಲವನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಿದ್ದರು. ಪ್ರಜಾಸತ್ತಾತ್ಮಕ ಚಳುವಳಿ ಫಲ ನೀಡದೆಂದು ಕಂಡಾಗ ಆಗಿನ ಹಲವರು ಯುವಜನರಂತೆ ಸುಂದರಿಯೂ ಸಹ ಆಯುಧವನ್ನು ಕೈಗೆತ್ತಿಕೊಂಡರು. ತನ್ನ 19ನೆಯ ವಯಸ್ಸಿನಲ್ಲಿ 2004ರಲ್ಲಿ ಮಾವೋವಾದಿ ಪಕ್ಷದ ಸದಸ್ಯರಾಗಿದ್ದು ಅಂದಿನಿಂದ ಕೇರಳ ಹಾಗೂ ಕರ್ನಾಟಕದಲ್ಲಿ ಸಂಚರಿಸುತ್ತಿರುವ ದಳದ ಭಾಗವಾಗಿದ್ದರು. ತನ್ನ ಹಾಗೂ ನೆರೆಹೊರೆಯ ಕುಟುಂಬಗಳ ಮೇಲೆ ಪೊಲೀಸರು ನಡೆಸುತ್ತಿದ್ದ ದಾಳಿಗಳು ದೌರ್ಜನ್ಯಗಳನ್ನು ಇಂದಿಗೂ ನೋವಿನಿಂದ ನೆನಪಿಸಿಕೊಳ್ಳುವ ಸುಂದರಿ ತನ್ನ ಹೋರಾಟದ ಕೆಚ್ಚನ್ನು ಉಳಿಸಿಕೊಂಡಿದ್ದು ಇನ್ನು ಮುಂದೆ ಪ್ರಜಾತಾಂತ್ರಿಕ ಚಳುವಳಿಗಳ ಭಾಗವಾಗಲು ಮುಖ್ಯ ವಾಹಿನಿಯನ್ನು ಸೇರಬಯಸಿದ್ದಾರೆ.

ವನಜಾಕ್ಷಿ: ವನಜಾಕ್ಷಿ ಎಸ್ ಎಸ್ ಎಲ್ ಸಿ ವರೆಗೂ ಓದಿರುವ ಇವರು ಈ ತಂಡದ ಅತಿ ಹಿರಿಯ ಸದಸ್ಯ 1985 ರಲ್ಲಿ ಓದು ನಿಲ್ಲಿಸಿದ ಈ ಆದಿವಾಸಿ ಮಹಿಳೆ ತನ್ನ ಗ್ರಾಮದಲ್ಲಿ ಸಾರ್ವಜನಿಕ ಜೀವನದ ಭಾಗವಾಗಿ 1992 ಮತ್ತು 1997ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಎಂಟು ಜನ ಮಕ್ಕಳ ದೊಡ್ಡ ಕುಟುಂಬದ ಹೆಣ್ಣು ಮಗಳಾಗಿ ಟೈಪ ರೈಟಿಂಗ್ ಕಲಿತು ಹೊಲಿಗೆಯನ್ನು ಜೀವ ಜೀವನಾಧಾರವಾಗಿಸಿಕೊಂಡರು. ರಾಜಕೀಯವಾಗಿ ಸಕ್ರಿಯವಾಗಿದ್ದರೂ ಸಹ ಇವರಿಗೆ ಮತ್ತು ಇವರ ಕುಟುಂಬಕ್ಕೆ ಬಲಾಢ್ಯರಿಂದ ತಮ್ಮ ತುಂಡುಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಪರಿಣಾಮವಾಗಿ ತಾಯಿ ಮಾನಸಿಕ ಅಸ್ವಸ್ಥತೆಗೆ ಗುರಿಯಾದರೆ ಒಬ್ಬ ತಮ್ಮ ಆತ್ಮಹತ್ಯೆಗೆ ಶರಣಾದ. ಅಲ್ಲದೆ ಸುತ್ತಮುತ್ತ ಇದ್ದ ಹಲವು ಕುಟುಂಬಗಳು ಸಹ ತಮ್ಮಂತೆ ಬಡತನ ಶೋಷಣೆಗಳಿಗೆ ಬಲಿಯಾಗುತ್ತಿದ್ದುದ್ದನ್ನು ಕಂಡ ವನಜಾಕ್ಷಿ ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಂಡರು ಸಶಸ್ತ್ರ ಹೋರಾಟವೇ ದಾರಿ ಎಂಬ ನಿರ್ಧಾರಕ್ಕೂ ಆ ಕಾಲದಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಳುವಳಿಯ ಪ್ರಭಾವದಿಂದಾಗಿ ಬಂದರು 2000 ನೇ ಇಸವಿಯಿಂದ ಮಾವೋವಾದಿ ಪಕ್ಷದ ಭಾಗವಾಗಿ ಕರ್ನಾಟಕ ಹಾಗೂ ಕೇರಳದಲ್ಲಿ ಸಂಚರಿಸುವ ದಳದ ಸದಸ್ಯೆಯಾಗಿದ್ದರು. ತನ್ನ ಹೋರಾಟವನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿಯೂ ಮುಂದುವರಿಸಬಹುದಾದ ಅವಕಾಶಗಳನ್ನು ಅರ್ಥ ಮಾಡಿಕೊಂಡು ಈಗ ಮುಖ್ಯವಾಹಿನಿಯ ಭಾಗವಾಗಲು ಸಿದ್ಧರಾಗಿದ್ದಾರೆ.

ಜಯಣ್ಣ ಅರೋಲಿ: ಜಯಣ್ಣ ಆರೋಲಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಜಯಣ್ಣ ಎರಡನೆಯ ಬಿಎ ವರೆಗೂ ಓದಿರುವ ದಲಿತ ಯುವಕ ಕಾಲೇಜಿನಲ್ಲಿ ಇರುವಾಗಲೇ ಆ ಸಮಯದಲ್ಲಿ ಆ ಭಾಗದಲ್ಲಿ ನಡೆಯುತ್ತಿದ್ದ ಮಾವೋವಾದಿ ಚಳುವಳಿಯ ಕಡೆ ಆಕರ್ಷಿತರಾದರು ಆಸಕ್ತಿಯಿಂದ ಚಳುವಳಿಯನ್ನು ಗಮನಿಸುತ್ತಿದ್ದ ಅವರಿಗೆ ಭಾಸ್ಕರ್ ಅವರ ಎನ್ಕೌಂಟರ್ ಹತ್ಯೆ ಆಘಾತವನ್ನುಂಟು ಮಾಡಿತು 2000ನೆ ಇಸವಿಯಲ್ಲಿ ತನ್ನ 24ನೇ ವಯಸ್ಸಿನಲ್ಲಿ ದಳದ ಭಾಗವಾದರು ಅಂದಿನಿಂದ ಕೇರಳ ಕರ್ನಾಟಕಗಳಲ್ಲಿ ಇವರ ಹೋರಾಟದ ಚಟುವಟಿಕೆಗಳು ನಡೆದಿದೆ 2018 ಮತ್ತೆ ಸಶಸ್ತ್ರ ಚಳುವಳಿಗೆ ಮರಳಿದರು ಜನರ ಜೊತೆ ಸೇರಿ ಜನಪರ ಹೋರಾಟಗಳನ್ನು ನಡೆಸಲು ಮುಖ್ಯ ವಾಹಿನಿಯ ಭಾಗವಾಗಿ ಭಾಗವಾಗ ಬಯಸಿದ್ದಾರೆ ಸರ್ಕಾರ ಪ್ರಕಟಿಸಿರುವ ಪ್ಯಾಕೇಜ್ ಭಾಗವಾಗಿ ತಮಗೆ ಸಂದಾಯವಾಗಬಹುದಾದ ಹಣದ ಅರ್ಧ ಭಾಗವನ್ನು ತನ್ನ ಹಳ್ಳಿಯ ಶಾಲೆಯ ಅಭಿವೃದ್ಧಿಗಾಗಿ ನೀಡಬೇಕೆಂದು ತೀರ್ಮಾನಿಸಿದ್ದಾರೆ.

ವಸಂತ್ ಆರ್ಕಾಟ್: ತಮಿಳುನಾಡಿನ ವೆಲ್ಲೂರಿನ ವಸಂತ್ ಬಿ ಟೆಕ್ ಪದವೀಧರ ವೆಲ್ಲೂರು ಜಿಲ್ಲೆಯ ಆರ್ಕಾಟ್ ಅವರ ಊರು ಸಮಾಜಮುಖಿ ಚಿಂತನೆಗಳಿಂದ ಪ್ರಭಾವಿತರಾದ ಇವರು ಹೋರಾಟಗಳನ್ನು ಗಮನಿಸುತ್ತಿ ಬೆಳೆದವರು 2010ರಲ್ಲಿ ಪದವಿ ಮುಗಿಸಿದ ತಕ್ಷಣವೇ ಶಶಸ್ತ್ರ ಹೋರಾಟದ ಭಾಗವಾಗಿ ಅಂದಿನಿಂದಲೂ ಕೇರಳ ಕರ್ನಾಟಕಗಳಲ್ಲಿರುವ ದಳದ ಸದಸ್ಯರಾಗಿದ್ದರು. ಮಿತ ಭಾಷೆಯಾಗಿರುವ ವಸಂತ್ ತನ್ನ ಆದರ್ಶಗಳನ್ನು ಬಿಟ್ಟುಕೊಡದೆ ಹೋರಾಟದ ಮಾರ್ಗವನ್ನು ಬದಲಿಸಿ ಮುಖ್ಯವಾಹಿನಿಯನ್ನು ಸೇರಬಯಸಿದ್ದಾರೆ.

ಜಿಶ: ಜಿಶ ತಂಡದಲ್ಲಿನ ಎಲ್ಲರಿಗಿಂತಲೂ ತುಂಬಾ ಚಿಕ್ಕವರು. ಕೇರಳದ ಜೀಶ ವಯನಾಡ್ ಜಿಲ್ಲೆಯ ಮಕ್ಕಿಮಲದ ಆದಿವಾಸಿ ಮಹಿಳೆ ಎಂಟನೇ ತರಗತಿಯವರೆಗೂ ವಿದ್ಯಾಭ್ಯಾಸ 2018ರಲ್ಲಿ ಕೇರಳದಲ್ಲಿ ಸಶಸ್ತ್ರ ಹೋರಾಟದ ಭಾಗವಾಗಿದ್ದು 2023ರಲ್ಲಿ ತಂಡದ ಇತರೆ ಸದಸ್ಯರೊಂದಿಗೆ ಕೇರಳದಿಂದ ಕರ್ನಾಟಕಕ್ಕೆ ಬಂದವರು.

ಇದನ್ನೂ ಓದಿ; ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....