Homeಕರ್ನಾಟಕಬಿಎಸ್‌ವೈ ಪೋಕ್ಸೋ ಪ್ರಕರಣ| 'ಕೆಟ್ಟ ಘಟನೆಗಳು ತಂಗಿಯನ್ನು ನಿತ್ಯ ಕಾಡುತ್ತಿವೆ..'; ಅಸಹಾಯಕತೆ ವ್ಯಕ್ತಪಡಿಸಿದ ಸಂತ್ರಸ್ತೆ ಸಹೋದರ

ಬಿಎಸ್‌ವೈ ಪೋಕ್ಸೋ ಪ್ರಕರಣ| ‘ಕೆಟ್ಟ ಘಟನೆಗಳು ತಂಗಿಯನ್ನು ನಿತ್ಯ ಕಾಡುತ್ತಿವೆ..’; ಅಸಹಾಯಕತೆ ವ್ಯಕ್ತಪಡಿಸಿದ ಸಂತ್ರಸ್ತೆ ಸಹೋದರ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ದಾಖಲಾಗಿ ಸುಮಾರು 10 ತಿಂಗಳುಗಳಾಗಿದ್ದು, ಸಂತ್ರಸ್ತೆಯ ಸಹೋದರ ವಿಡಿಯೋ ಬಿಡುಗಡೆ ಮಾಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

“ಪ್ರಕರಣದ ತನಿಖೆ ತ್ವರಿತವಾಗಿ ನಡೆಯುತ್ತಿಲ್ಲ; ನಮಗೆ ನ್ಯಾಯವೂ ಸಿಗುತ್ತಿಲ್ಲ. ನಿತ್ಯವೂ ನರಕಯಾತನೆಯಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ತಾವು ಅನುಭವಿಸುತ್ತಿರುವ ಸಂಕಷ್ಟಗಳು ಮತ್ತು ಯಡಿಯೂರಪ್ಪ ವಿರುದ್ಧ ಹಲವಾರು ಆರೋಪಗಳನ್ನು ಮಾಡಿ ಸಂತ್ರಸ್ತೆಯ ಸಹೋದರ ವಿಡಿಯೋ ಹಂಚಿಕೊಂಡಿದ್ದಾರೆ.

“ಅತೀವ ದುಃಖದಿಂದ ನಾನು ಈ ವಿಡಿಯೋ ಮಾಡುತ್ತಿದ್ದೇನೆ. ನನ್ನ ಪುಟ್ಟ ತಂಗಿ ಮೇಲಾದ ದೌರ್ಜನ್ಯದಿಂದಾಗಿ ನನ್ನ ಕುಟುಂಬ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರಣ. ನಿಜಕ್ಕೂ ಯಡಿಯೂರಪ್ಪ ರೀತಿಯ ಜನರು ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ. ಅದೂ ಕೂಡ ಅವರ ಮೊಮ್ಮಕ್ಕಳಿಗಿಂತಲೂ ಚಿಕ್ಕವಳಾದ ನನ್ನ ಪುಟ್ಟ ತಂಗಿ ಮೇಲೆ ಇಂತಹ ಕೃತ್ಯ ನಡೆಸಿದ್ಜಾರೆ. ನನಗೆ ಮತ್ತು ನನ್ನ ಪುಟ್ಟ ತಂಗಿಗೆ ಇದು ನಿಜಕ್ಕೂ ಆಘಾತವಾಗಿದೆ” ಎಂದು ಬೇಸರ ಹೊರಹಾಕಿದ್ದಾರೆ.

“ತನ್ನ ಮೇಲಾದ ದೌರ್ಜನ್ಯದಿಂದಾಗಿ ನನ್ನ ತಂಗಿ ನಿತ್ಯವೂ ನರಕ ಯಾತನೆ ಅನುಭವಿಸುತ್ತಿದ್ದಾಳೆ. ಅಂದು ನಡೆದ ಆ ಕೆಟ್ಟ ಘಟನೆಗಳು ಆಕೆಯನ್ನು ಕಾಡುತ್ತಿವೆ. ನನ್ನ ತಂಗಿಯ ಮೇಲಾದ ದೌರ್ಜನ್ಯದ ವಿರುದ್ಧದ ಹೋರಾಟ ನಡೆಸುತ್ತಿದ್ದ ನಮ್ಮ ತಾಯಿ ಕೂಡ ಸಾವನ್ನಪ್ಪಿದ್ದಾರೆ. ಅವರ ಸಾವು ನಮ್ಮನ್ನು ಮತ್ತಷ್ಟು ಆಘಾತಕ್ಕೀಡುಮಾಡಿದೆ. ನಮ್ಮ ತಾಯಿ ಸುಮಾರು 10 ವರ್ಷಗಳ ಹಿಂದೆ ಮೊದಲ ಪೋಕ್ಸೋ ಪ್ರಕರಣ ದಾಖಲಿಸಿದಾಗಿನಿಂದಲೂ ಹೋರಾಟ ನಡೆಸುತ್ತಿದ್ದರು. ನಮ್ಮ ತಾಯಿಯೇ ನಮಗೆ ಧೈರ್ಯವಾಗಿದ್ದರು. ಆದರೆ, ಅವರಿಲ್ಲ ನಾವು ಕಷ್ಟಪಡುತ್ತಿದ್ದೇವೆ. ನಮ್ಮ ಭಾವನೆ, ಆಕ್ರೋಶ ಎಲ್ಲವನ್ನೂ ನಮ್ಮೊಳಗೇ ಇಟ್ಟುಕೊಂಡು ಒದ್ದಾಡುತ್ತಿದ್ದೇವೆ” ಎಂದು ವಿವರಿಸಿದ್ದಾರೆ.

“ನ್ಯಾಯಕ್ಕಾಗಿ ನಮ್ಮ ತಾಯಿ ಹಲವು ರಾಜಕೀಯ ನಾಯಕರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿದ್ದರು. ಮನವಿ ಸಲ್ಲಿಸಿದ್ದರು. ಆದರೆ, ಯಾರಿಂದಲೂ ನ್ಯಾಯ ದೊರೆಯಲಿಲ್ಲ. ಆಕೆಯ ವಿರುದ್ಧವೇ ಸುಳ್ಳು ಪ್ರಕರಣಗಳು ದಾಖಲಾದವು. ಯಡಿಯೂರಪ್ಪರನ್ನು ರಕ್ಷಿಸಲು ನಮ್ಮ ತಾಯಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ನ್ಯಾಯ ಕೇಳಲು ಹೋದ ನಮ್ಮ ತಾಯಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಹಲ್ಲೆ ನಡೆಸಲು ಯತ್ನಿಸಿದ್ದರು. ಇಂತಹ ಕೃತ್ಯಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು. ಯಡಿಯೂರಪ್ಪ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲು ಬೆದರಿಕೆಗಳು ಬರುತ್ತಿವೆ. ನಮ್ಮ ಕುಟುಂಬ ಜೀವನ ನಡೆಸುವುದೇ ಸವಾಲಾಗಿದೆ. ನನ್ನ ತಂಗಿ ಜರ್ಜಿರಿತಳಾಗಿದ್ದಾಳೆ. ಶಾಲೆಗೆ ಹೋಗುವುದನ್ನೂ ನಿಲ್ಲಿಸಿದ್ದಾಳೆ. ಹೊರ ಹೋಗಲು ಭಯವಾಗುತ್ತಿದೆ ಎನ್ನುತ್ತಿದ್ದಾಳೆ. ನನ್ನ ತಂಗಿಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದು. ಅಪರಾಧಿಗೆ ಶಿಕ್ಷೆಯಾಗಬೇಕು. ಪ್ರಕರಣ ರದ್ದಾಗದಂತೆ ನೋಡಿಕೊಳ್ಳಬೇಕು. ನಮಗೆ ನ್ಯಾಯ ಕೊಡಿಸಿ, ನ್ಯಾಯಕ್ಕಾಗಿ ವಾದ ಮಂಡಿಸಲು ಒಳ್ಳೆಯ ವಕೀಲರನ್ನು ನೇಮಿಸಿಕೊಡಿ ಎಂದು ನಾನು ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಮನವಿ ಮಾಡಿಕೊಂಡಿದ್ದಾರೆ.

ಇದೆಲ್ಲದರ ನಡುವೆ ತಮ್ಮ ವಿರುದ್ಧದ ದಾಖಲಾಗಿರುವ ಪೋಕ್ಸೋ ಪ್ರಕರಣ‌ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಜ.10ಕ್ಕೆ ಮುಂದೂಡಿದೆ.

ತಮ್ಮ ಮಗಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಪಡೆಯಲು ಸಹಾಯ ಕೇಳಲು ಹೋಗಿದ್ದಾಗ ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಾಲಕಿಯ ಖಾಸಗಿ ಅಂಗ ಸ್ಪರ್ಶಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಸಿದ್ದರು. ಅವರ ದೂರಿನ ಆಧಾರದ ಮೇಲೆ 2024ರ ಮಾರ್ಚ್‌ 15ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ; ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...