Homeಕರ್ನಾಟಕಮುಖ್ಯವಾಹಿನಿಗೆ ಬಂದ ನಕ್ಸಲರ ಬೇಡಿಕೆ ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಮುಖ್ಯವಾಹಿನಿಗೆ ಬಂದ ನಕ್ಸಲರ ಬೇಡಿಕೆ ಈಡೇರಿಸುತ್ತೇವೆ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಮುಖ್ಯವಾಹಿನಿಗೆ ಬಂದ ನಕ್ಸಲರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸಶ್ತ್ರಾಸ್ತ್ರ ತ್ಯಜಿಸಿ ಇಂದು (ಜ.8) ಬಂದ 6 ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದರು.

ಅನ್ಯಾಯ,ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ.
ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ.ಆದರೆ ಹೋರಾಟ ಶಾಂತಿಯುತ ಮತ್ತು ನ್ಯಾಯಯುತವಾಗರಿಬೇಕು ಎಂದು ಸಿಎಂ ಹೇಳಿದರು.

ನಕ್ಸಲಿಸಂ,ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ,ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ.ಈ ಹಿಂದೆಯೂ ಬಹಳ ನಕ್ಸಲಿಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ.ಅವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ ಎಂದರು.

ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು.ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ. ಶಾಂತಿಯುತ ಹೋರಾಟಕ್ಕೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ.ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ ಎಂದು ಹೇಳಿದರು.

ಅನ್ಯಾಯ ಕಡಿಮೆ ಮಾಡಲು ನಮ್ಮ ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಯಾರ ಮೇಲೆಯೂ ಅನ್ಯಾಯ ಆಗಬಾರದು ಎಂಬುವುದು ನಮ್ಮ ಧ್ಯೇಯ. ಬಡವರ ಹಕ್ಕುಗಳ ರಕ್ಷಣೆಗಾಗಿ ಅವರಿಗೆ ಆರ್ಥಿಕವಾಗಿ,ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ ಯೋಜನೆ ಉದ್ದೇಶ ಇದೇ ಆಗಿದೆ.ಗೌರವಯುತವಾಗಿ ಬಡವರು ಬದುಕಲು ಅವಕಾಶ ಇದರಿಂದ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು.

ನಕ್ಸಲಿಸಂ ರಹಿತವಾದ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ಬಹಿರಂಗವಾಗಿ ಹೇಳಿದ್ದೆ. ನಿಮ್ಮನ್ನು ಕ್ರಿಮಿನಲ್‌ಗಳ ರೀತಿ ನೋಡದೆ,ಮಾನವರಂತೆ ನೋಡುವ ಭರವಸೆ ನೀಡಿದ್ದೆ.
ನಕ್ಸಲಿಯರ ಶರಣಾಗತಿಯಲ್ಲಿ ಸಮಿತಿಯ ಸದಸ್ಯರ ಪಾತ್ರ ಮುಖ್ಯವಾಗಿದ್ದು,ಅವರಿಗೆ ಹಾಗೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸ ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ : ಕರ್ನಾಟಕ ಸರ್ಕಾರದ ಐತಿಹಾಸಿಕ ನಡೆ; ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ನಕ್ಸಲ್ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...