Homeಮುಖಪುಟಮೈತೇಯಿ ಸಮುದಾಯದ ಎಸ್‌ಟಿ ಸ್ಥಾನಮಾನದ ಬೇಡಿಕೆಯು ಜನಾಂಗೀಯ ಸಂಘರ್ಷಕ್ಕೆ ಕಾರಣ: ಮಣಿಪುರ ಮುಖ್ಯಮಂತ್ರಿ

ಮೈತೇಯಿ ಸಮುದಾಯದ ಎಸ್‌ಟಿ ಸ್ಥಾನಮಾನದ ಬೇಡಿಕೆಯು ಜನಾಂಗೀಯ ಸಂಘರ್ಷಕ್ಕೆ ಕಾರಣ: ಮಣಿಪುರ ಮುಖ್ಯಮಂತ್ರಿ

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ‘ದುರದೃಷ್ಟಕರ’ ಎಂದು ಕರೆದ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, “ಮೈತೇಯಿ ಜನರು ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನವನ್ನು ಕೋರಿದ ನಂತರ ಎಲ್ಲವೂ ಪ್ರಾರಂಭವಾಯಿತು. ಆದ್ದರಿಂದ, ತಮ್ಮ ಸರ್ಕಾರ ತಪ್ಪಿತಸ್ಥರಲ್ಲ” ಎಂದು ಪ್ರತಿಪಾದಿಸಿದರು.

ಮುಖ್ಯಮಂತ್ರಿ ಸಚಿವಾಲಯದಲ್ಲಿ ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ರಾಜ್ಯವು ಮಾನವ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ ಯಾವುದೇ ರಾಜಕೀಯ ಮಾಡಬಾರದು ಎಂದು ಹೇಳಿದರು.

ಮೇ 3, 2023 ರಂದು ಪ್ರಾರಂಭವಾದ ಹಿಂಸಾಚಾರವನ್ನು ನೆನಪಿಸಿಕೊಂಡ ಸಿಎಂ, “ಈ ಘಟನೆ ತುಂಬಾ ದುರದೃಷ್ಟಕರ. ಸಂಘರ್ಷಕ್ಕೆ ಕಾರಣ ಮೈತೆಯಿಯವರ ಎಸ್‌ಟಿ ಸ್ಥಾನಮಾನದ ಬೇಡಿಕೆ. ಎಲ್ಲರೂ ರಾಜ್ಯ ಸರ್ಕಾರವನ್ನು ನಾವು ತಪ್ಪು ಮಾಡಿದಂತೆ ಟೀಕಿಸುತ್ತಿದ್ದಾರೆ” ಎಂದರು.

“ವಾಸ್ತವವೆಂದರೆ, ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಮೈತೇಯಿಯವರ ಎಸ್‌ಟಿ ಸ್ಥಾನಮಾನದ ಬೇಡಿಕೆಗೆ ಉತ್ತರಿಸುವಂತೆ ಕೇಳಿತ್ತು. ಅದನ್ನು ವಿರೋಧಿಸಿ, ರ‍್ಯಾಲಿ ನಡೆಸಲಾಯಿತು; ಮೈತೇಯಿಗಳಿಗೆ ಸೇರಿದ ಮನೆಗಳ ಮೇಲೆ ದಾಳಿ ಮಾಡಲಾಯಿತು. ಹೀಗೆ ಸಂಘರ್ಷ ಪ್ರಾರಂಭವಾಯಿತು” ಎಂದು ವಿವರಿಸಿದರು.

ಮಾರ್ಚ್ 27, 2023 ರಂದು, ಮಣಿಪುರ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ವಿ. ಮುರಳೀಧರನ್ ಅವರು, ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವುದನ್ನು ಪರಿಗಣಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದ್ದರು.

ರಾಜ್ಯದ ಬುಡಕಟ್ಟು ಸಂಸ್ಥೆಗಳು ಇದನ್ನು ತೀವ್ರವಾಗಿ ವಿರೋಧಿಸಿದವು. ಮೇ 3 ರಂದು, ಮಣಿಪುರದ ಬೆಟ್ಟದ ಜಿಲ್ಲೆಗಳಲ್ಲಿ ಆಲ್ ಟ್ರೈಬಲ್ ಸ್ಟೂಡೆಂಟ್ಸ್ ಯೂನಿಯನ್ ರ‍್ಯಾಲಿಯನ್ನು ನಡೆಸಿತು.

ಚುರಚಂದ್‌ಪುರ ಜಿಲ್ಲೆಯ ಗುಂಪೊಂದು ಒಂದು ಸ್ಥಳಕ್ಕೆ ನುಗ್ಗಿ ವಿಧ್ವಂಸಕ ಕೃತ್ಯ ಮತ್ತು ಬೆಂಕಿ ಹಚ್ಚುವಿಕೆಯಲ್ಲಿ ತೊಡಗಿದ ನಂತರ ರ‍್ಯಾಲಿ ಹಿಂಸಾತ್ಮಕವಾಯಿತು. ಈ ವಿಷಯದ ಬಗ್ಗೆ ಅನೇಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಹೇಳಿಕೊಂಡರು.

“ಪರಿಹಾರ ಶಿಬಿರಗಳಲ್ಲಿರುವವರ ಶಿಕ್ಷಣ, ದೈನಂದಿನ ಸರಬರಾಜು, ಆರೋಗ್ಯ ಮತ್ತು ಇತರ ಎಲ್ಲ ಅಗತ್ಯಗಳನ್ನು ಪೂರೈಸಲು ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ.. ನಾವು ಮಾನವ ಬಿಕ್ಕಟ್ಟನ್ನು ನೋಡುತ್ತಿದ್ದೇವೆ ಮತ್ತು ಯಾವುದೇ ರಾಜಕೀಯವನ್ನು ಆಡಬಾರದು” ಎಂದು ಅವರು ಹೇಳಿದರು.

“ಮನಸ್ಥಿತಿ ಬದಲಾಗಬೇಕು. ಸಂಘರ್ಷ ನಡೆಯುತ್ತಿದೆ, ಅನೇಕರು ಕೊಲ್ಲಲ್ಪಟ್ಟರು ಮತ್ತು ಸ್ಥಳಾಂತರಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮ ಮತ್ತು ಟಿವಿ ಚರ್ಚೆಗಳಲ್ಲಿ ಜನಪ್ರಿಯತೆಯನ್ನು ಹುಡುಕುವ ಸಮಯ ಈಗಿಲ್ಲ. ನಿಜವಾದ ವಿಷಯ ತಜ್ಞರು ಮತ್ತು ಭದ್ರತಾ ಪಡೆಗಳು ಸಂಘರ್ಷದ ಬಗ್ಗೆ ಮಾತನಾಡಲಿ” ಎಂದು ಸಿಂಗ್ ಹೇಳಿದರು.

‘ಹಿಂದಿನ ನಾಯಕರು’ ಸಂಕುಚಿತ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದು, ತಪ್ಪುಗಳನ್ನು ಮಾಡುವುದು ಕಷ್ಟಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದ ಸಿಎಂ, “ನಾವು ಭೂಮಿ ಮತ್ತು ಸಮಾಜವನ್ನು ಉಳಿಸಲು ಅಪಾಯ, ತ್ಯಾಗಗಳನ್ನು ತೆಗೆದುಕೊಳ್ಳಬೇಕಾಗಿದೆ. ರಾಜಕೀಯವು ಚುನಾವಣೆಗಳನ್ನು ಗೆಲ್ಲಲು ಮಾತ್ರ ಅಲ್ಲ” ಎಂದು ಹೇಳಿದರು.

ಮಣಿಪುರದ ತೌಬಲ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೊಲೀಸರು ಮತ್ತು ಜನರ ನಡುವಿನ ಸಂಬಂಧ ಸುಧಾರಿಸಿದೆ ಎಂದು ಮುಖ್ಯಮಂತ್ರಿ ಹೇಳಿಕೊಂಡರು. ಈ ಹಿಂದೆ ಎಲ್ಲರೂ ಪೊಲೀಸರ ಬಗ್ಗೆ ಭಯದ ಮನೋರೋಗವನ್ನು ಹೊಂದಿದ್ದರು ಎಂದು ಹೇಳಿದರು.

ಈಶಾನ್ಯ ರಾಜ್ಯವು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳ ಹಿಡಿತದಲ್ಲಿದೆ. ಇದು 2023 ರ ಮೇ 3 ರಿಂದ 250 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದ್ದು, ಸಾವಿರಾರು ಜನರು ನಿರಾಶ್ರಿತರಾದರು.

ಕಾರ್ಯಕ್ರಮದ ಸಂದರ್ಭದಲ್ಲಿ, ಪರಿಹಾರ ಶಿಬಿರಗಳಲ್ಲಿ ವಾಸಿಸುವ ಕಾರ್ಮಿಕ ಕಾರ್ಡ್‌ದಾರರ ಮಕ್ಕಳ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವ ವಿಶೇಷ ಯೋಜನೆಯಡಿಯಲ್ಲಿ ಸಿಂಗ್ ಕಾರ್ಮಿಕ ಕಾರ್ಡ್‌ದಾರರಿಗೆ ಪ್ರಯೋಜನಗಳನ್ನು ವಿತರಿಸಿದರು.

ಇದನ್ನೂ ಓದಿ; ನಕ್ಸಲ್ ಸಂಪರ್ಕ ಆರೋಪದ ಎಲ್ಗರ್ ಪರಿಷತ್ ಪ್ರಕರಣ:  ರೋನಾ ವಿಲ್ಸನ್, ಸುಧೀರ್ ಧಾವಳೆಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...