Homeಮುಖಪುಟನ್ಯಾಯಾಧೀಶರಿಂದ ಮುಸ್ಲಿಂ ವಿರೋಧಿ ಹೇಳಿಕೆ : ಹೊಸ ವರದಿ ಕೇಳಿದ ಸಿಜೆಐ

ನ್ಯಾಯಾಧೀಶರಿಂದ ಮುಸ್ಲಿಂ ವಿರೋಧಿ ಹೇಳಿಕೆ : ಹೊಸ ವರದಿ ಕೇಳಿದ ಸಿಜೆಐ

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ (ವಿಹೆಚ್‌ಪಿ) ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಮಾಡಿರುವ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಹೊಸ ವರದಿ ಕೇಳಿದ್ದಾರೆ ಎಂದು ತಿಳಿದು ಬಂದಿದೆ.

ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಅವರಿಗೆ ಪತ್ರ ಬರೆದಿರುವ ಸಿಜೆಐ ಸಂಜೀವ್ ಖನ್ನಾ ಅವರು, ಹೊಸ ವರದಿ ನೀಡುವಂತೆ ಕೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ತನ್ನ ವಿವಾದಾತ್ಮಕ ಭಾಷಣ ಸಂಬಂಧ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಅವರು ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾದ ಎರಡು ವಾರಗಳ ಬಳಿಕ ಈ ಬೆಳವಣಿಗೆ ನಡೆದಿದೆ.

ಡಿಸೆಂಬರ್ 17ರಂದು ನ್ಯಾಯಾಧೀಶ ಯಾದವ್ ಅವರು ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡಿದ್ದರು. ಈ ವೇಳೆ ಅವರು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾರೆಯೇ? ಇಲ್ಲಾ ಕ್ಷಮೆ ಯಾಚನೆ ಮಾಡಿದ್ದಾರೆಯೇ? ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ. ಕೊಲಿಜಿಯಂ ನ್ಯಾ. ಯಾದವ್ ಅವರಿಗೆ ಎಚ್ಚರಿಕೆ ನೀಡಿ ಕಳಿಸಿದೆ ಎಂದು ಕೆಲ ಮಾಧ್ಯಮ ವರದಿಗಳು ತಿಳಿಸಿವೆ.

ಇದೀಗ ಸಿಜೆಐ ಹೊಸ ವರದಿ ಕೇಳಿರುವುದು ನ್ಯಾ. ಯಾದವ್ ವಿರುದ್ದ ಆಂತರಿಕ ಕ್ರಮ ಕೈಗೊಳ್ಳುವ ಮೊದಲ ಹೆಜ್ಜೆಯಾಗಿರಬಹುದು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

1995ರ ಸಿ ರವಿಚಂದ್ರನ್ ಅಯ್ಯರ್ VS ನ್ಯಾಯಮೂರ್ತಿ ಎ.ಎಂ ಭಟ್ಟಾಚಾರ್ಜಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಹೈಕೋರ್ಟ್ ನ್ಯಾಯಾಧೀಶರ ವಿರುದ್ದ ಆರೋಪ ಕೇಳಿ ಬಂದಾಗ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರೋಪಿತರ ವಿಚಾರಣೆ ನಡೆಸಬೇಕು. ನಂತರ ಈ ಕುರಿತು ಸಿಜೆಐ ಜೊತೆ ಸಮಾಲೋಚನೆ ಮಾಡಬೇಕು.

ಈ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ.ಎಂ. ಭಟ್ಟಾಚಾರ್ಜಿ ವಿರುದ್ಧ ಹಣಕಾಸಿನ ಅಕ್ರಮದ ಆರೋಪಗಳಿದ್ದವು. ಇಲ್ಲಿ ನ್ಯಾಯಾಲಯವು “ಕೆಟ್ಟ ನಡವಳಿಕೆ ಮತ್ತು ದೋಷಾರೋಪಣೆಗೆ ಅರ್ಹವಲ್ಲದ ಆರೋಪದ ನಡುವಿನ ಅಂತರ”ವನ್ನು ಪರಿಗಣಿಸಿತ್ತು.

ಆರೋಪಗಳು ಕೇಳಿ ಬಂದ ನಂತರ ನ್ಯಾಯಮೂರ್ತಿ ಭಟ್ಟಾಚಾರ್ಜಿ ರಾಜೀನಾಮೆ ನೀಡಿದ್ದರೂ, ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಕಾನೂನನ್ನು ರೂಪಿಸಿತು. ಭವಿಷ್ಯದ ಇಂತಹ ಪ್ರಕರಣಗಳಿಗೆ ಅದು ಮಾರ್ಗಸೂಚಿಯಾಯಿತು.

ಮಾರ್ಗಸೂಚಿ ಪ್ರಕಾರ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಿಂದ ಬಂದ ವರದಿಯನ್ನು ಅಧ್ಯಯನ ಮಾಡಿದ ಬಳಿಕ, ನ್ಯಾಯಾಧೀಶರ ವಿರುದ್ದದ ಆರೋಪ ರುಜುವಾತಾದರೆ ಸಿಜೆಐ ಮುಂದಿನ ಕ್ರಮಗಳನ್ನು ಕೈಗೊಳ್ಳಬಹುದು.

ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಕಾನೂನು ಘಟಕ 2024ರ ಡಿಸೆಂಬರ್ 8ರಂದು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಅವರು ಮುಸ್ಲಿಂ ಗುರಿಯಾಗಿಸಿ ‘ಸಂವಿಧಾನ ವಿರೋಧಿ’ ಹೇಳಿಕೆ ನೀಡಿದ್ದರು.

ಇದನ್ನೂ ಓದಿ : ಇದೆ ತಿಂಗಳು ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...