Homeಮುಖಪುಟನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

ನಿಯಂತ್ರಣಕ್ಕೆ ಬಾರದ ಕಾಡ್ಗಿಚ್ಚು : ಕಾಡು-ನಾಡು ಸುಟ್ಟು ಭಸ್ಮ ; ನಿರಾಶ್ರಿತರಾದ ಲಕ್ಷಾಂತರ ಜೀವಗಳು

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ದಕ್ಷಿಣ ಭಾಗದ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಾಲ್ಕು ದಿನ ಕಳೆದರೂ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ಕಾಡು-ನಾಡು ಸುಟ್ಟು ಭಸ್ಮವಾಗಿದ್ದು, ಹೊಸ ವರ್ಷದ ಆರಂಭ ಮಹಾ ದುರಂತಕ್ಕೆ ಸಾಕ್ಷಿಯಾಗಿದೆ.

ಕಳೆದ ಮಂಗಳವಾರದಿಂದ (ಜ.7) ಹೊತ್ತಿ ಉರಿಯುತ್ತಿರುವ ಬೆಂಕಿ, ಗಂಟೆ ಗಂಟೆಗೂ ಹೊಸ ಪ್ರದೇಶಗಳನ್ನು ಆವರಿಸಿಕೊಂಡು ಮುನ್ನುಗ್ಗುತ್ತಿದೆ. ಇದರಿಂದ ಜನರ ಮನೆ, ವ್ಯವಹಾರ ಸಂಸ್ಥೆಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಸುಟ್ಟು ಭಸ್ಮವಾದರೆ, ವನ್ಯ ಜೀವಿಗಳು ತಮ್ಮ ನೆಲೆಯನ್ನು ಕಳೆದುಕೊಂಡಿದೆ. ಈ ಮೂಲಕ ಲಕ್ಷಾಂತರ ಜೀವಗಳು ನಿರಾಶ್ರಿತರಾಗಿದ್ದಾರೆ.

ವರದಿಗಳ ಪ್ರಕಾರ, ನಿನ್ನೆ ಜ.9, ಗುರುವಾರ) ಕಾಡ್ಗಿಚ್ಚಿಗೆ ಬಲಿಯಾದವರ ಸಂಖ್ಯೆ 5 ಆಗಿತ್ತು. ಅದು ಇಂದು (ಜ.10, ಶುಕ್ರವಾರ) 8ಕ್ಕೆ ಏರಿಕೆಯಾಗಿದೆ. ಸುಮಾರು 1 ಲಕ್ಷದಷ್ಟು ಜನರನ್ನು ಸ್ಥಳಾಂತರ ಮಾಡಿರುವ ಕ್ಯಾಲಿಫೋರ್ನಿಯಾ ರಾಜ್ಯ ಸರ್ಕಾರ, ತುರ್ತು ಪರಿಸ್ಥಿತಿ ಘೋಷಿಸಿದೆ. ವನ್ಯ ಜೀವಿಗಳ ಸಾವು-ನೋವಿನ ಕುರಿತು ಮಾಹಿತಿ ದೊರೆತಿಲ್ಲ. ಅವುಗಳ ರಕ್ಷಣಾ ಕಾರ್ಯ ನಡೆದಿರುವ ಬಗ್ಗೆಯೂ ವರದಿ ಲಭ್ಯವಾಗಿಲ್ಲ.

‘ಸಾಂತಾ ಅನಾ’ ಎಂದು ಕರೆಯಲ್ಪಡುವ ಬಲವಾದ ಒಣ ಗಾಳಿಯು ಬೆಂಕಿಯ ಕೆನ್ನಾಗಲಿಗೆಯನ್ನು ವಿಸ್ತರಣೆ ಮಾಡುತ್ತಿದೆ. ಈ ಗಾಳಿಯೇ ಬೆಂಕಿ ನಂದಿಸಲು ಅಡ್ಡಿಯಾಗಿದೆ. ಸುಮಾರು 8 ಸಾವಿರ ರಕ್ಷಣಾ ಸಿಬ್ಬಂದಿ ಅಗ್ನಿಶಾಮಕ ವಾಹನಗಳು, ಹೆಲಿಕಾಫ್ಟರ್ ಸೇರಿದಂತೆ ವಿವಿಧ ರೀತಿಯಲ್ಲಿ ನಿರಂತರ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಈ ನಡುವೆ ಕೊಂಚ ನೀರಿನ ಕೊರೆತೆಯೂ ಎದುರಾಗಿದೆ.

ಲಾಸ್‌ ಏಂಜಲೀಸ್‌ನ ಪೆಸಿಫಿಕ್‌ ಪ್ಯಾಲಿಸೈಡ್ಸ್‌, ಪ್ಯಾಸಡೀನಾದ ಈಟನ್‌ ಕೆಯಾನ್‌, ಹಾಲಿವುಡ್‌ ಹಿಲ್ಸ್‌, ಲಿಡಿಯಾ ಪ್ರದೇಶ ವ್ಯಾಪ್ತಿಯಲ್ಲಿ ಗುರುವಾರ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಇದರ ಪರಿಣಾಮ ಹಾಲಿವುಡ್‌ ಹಿಲ್ಸ್‌ನಲ್ಲಿ ನೆಲೆಸಿರುವ ಕೋಟಿ ಕೋಟಿ ವೆಚ್ಚದ ಹಾಲಿವುಡ್‌ನ ಹಲವು ಸಿನಿ ತಾರೆಯರ ಮನೆಗಳು ಸುಟ್ಟು ಭಸ್ಮವಾಗಿವೆ. ನೂರಾರು ಸಿನಿ ತಾರೆಯರು ತಮ್ಮ ಮನೆಗಳನ್ನು ತೊರೆದಿದ್ದಾರೆ. ಹಾಗೇ ಹಾಲಿವುಡ್‌ ಸಿನಿ ರಂಗದ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ ಎಂದು ವರದಿಗಳು ಹೇಳಿವೆ.

ಹಾಲಿವುಡ್ ತಾರೆಯರಾದ ನಟ ಪ್ಯಾರಿಸ್ ಹಿಲ್ಟನ್, ಆಸ್ಕರ್ ವಿಜೇತ ನಟ ಆ್ಯಂಟನಿ ಹಾಪ್ಕಿನ್ಸ್, ಮತ್ತೊಬ್ಬ ಆಸ್ಕರ್ ವಿಜೇತ ನಟ ಜೆಫ್ ಬ್ರಿಡ್ಜಸ್, ನಟ ಬಿಲ್ಲಿ ಕ್ರಿಸ್ಟಲ್, ‘ಅಮೆರಿಕನ್ ಪೈ’ ನಟ ಯುಜಿನ್ ಲೆವಿ, ‘ರೋಸಾನ್’ ಸಿನಿಮಾದ ನಟ ಜಾನ್ ಗುಡ್‌ಮನ್, ‘ಸ್ಟಾರ್ ವಾರ್ಸ್’ ಚಿತ್ರದ ನಟ ಮಾರ್ಕ್ ಹ್ಯಾಮಿಲ್, ಇತರ ನಟರಾದ ಜೆನ್ನಿಫರ್ ಗ್ರೆ, ಕ್ಯಾರಿ ಎಲ್ವೆಸ್, ಆ್ಯಡಂ ಬ್ರೋಡಿ ಸೇರಿದಂತೆ ಹಲವರ ಮನೆ ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಇವರೆಲ್ಲರೂ ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ.

ನಿರಂತರ ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಲಾಸ್‌ ಏಂಜಲೀಸ್‌ನಲ್ಲಿ ಆಕಾಶವೇ ಕಿತ್ತಲೆ ಬಣ್ಣಕ್ಕೆ ತಿರುಗಿದೆ ಎಂದು ದುರಂತದ ಭೀಕರತೆಯನ್ನು ವರದಿಗಳು ಬಣ್ಣಿಸಿದೆ.

ಇದನ್ನೂ ಓದಿ : ಕಿರುಕುಳ ಕೊಡಬೇಡಿ ಎಂದು ಎಬಿವಿಪಿ ಕಾರ್ಯಕರ್ತರನ್ನು ಬೇಡಿದ ಉಪನ್ಯಾಸಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...