Homeಕರ್ನಾಟಕಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ಐವರು ಆರೋಪಿಗಳ ಬಂಧನ, ಸಿಐಡಿ ಕಸ್ಟಡಿಗೆ ನೀಡಿದ...

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ : ಐವರು ಆರೋಪಿಗಳ ಬಂಧನ, ಸಿಐಡಿ ಕಸ್ಟಡಿಗೆ ನೀಡಿದ ನ್ಯಾಯಾಲಯ

- Advertisement -
- Advertisement -

ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಎನ್ನಲಾಗುತ್ತಿರುವ ಕಲಬುರಗಿಯ ಮಾಜಿ ಕಾರ್ಪೋರೇಟರ್ ರಾಜು ಕಪನೂರ ಸೇರಿದಂತೆ ಐವರನ್ನು ಶುಕ್ರವಾರ (ಜ.10) ಬಂಧಿಸಿ, ಬೀದರ್‌ನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಐದೂ ಜನರನ್ನು ಐದು ದಿನಗಳವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ರಾಮಮೂರ್ತಿ ಅವರು ಆರೋಪಿಗಳ ಪರ ವಕೀಲರು ಹಾಗೂ ಸಿಐಡಿ ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ, ಆರೋಪಿಗಳನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ನ್ಯಾಯಾಲಯದ ಆದೇಶದ ಬಳಿಕ ಸಿಐಡಿ ಅಧಿಕಾರಿಗಳು, ಆರೋಪಿಗಳಾದ ಕಲಬುರಗಿಯ ಮಾಜಿ ಕಾರ್ಪೋರೇಟರ್ ರಾಜು ಕಪನೂರ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋರಖನಾಥ ಸಜ್ಜನ್, ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಂದಕುಮಾರ ನಾಗಭುಜಂಗೆ, ಕಲಬುರಗಿಯ ಪ್ರಥಮ ದರ್ಜೆ ಗುತ್ತಿಗೆದಾರ ರಾಮನಗೌಡ ಪಾಟೀಲ ಹಾಗೂ ಸತೀಶ ರತ್ಕಾರ ದುಬಲಗುಂಡ ಅವರನ್ನು ತಮ್ಮ ಕಸ್ಟಡಿಗೆ ಕರೆದೊಯ್ದಿದ್ದಾರೆ.

ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಎಲ್ಲಾ ಆರೋಪಿಗಳು ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಸಿಐಡಿ ಡಿಐಜಿಪಿ ಶಾಂತನು ಸಿನ್ಹಾ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ಎರಡು ತಾಸಿಗೂ ಅಧಿಕ ಸಮಯ ಆರೋಪಿಗಳ ವಿಚಾರಣೆ ನಡೆಸಿ, ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಎನ್ನಲಾದ ಕಾಂಗ್ರೆಸ್ ಮುಖಂಡ ರಾಜು ಕಪನೂರು ಹಾಗೂ ಇತರರಿಂದ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ್ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ (26) ಅವರು, ಗುರುವಾರ (ಡಿ.26) ಡೆತ್‌ನೋಟ್‌ ಬರೆದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಬಳಿಕ ನಾಪತ್ತೆಯಾಗಿದ್ದ ಅವರ ಶವ ಬೀದರ್-ಹೈದರಾಬಾದ್ ರೈಲ್ವೆ ಹಳಿಯಲ್ಲಿ ಪತ್ತೆಯಾಗಿತ್ತು.

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...