13 ವರ್ಷದವಳಿದ್ದಾಗಿನಿಂದ ಪ್ರಾರಂಭಿಸಿ ಕಳೆದ ಐದು ವರ್ಷಗಳಲ್ಲಿ 60ಕ್ಕೂ ಹೆಚ್ಚು ಪುರುಷರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ಆರೋಪಿಸಿದ ನಂತರ ಇಲ್ಲಿಯವರೆಗೆ 20 ಮಂದಿಯನ್ನು ಬಂಧಿಸಲಾಗಿದೆ ಮತ್ತು ಅವರ ಮೇಲೆ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗಳು ನಡೆದಾಗ ದೂರುದಾರರು ಅಪ್ರಾಪ್ತ ವಯಸ್ಕರಾಗಿದ್ದ ಕಾರಣ, ಬಂಧಿತರ ಮೇಲೆ ಪೋಕ್ಸೋ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಮತ್ತು ನಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಆರೋಪ ಹೊರಿಸಲಾಗಿದೆ.
ಇನ್ನೂ ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ. ಯುವತಿಯು ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಮಾಲೋಚನೆಯ ಸಮಯದಲ್ಲಿ ದೌರ್ಜನ್ಯವನ್ನು ಬಹಿರಂಗಪಡಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಇದರ ನಂತರ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪ್ರಕರಣವನ್ನು ಕೈಗೆತ್ತಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದೆ. ಪ್ರಸ್ತುತ ತನಿಖೆಯನ್ನು ಉಪಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನಂದಕುಮಾರ್ ಮತ್ತು ಇನ್ಸ್‌ಪೆಕ್ಟರ್ ವಿನೋದ್ ಕೃಷ್ಣನ್ ನೇತೃತ್ವ ವಹಿಸಿದ್ದಾರೆ.
ಕೇರಳ ರಾಜ್ಯ ಮಹಿಳಾ ಆಯೋಗವು ಸಹ ಸ್ವಯಂಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ವರದಿಯನ್ನು ನೀಡಿದೆ.
2019ರಲ್ಲಿ ಯುವತಿಯ ನೆರೆಮನೆಯ ಸುಬಿನ್ (24) ಎಂಬಾತನು ಈಗ ದೂರು ನೀಡಿರುವ ಯುವತಿ ಅಂದು 13ನೇ ವಯಸ್ಸಿನಲ್ಲಿದ್ದಾಗ ಆಕೆಯ ನಗ್ನ ಛಾಯಾಚಿತ್ರಗಳನ್ನು ಸೆರೆಹಿಡಿದಾಗ ದೌರ್ಜನ್ಯ ಪ್ರಾರಂಭವಾಗಿತ್ತು. ನಂತರ ಬಾಲಕಿ 16 ವರ್ಷದವಳಿದ್ದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ, ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ ಮತ್ತು ಅವುಗಳನ್ನು ಇತರ ಆರೋಪಿಗಳೊಂದಿಗೆ ಹಂಚಿಕೊಂಡಿದ್ದ ಎಂದು ಆರೋಪಿಸಲಾಗಿದೆ ಮತ್ತು ನಂತರದ ವರ್ಷಗಳಲ್ಲಿ ಇತರರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಈ ದೌರ್ಜನ್ಯವನ್ನು ಸಾರ್ವಜನಿಕ ಸ್ಥಳಗಳು ಮತ್ತು ಆಕೆಯ ಶಾಲೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈ ಲೈಂಗಿಕ ದೌರ್ಜನ್ಯಗಳು ನಡೆದಿವೆ.
ಯುವತಿಯ ತಂದೆಯ ಫೋನ್‌ನಿಂದ ಪೊಲೀಸರು 40 ಜನ ಆರೋಪಿಗಳ ವಿವರಗಳನ್ನು ಸಂಗ್ರಹಿಸಿದ್ದಾರೆ. ಯುವತಿಯು ಈ ಮೊದಲು ತನ್ನ ತಂದೆಯ ಮೊಬೈಲ್ ಅನ್ನು ತನ್ನ ಸಂವಹನಕ್ಕೆ ಬಳಕೆ ಮಾಡುತ್ತಿದ್ದು, ಇದರಲ್ಲಿ ಯುವತಿ ಜೊತೆ ದೌರ್ಜನ್ಯವೆಸಗಿದವರು ಯುವತಿ ಜೊತೆ ಸಂವಹನ ನಡೆಸಿರುವ ವಿವರಗಳಿವೆ. ಆಕೆಯ ಪೋಷಕರಿಗೆ ಈ ದೌರ್ಜನ್ಯದ ಬಗ್ಗೆ ಸಂಪೂರ್ಣವಾಗಿ ತಿಳಿದಿರಲಿಲ್ಲ ಎಂದು ವರದಿಯಾಗಿದೆ.
ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಅವರು ಒಂದೇ ಪ್ರದೇಶದವರಾಗಿದ್ದರೂ, ಐದು ವರ್ಷಗಳ ಅವಧಿಯಲ್ಲಿ ಅವರು ಕೆಲಸಕ್ಕಾಗಿ ಬೇರೆ ಬೇರೆ ಸ್ಥಳಗಳಿಗೆ ತೆರಳಿದ್ದಾರೆ.
ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ


