ಉತ್ತರ ಪ್ರದೇಶದ ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅದಾಗ್ಯೂ, ಆರು ಜನರು ಅಪಾಯದಿಂದ ಪಾರಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ
ಎಎನ್‌ಐ ಜೊತೆ ಮಾತನಾಡಿದ ಕಾನ್ಪುರ ಆಯುಕ್ತ ಕೆ. ವಿಜಯೇಂದ್ರ ಪಾಂಡಿಯನ್, ಘಟನೆಯಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಘಟನೆಯಲ್ಲಿ ರಕ್ಷಿಸಲ್ಪಟ್ಟ 28 ಜನರಲ್ಲಿ 15 ಜನರನ್ನು ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
“ಸುಮಾರು 28 ಜನರನ್ನು ರಕ್ಷಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 15 ಜನರನ್ನು ಬಿಡುಗಡೆ ಮಾಡಲಾಗಿದೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಆದರೆ ಅಪಾಯದಿಂದ ಪಾರಾಗಿದ್ದಾರೆ. ತಲೆಗೆ ಯಾವುದೇ ಗಾಯಗಳಾಗಿಲ್ಲ. ಕೆಲವರಿಗೆ ಮುರಿತಗಳು ಉಂಟಾಗಿವೆ, ಅವರನ್ನು ನಿಗಾದಲ್ಲಿ ಇರಿಸಲಾಗಿದೆ” ಎಂದು ಅವರು ಹೇಳಿದ್ದಾರೆ. ಉತ್ತರ ಪ್ರದೇಶ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ನಾವು ಡ್ರೋನ್ ಮತ್ತು ಹಸ್ತಚಾಲಿತ ರಕ್ಷಣಾ ಕಾರ್ಯಾಚರಣೆ ಮಾಡಿದ್ದೇವೆ. SDRF ಸ್ನಿಪ್ಪರ್ ನಾಯಿಗಳನ್ನು ಸೇವೆಗೆ ನಿಯೋಜಿಸಲಾಗಿದೆ. ಇನ್ನೂ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಸ್ವಲ್ಪ ಸಮಯದಲ್ಲಿ ಅವಶೇಷಗಳನ್ನು ತೆರವುಗೊಳಿಸಲಾಗುವುದು. 28 ಜನರನ್ನು ಗುರುತಿಸಲಾಗಿದೆ” ಎಂದು ಪಾಂಡಿಯನ್ ಹೇಳಿದ್ದಾರೆ.
ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಲಿಂಟಲ್ ಕುಸಿದ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಮತ್ತು ಸಂಸದ ಅಖಿಲೇಶ್ ಯಾದವ್ ಅವರು, ರಾಜ್ಯದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸಂತ್ರಸ್ತರಿಗೆ ಗರಿಷ್ಠ ಮಟ್ಟದ ಸಹಾಯ ನೀಡಬೇಕು ಎಂದು ಆಗ್ರಹಿದ್ದಾರೆ.
“ಕನೌಜ್‌ನಲ್ಲಿ ನಡೆದ ಘಟನೆ ತುಂಬಾ ದುಃಖಕರವಾಗಿದೆ. ನಿರ್ಮಾಣದ ಸಮಯದಲ್ಲಿ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕಾಗಿತ್ತು, ಅದನ್ನು ನಿರ್ಲಕ್ಷಿಸಲಾಯಿತು, ಹಾಗಾಗಿ ಈ ಘಟನೆ ಸಂಭವಿಸಿದೆ. ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎಂದು ನಾವು ಭಾವಿಸುತ್ತೇವೆ. ಇದು ಬಿಜೆಪಿಯ ಕಡೆಯಿಂದ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರದ ಪ್ರಕರಣವಾಗಿದೆ” ಎಂದು ಅಖಿಲೇಶ್ ಹೇಳಿದ್ದಾರೆ.
“ಗುತ್ತಿಗೆದಾರರಿಗೆ ಕೆಲಸ ಹಂಚಿಕೆ ಮಾಡಿದಾಗ ಅದನ್ನು ಎರಡು ಬಾರಿ ಹೊರಗುತ್ತಿಗೆ ನೀಡಲಾಗುತ್ತದೆ. ನಂತರ ಬಿಜೆಪಿಯ ಜನರು ತಮಗೆ ಲಾಭವಾಗುವವರೆಗೆ ಕೆಲಸ ಮುಂದುವರಿಯುವುದಿಲ್ಲ ಎಂದು ಒತ್ತಡ ಹೇರುವುದನ್ನು ನಾವು ನೋಡುತ್ತಿರುವುದು ಇದೇ ಮೊದಲು. ಇದರ ಪರಿಣಾಮವಾಗಿ, ಗುತ್ತಿಗೆದಾರರು ಗುಣಮಟ್ಟದೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ” ಎಂದು ಅವರು ಉಲ್ಲೇಖಿಸಿದ್ದಾರೆ.
“ಗುತ್ತಿಗೆದಾರರು ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬೇಕಾಗಿದೆ ಮತ್ತು ಸಮರ್ಪಕ ಸುರಕ್ಷತಾ ಕ್ರಮಗಳು ಅಸ್ತಿತ್ವದಲ್ಲಿಲ್ಲ. ಇಂತಹ ಘಟನೆಗಳು ನಡೆಯುತ್ತಿರುವುದರಿಂದ ಗುಣಮಟ್ಟ ಹದಗೆಟ್ಟಿದೆ. ಇದು ಸರ್ಕಾರದ ಕಡೆಯಿಂದ ಸಂಭವಿಸಿದ ವಿಫಲತೆಯಾಗಿದೆ. ಎಲ್ಲಾ ಸಂತ್ರಸ್ತರಿಗೆ ಸರ್ಕಾರವು ಎಲ್ಲಾ ವೈದ್ಯಕೀಯ ಸೌಲಭ್ಯಗಳು ಮತ್ತು ಇತರ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಾವು ಒತ್ತಾಯಿಸುತ್ತೇವೆ. ಜೊತೆಗೆ, ಕಾರ್ಮಿಕರಿಗೆ ಗರಿಷ್ಠ ನೆರವು ನೀಡಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಅವರು ಆಗ್ರಹಿಸಿದ್ದಾರೆ.
ಶನಿವಾರ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. “ಅಲ್ಲಿ ತಕ್ಷಣ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯಬೇಕು ಎಂಬುದು ಸರ್ಕಾರದ ಸೂಚನೆಯಾಗಿದೆ. ಅಪಘಾತದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.
ಇದನ್ನೂಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ದೆಹಲಿಯ ಎಲ್ಲ ಸ್ಲಂಗಳನ್ನು ಕೆಡವಲಿದೆ: ಅರವಿಂದ್ ಕೇಜ್ರಿವಾಲ್ ಆರೋಪ
ಬಿಜೆಪಿ ಅಧಿಕಾರಕ್ಕೆ ಬಂದರೆ ದೆಹಲಿಯ ಎಲ್ಲ ಸ್ಲಂಗಳನ್ನು ಕೆಡವಲಿದೆ: ಅರವಿಂದ್ ಕೇಜ್ರಿವಾಲ್ ಆರೋಪ


