ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯ ಎರಡು ಗ್ರಾಮಗಳಾದ ಕೊನ್ಸಖುಲ್ ಮತ್ತು ಲೀಲಾನ್ ವೈಫೇಯ್‌ನಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ. ಶಾಂತಿ ಕದಡಬಹುದೆಂಬ ಆತಂಕದಿಂದಾಗಿ ಮುಂದಿನ ಸೂಚನೆ ಬರುವವರೆಗೂ ಎರಡು ನೆರೆಯ ಗ್ರಾಮಗಳಲ್ಲಿ ಮತ್ತು ಸುತ್ತಮುತ್ತಲಿನ ಜನರ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಮಣಿಪುರದಲ್ಲಿ
ನಾಗ ಪ್ರಾಬಲ್ಯದ ಕೊನ್ಸಖುಲ್ ಗ್ರಾಮ ಮತ್ತು ಕುಕಿ-ಝೋ ಪ್ರಾಬಲ್ಯದ ಲೀಲಾನ್ ವೈಫೇಯ್ ಗ್ರಾಮದ ನಡುವಿನ ಪ್ರಾದೇಶಿಕ ವಿವಾದದಿಂದಾಗಿ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಜನವರಿ 7 ರಂದು ಕುಕಿ ಸಮುದಾಯದ ಸದಸ್ಯರು ನಾಗಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಶನಿವಾರ ಕಾಮ್ಜಾಂಗ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಘಟನೆ ನಡೆದಿದ್ದು, ಮನೆ ನಿರ್ಮಾಣಕ್ಕಾಗಿ ಮರಗಳನ್ನು ಸಾಗಿಸುವುದನ್ನು ನಿರ್ಬಂಧಿಸಿದ್ದಕ್ಕಾಗಿ ಗುಂಪೊಂದು ಅಸ್ಸಾಂ ರೈಫಲ್ಸ್‌ನ ತಾತ್ಕಾಲಿಕ ಶಿಬಿರವನ್ನು ನಾಶಪಡಿಸಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಭದ್ರತಾ ಪಡೆಗಳು ಅಶ್ರುವಾಯು ಬಳಸಿ ಗುಂಪನ್ನು ಚದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು IANS ವರದಿ ಮಾಡಿದೆ. ಮಣಿಪುರದಲ್ಲಿ
2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೋ-ಹ್ಮಾರ್ಸ್ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದಿದ್ದು, ಈ ವರೆಗೆ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಅದಾಗ್ಯೂ, ನವೆಂಬರ್‌ನಲ್ಲಿ ರಾಜ್ಯದಲ್ಲಿ ಹಿಂಸಾಚಾರದಲ್ಲಿ ಏರಿಕೆಯಾಗಿದೆ.
ಇದನ್ನೂಓದಿ: ರಾಜಸ್ಥಾನ| ದಲಿತ ವ್ಯಕ್ತಿಯನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿಸಿದ ಮೂವರ ಬಂಧನ
ರಾಜಸ್ಥಾನ| ದಲಿತ ವ್ಯಕ್ತಿಯನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿಸಿದ ಮೂವರ ಬಂಧನ


