Homeಮುಖಪುಟಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

ಮಹಿಳೆಯರು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ: ಹೊಸ ಸೈಬರ್ ವಂಚನೆ

- Advertisement -
- Advertisement -

ಪಾಟ್ನಾ: ಮಕ್ಕಳು ವಂಚಿತ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ ರೂ. 10 ಲಕ್ಷ ನೀಡುವ ಅಮಿಷವೊಡ್ಡಿ ಯುವಕರನ್ನು ವಂಚಿಸಿದ್ದಕ್ಕಾಗಿ ಬಿಹಾರ ಪೊಲೀಸರು ಶನಿವಾರ ಮೂವರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಪ್ರಿನ್ಸ್ ರಾಜ್, ಭೋಲಾ ಕುಮಾರ್ ಮತ್ತು ರಾಹುಲ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಇಂತಹ ಕೊಡುಗೆಯ ಭರವಸೆಗಳನ್ನು ನೀಡಿ, ಇದನ್ನು ನಂಬಿ ಬಂದವರಿಂದಲೇ ಹಣವನ್ನು ಸುಲಿಗೆ ಮಾಡುವ ದೊಡ್ಡ ಗ್ಯಾಂಗ್‌ನ ಭಾಗವಾಗಿದ್ದಾರೆಂದು ಶಂಕಿಸಲಾಗಿದೆ. ಕೌರಾ ಗ್ರಾಮದಿಂದ ಈ ದಂಧೆಯನ್ನು ನಡೆಸುತ್ತಿದ್ದರು ಎಂದು ನವಾಡ ಡಿಎಸ್‌ಪಿ (ಪ್ರಧಾನ ಕಚೇರಿ) ಇಮ್ರಾನ್ ಪರ್ವೇಜ್ ತಿಳಿಸಿದರು.

ಸೈಬರ್ ಪೊಲೀಸ್ ಠಾಣೆಗೆ ಬಂದ ದೂರಿನ ಮೇರೆಗೆ ಬಲೆ ಬೀಸಲಾಯಿತು ಮತ್ತು ಪ್ರಿನ್ಸ್ ರಾಜ್, ಭೋಲಾ ಕುಮಾರ್ ಮತ್ತು ರಾಹುಲ್ ಕುಮಾರ್ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇದು ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಿದರೆ ಗ್ರಾಹಕ ಶುಲ್ಕವಾಗಿ ಭಾರಿ ಮೊತ್ತವನ್ನು ನೀಡುವ ಭರವಸೆ ನೀಡಿ ಯುವಕರಿಗೆ ಆಮಿಷವೊಡ್ಡಿದ ಆರೋಪದ ಮೇಲೆ ಬಂಧಿಸಲಾಯಿತು. ಅವರು ನಾದ್ರಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕೌರಾ ಗ್ರಾಮದಿಂದ ಈ ದಂಧೆಯನ್ನು ನಡೆಸುತ್ತಿದ್ದರು” ಎಂದು ಅವರು ಹೇಳಿದರು.

ಆರೋಪಿಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜಾಹೀರಾತುಗಳನ್ನು ಪೋಸ್ಟ್ ಮಾಡಿ, ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ದೊಡ್ಡ ಮೊತ್ತದ ಹಣವನ್ನು ನೀಡುವುದಾಗಿ ಭರವಸೆ ನೀಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ತಮ್ಮ ಈ ದಂಧೆಗೆ ಯುವಕರನ್ನು ಆಕರ್ಷಿಸಲು ಅವರು ವೆಬ್‌ಸೈಟ್ ಅನ್ನು ಸಹ ನಡೆಸುತ್ತಿದ್ದರು. ಯುವಕರಿಗೆ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ವಿಫಲವಾದರೂ ರೂ. 50,000 ಭರವಸೆ ನೀಡಲಾಗಿತ್ತು. ಅವರು ಮೊದಲು ತಮ್ಮ ಬಲಿಪಶುಗಳಿಂದ ಆಧಾರ್ ಕಾರ್ಡ್‌ಗೆ ಬೇಡಿಕೆ ಇಡುತ್ತಿದ್ದರು ಮತ್ತು ನಂತರ ನೋಂದಣಿ ಶುಲ್ಕವನ್ನು ಕೇಳುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

ಅವರು ‘All India Pregnant Job Service’ ಎಂಬ ವೆಬ್‌ಸೈಟ್ ಅನ್ನು ನಡೆಸುತ್ತಿದ್ದರು. ಅದರ ಮೂಲಕ ಅವರು ಸಂಭಾವ್ಯ ಗ್ರಾಹಕರನ್ನು ಆಕರ್ಷಿಸುತ್ತಿದ್ದರು. ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಲು ಅವರು ಜನರಿಗೆ ರೂ. 5-10 ಲಕ್ಷ ನೀಡುವ, ವಿಫಲವಾದರೂ ಗ್ರಾಹಕರಿಗೆ ರೂ. 50,000 ಭರವಸೆ ನೀಡುತ್ತಿದ್ದರು ಎಂದು ಡಿಎಸ್‌ಪಿ ಹೇಳಿದರು.

ಆರಂಭದಲ್ಲಿ ಅವರು ತಮ್ಮ ಮೋಸದ ಜಾಲಕ್ಕೆ ಸಿಲುಕಿದ ಯುವಕರರಿಂದ ಪ್ಯಾನ್ ಮತ್ತು ಆಧಾರ್ ಕಾರ್ಡ್ ವಿವರಗಳನ್ನು ಸಂಗ್ರಹಿಸುತ್ತಿದ್ದರು. ನಂತರ ಅವರು ನೋಂದಣಿ ಮತ್ತು ಹೋಟೆಲ್‌ಗಳ ಬುಕಿಂಗ್ ಹೆಸರಿನಲ್ಲಿ ಅವರಿಂದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಅವರು ಹೇಳಿದರು.

ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇಂಡಿಯಾ ಬಣ ವಿಸರ್ಜನೆಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ: ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...