Homeಮುಖಪುಟ'ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ವಂತವಾಗಿ ಹೋರಾಡಲು ಸಾಧ್ಯವಿಲ್ಲ..';  'ಕೈ' ವಿರುದ್ಧ ಸಾಮ್ನಾ ಸಂಪಾದಕೀಯ

‘ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ವಂತವಾಗಿ ಹೋರಾಡಲು ಸಾಧ್ಯವಿಲ್ಲ..’;  ‘ಕೈ’ ವಿರುದ್ಧ ಸಾಮ್ನಾ ಸಂಪಾದಕೀಯ

- Advertisement -
- Advertisement -

‘ಇಂಡಿಯಾ’ ಬ್ಲಾಕ್ ಮಿತ್ರಪಕ್ಷದ ವಿರುದ್ಧ ಮತ್ತೊಮ್ಮೆ ಅಸಮಾಧಾನ ಹೊರಹಾಕಿರುವ ಶಿವಸೇನೆ (ಯುಬಿಟಿ), ಸೋಮವಾರ ಸಾಮ್ನಾ ಸಂಪಾದಕೀಯಗಳಲ್ಲಿ ಕಾಂಗ್ರೆಸ್ ಅನ್ನು ಮತ್ತೊಮ್ಮೆ ಟೀಕಿಸಿದೆ.

“ದೇಶದಲ್ಲಿ ಇಂಡಿಯಾ ಬಣ ಮತ್ತು ರಾಜ್ಯದಲ್ಲಿ ಮಹಾ ವಿಕಾಸ್ ಅಘಾಡಿ ಅವ್ಯವಸ್ಥೆಯಾಗಿ ಮಾರ್ಪಟ್ಟಿವೆ ಎಂದು ಜನರು ಭಾವಿಸಲು ಪ್ರಾರಂಭಿಸಿದ್ದಾರೆ” ಎಂದು ಸಾಮ್ನಾ ಸಂಪಾದಕೀಯದಲ್ಲಿ ಶಿವಸೇನೆ ಬರೆದಿದೆ.

“ಪ್ರತಿಯೊಂದು ಪ್ರಾದೇಶಿಕ ಪಕ್ಷವು ತನ್ನ ಪಾತ್ರ, ಕೇಡರ್ ಮತ್ತು ಅಸ್ತಿತ್ವವನ್ನು ಕಾಪಾಡಿಕೊಳ್ಳಬೇಕು. ಆದರೆ, ಕಾಂಗ್ರೆಸ್ ಪಕ್ಷವು ಇದನ್ನು ಅರ್ಥಮಾಡಿಕೊಳ್ಳಲು ಸಿದ್ಧವಾಗಿಲ್ಲ. ಕಾಂಗ್ರೆಸ್ ಅನೇಕ ರಾಜ್ಯಗಳಲ್ಲಿ ಸ್ವಂತವಾಗಿ ಹೋರಾಡಲು ಸಾಧ್ಯವಿಲ್ಲ. ಹೋರಾಡಲು ಹೆಚ್ಚಿನ ಬಲವಿಲ್ಲ. ಚುನಾವಣೆಗಳನ್ನು ಎದುರಿಸಲು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಿನಿಂದ ಇರಬೇಕು” ಎಂದು ಪ್ರತಿಪಾದಿಸಿದೆ.

ಕಳೆದ ವಾರ, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಇಂಡಿಯಾ ಬಣದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ವಿರೋಧ ಪಕ್ಷದ ಮೈತ್ರಿಕೂಟದ ಸಮನ್ವಯದ ಕೊರತೆಯ ಬಗ್ಗೆ ಒಮರ್ ಅಬ್ದುಲ್ಲಾ ಅವರ ಭಾವನೆಗಳನ್ನು ಪ್ರತಿಧ್ವನಿಸಿದೆ.

ಲೋಕಸಭಾ ಚುನಾವಣೆಯ ನಂತರ ಮೈತ್ರಿಕೂಟದ ಭವಿಷ್ಯದ ಹಾದಿಯನ್ನು ರೂಪಿಸಲು ಯಾವುದೇ ಕಾರ್ಯತಂತ್ರದ ಸಭೆಗಳು ಇಲ್ಲದಿರುವುದನ್ನು ಅವರು ಎತ್ತಿ ತೋರಿಸಿದರು.

ಮೈತ್ರಿಕೂಟದ ಪ್ರಸ್ತುತ ಸ್ಥಿತಿಯ ಕುರಿತು ಮಾತನಾಡುತ್ತಾ, ರಾಷ್ಟ್ರೀಯ ಕಾನ್ಫರೆನ್ಸ್‌ ಪಕ್ಷದ ನಾಯಕ ಒಮರ್ ಅಬ್ದುಲ್ಲಾ ಅವರ ಹೇಳಿಕೆಯೊಂದಿಗೆ ರಾವತ್ ಸಹಮತ ವ್ಯಕ್ತಪಡಿಸಿದರು. ಇದು ನಾಯಕತ್ವ, ಕಾರ್ಯಸೂಚಿ ಅಥವಾ ಇಮಡಿಯಾ ಬಣದ ಅಸ್ತಿತ್ವದ ಬಗ್ಗೆ ಸ್ಪಷ್ಟತೆಯ ಕೊರತೆಯನ್ನು ಎತ್ತಿ ತೋರಿಸಿತು.

“ಒಮರ್ ಅಬ್ದುಲ್ಲಾ ಹೇಳಿದ್ದನ್ನು ನಾನು ಒಪ್ಪುತ್ತೇನೆ. ನಾವು ಲೋಕಸಭಾ ಚುನಾವಣೆಗಳನ್ನು ಒಟ್ಟಿಗೆ ಹೋರಾಡಿದ್ದೇವೆ ಮತ್ತು ಫಲಿತಾಂಶಗಳು ಸಹ ಉತ್ತಮವಾಗಿವೆ. ಅದರ ನಂತರ, ಇಂಡಿಯಾ ಮೈತ್ರಿಕೂಟವನ್ನು ಜೀವಂತವಾಗಿರಿಸುವುದು, ಒಟ್ಟಿಗೆ ಕುಳಿತು ಮುಂದಿನ ದಾರಿ ತೋರಿಸುವುದು ನಮ್ಮೆಲ್ಲರ, ವಿಶೇಷವಾಗಿ ಕಾಂಗ್ರೆಸ್‌ನ ಜವಾಬ್ದಾರಿಯಾಗಿದೆ” ಎಂದು ರೌರಾವತ್ ಹೇಳಿದರು.

ಚುನಾವಣೆಗಳ ನಂತರ, ಮೈತ್ರಿಕೂಟದ ಸದಸ್ಯರಲ್ಲಿ ಯಾವುದೇ ಸಭೆ ಅಥವಾ ಸಮನ್ವಯ ನಡೆದಿಲ್ಲ. ಇದು ಒಕ್ಕೂಟದ ಏಕತೆಗೆ ಹಾನಿಕಾರಕವೆಂದು ಅವರು ಪರಿಗಣಿಸುತ್ತಾರೆ ಎಂದು ರೌರಾವತ್ ಗಮನಸೆಳೆದರು. “ಆದರೆ ಇಲ್ಲಿಯವರೆಗೆ, ಲೋಕಸಭಾ ಚುನಾವಣೆಯ ನಂತರ ಅಂತಹ ಒಂದೇ ಒಂದು ಸಭೆ ನಡೆದಿಲ್ಲ. ಇದು ಇಂಡಿಯಾ ಮೈತ್ರಿಕೂಟಕ್ಕೆ ಸರಿಯಲ್ಲ” ಎಂದು ಅವರು ಹೇಳಿದರು.

ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಮೈತ್ರಿಕೂಟದ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

“ಒಮರ್ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್ ಅವರಂತಹ ನಾಯಕರು ಇಂಡಿಯಾ ಮೈತ್ರಿಕೂಟಕ್ಕೆ ಈಗ ಅಸ್ತಿತ್ವವಿಲ್ಲ ಎಂದು ಹೇಳುತ್ತಾರೆ” ಎಂದು ಸಂಜಯ್ ರಾವತ್ ಗಮನಿಸಿದರು.

ಮೈತ್ರಿಕೂಟವು ಮುರಿದು ಬಿದ್ದರೆ, ಅದು ಶಾಶ್ವತ ವಿಭಜನೆಯಾಗುತ್ತದೆ ಎಂದು ಶಿವಸೇನೆ (ಯುಬಿಟಿ) ನಾಯಕ ಒತ್ತಿ ಹೇಳಿದರು.

“ಜನರ ಮನಸ್ಸಿನಲ್ಲಿ ಅಂತಹ ಭಾವನೆ ಬಂದರೆ, ಮೈತ್ರಿಕೂಟದ ಅತಿದೊಡ್ಡ ಪಕ್ಷವಾದ ಕಾಂಗ್ರೆಸ್ ಇದಕ್ಕೆ ಕಾರಣವಾಗಿದೆ. ಯಾವುದೇ ಸಮನ್ವಯವಿಲ್ಲ, ಚರ್ಚೆಯಿಲ್ಲ, ಸಂವಾದವಿಲ್ಲ. ಇದರರ್ಥ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಜನರಿಗೆ ಅನುಮಾನಗಳಿವೆ” ಎಂದು ರಾವತ್ ಹೇಳಿದರು.

ರಾವತ್ ಅವರ ಹೇಳಿಕೆಗಳು ಮೈತ್ರಿಕೂಟದೊಳಗೆ ಹೆಚ್ಚುತ್ತಿರುವ ಕಳವಳಗಳನ್ನು ಒತ್ತಿಹೇಳುತ್ತವೆ. ಏಕತೆಯನ್ನು ಕಾಪಾಡಿಕೊಳ್ಳಲು ವಿಫಲವಾದರೆ ಒಕ್ಕೂಟದ ಅಂತ್ಯಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸುತ್ತವೆ.

ಇದನ್ನೂ ಓದಿ; ಸಿಎಜಿ ವರದಿ ಸಲ್ಲಿಸಲು ವಿಳಂಬ; ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...