Homeಕರ್ನಾಟಕಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ...

ಎಸಿ ಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಗೊಳಿಸಿ : ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು

- Advertisement -
- Advertisement -
  • ಕಳೆದ ಒಂದು ವರ್ಷದಲ್ಲಿ 30,000 ಪ್ರಕರಣಗಳು ಇತ್ಯರ್ಥ
  • ಆರು ತಿಂಗಳ ಅವಧಿ ಮೀರಿದ ಶೇ.45ರಷ್ಟು ಪ್ರಕರಣಗಳು ಬಾಕಿ
  • ಎಸಿಗಳು ತಿಂಗಳಿಗೆ 200 ರಿಂದ 250 ಪ್ರಕರಣಗಳ ವಿಲೇಗೆ ಸೂಚನೆ
  • ಫೌತಿ ಖಾತೆ ಆಂದೋಲನಕ್ಕೂ ಗಮನ ನೀಡಲು ಅಧಿಕಾರಿಗಳಿಗೆ ತಾಕೀತು

ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಗಡುವು ನೀಡಿದರು.

ಸೋಮವಾರ (ಜ.13) ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆಗೆ ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ ಹೆಚ್ಚಿನ ಕಾಲ ಇಟ್ಟುಕೊಳ್ಳುವಂತಿಲ್ಲ ಎಂಬ ಕಾನೂನಿದೆ. ಆದರೆ, ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿದ ವೇಳೆ ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ 60 ಸಾವಿರಕ್ಕೂ ಅಧಿಕ ಪ್ರಕರಣಗಳಿದ್ದವು. ಈ ಎಲ್ಲಾ ಪ್ರಕರಣಗಳನ್ನೂ ಮುಂದಿನ ಒಂದು ವರ್ಷದಲ್ಲಿ ಇತ್ಯರ್ಥಗೊಳಿಸಿ, ಸರ್ಕಾರಿ ಕಚೇರಿಗಳಿಗೆ ಜನರ ಅನಗತ್ಯ ಅಲೆದಾಟಕ್ಕೆ ಬ್ರೇಕ್ ಹಾಕಬೇಕು ಎಂಬುದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿತ್ತು” ಎಂದು ನೆನೆದರು.

ಆದರೆ, “ಒಂದೂವರೆ ವರ್ಷ ಕಳೆದರೂ ನಮ್ಮ ಈ ಉದ್ದೇಶ ಈಡೇರಿಲ್ಲ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ಉಪ-ವಿಭಾಗಾಧಿಕಾರಿಗಳನ್ನು ನೇಮಕ ಮಾಡಿದರೂ ಸಹ ಶೇ.55ರಷ್ಟು ಪ್ರಕರಣಗಳನ್ನು ಮಾತ್ರ ವಿಲೇವಾರಿ ಮಾಡಲಾಗಿದೆ. ಎಸಿ ನ್ಯಾಯಾಲಯಗಳಲ್ಲಿ ಇನ್ನೂ 29,000ಕ್ಕೂ ಅಧಿಕ ಪ್ರಕರಣಗಳು ಬಾಕಿ ಇವೆ. ಇದರಿಂದ ಜನ ಸಾಮಾನ್ಯರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮುಂದಿನ ಆರು ತಿಂಗಳೊಳಗಾಗಿ ಈ ಎಲ್ಲಾ ಪ್ರಕರಣಗಳನ್ನು ಅಧಿಕಾರಿಗಳು ನ್ಯಾಯಯುತ ವಿಲೇಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಭಿಯಾನ ಮಾದರಿಯಲ್ಲಿ ಕೆಲಸಕ್ಕೆ ಮುಂದಾಗಬೇಕು” ಎಂದು ಕರೆ ನೀಡಿದರು.

ಮುಂದುವರೆದು, “ಆರು ತಿಂಗಳಲ್ಲಿ ಎಲ್ಲಾ ಪ್ರಕರಣಗಳನ್ನೂ ತಹಬದಿಗೆ ತರಬೇಕು ಎಂಬುದು ಸರ್ಕಾರದ ಸಂಕಲ್ಪ. ಒಂದು ವರ್ಷದಲ್ಲಿ ಆಗಬೇಕಾದ ಕೆಲಸ ಎರಡು ವರ್ಷ ಆದ್ರೂ ಆಗಿಲ್ಲ ಅಂದ್ರೆ ಸರ್ಕಾರಕ್ಕೆ ನಿಮಗೆ ಶೋಭೆ ತರಲ್ಲ. ಹೀಗಾಗಿ ಈ ವಾರದಿಂದಲೇ ರೆಗ್ಯುಲರ್ ಎಸಿಗಳು ತಿಂಗಳೊಂದಕ್ಕೆ 200 ರಿಂದ 250 ಪ್ರಕರಣಗಳನ್ನು ವಿಲೇ ಮಾಡಿದರೆ, ವಿಶೇಷ ಉಪ-ವಿಭಾಗಾಧಿಕಾರಿಗಳು ಕನಿಷ್ಟ 70 ರಿಂದ 100 ಪ್ರಕರಣಗಳನ್ನು ವಿಲೇಗೊಳಿಸಬೇಕು. ಆರು ತಿಂಗಳ ನಂತರವೂ ಪ್ರಕರಣಗಳನ್ನು ಬಾಕಿ ಉಳಿಸಿಕೊಂಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು. ಅಲ್ಲದೆ, ಈ ಸಂಬಂಧ ಪ್ರತೀ ತಿಂಗಳೂ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗುವುದು” ಎಂದು ಎಚ್ಚರಿಸಿದರು.

“ನ್ಯಾಯಾಲಯಗಳ ತಕರಾರು ಪ್ರಕರಣಗಳ ವಿಲೇವಾರಿಯ ಜೊತೆಗೆ ಪೋಡಿ ದುರಸ್ಥಿ, ನಮೂನೆ 3-9 ಮಿಸ್ಮ್ಯಾಚ್ ಹಾಗೂ ಫೌತಿ ಖಾತೆ ಆಂದೋಲನ ಉಪ ವಿಭಾಗಾಧಿಕಾರಿಗಳ ಮಟ್ಟದಲ್ಲೇ ನಡೆಯಬೇಕು. ಹೀಗಾಗಿ ಅಧಿಕಾರಿಗಳು ಜನರ ಸಮಸ್ಯೆ ಹಾಗೂ ತಮ್ಮ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಕೆಲಸಗಳನ್ನೂ ಅಭಿಯಾನ ಮಾದರಿಯಲ್ಲಿ ನಡೆಸಬೇಕು” ಎಂದು ಅವರು ಕಿವಿಮಾತು ಹೇಳಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ನೆಹರೂ ಕಾರಣ – ಕುಮಾರಸ್ವಾಮಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...