Homeಕರ್ನಾಟಕ'ಹಿಂದೂ' ಎಂಬುವುದು ಅವಮಾನಕರ ಶಬ್ದ - ಚಿಂತಕ ಕೆ.ಎಸ್. ಭಗವಾನ್

‘ಹಿಂದೂ’ ಎಂಬುವುದು ಅವಮಾನಕರ ಶಬ್ದ – ಚಿಂತಕ ಕೆ.ಎಸ್. ಭಗವಾನ್

- Advertisement -
- Advertisement -

‘ಹಿಂದೂ’ ಎಂಬ ಪದ ಅವಮಾನಕರ ಶಬ್ದವಾಗಿದ್ದು, ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಕೆ.ಎಸ್. ಭಗವಾನ್ ಹೇಳಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಂದೂ ಎಂಬುವುದು

ಹಿಂದೂ ಎಂಬ ಪದದ ಬಗ್ಗೆ ಮಾತನಾಡಿದ ಕೆ.ಎಸ್. ಭಗವಾನ್ ಅವರು, ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ‌ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನು ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಎಂದು ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬುವುದು

ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನು ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ‌ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನು ವಾಪಸ್ ತರಬಾರದು. ಮನುಸ್ಮೃತಿಯನ್ನು ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನದ ಪರ ಹೋರಾಡಬೇಕು ಮನುಸ್ಮೃತಿಯನ್ನು ತಿರಸ್ಕರಿಸಬೇಕು ಎಂದು ಭಗವಾನ್ ಹೇಳಿದ್ದಾರೆ.

ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಅನ್ನೋ ಭಾವನೆಗೆ ಅಡ್ಡಿ ಬರುತ್ತಿದೆ. ಜನರು ಇದನ್ನು ದಾಟಿ ಬರಬೇಕು. ದೇಶದಲ್ಲಿ ಬೌದ್ಧ ಧರ್ಮ 1,500 ವರ್ಷಕಾಲ ಹರಡಿತ್ತು. ಬುದ್ಧ ಈ ಮಣ್ಣಿನ ಮಗನಾಗಿದ್ದು, ಆತ ಒಬ್ಬ ರೈತನ ಮಗ. ಬೌದ್ಧ ಸ್ತೂಪಗಳು, ದೇವಾಲಯಗಳು ಸೇರಿದಂತೆ ಎಲ್ಲವನ್ನೂ ಒಡೆದು ಹಾಕಲಾಗಿದೆ. ಅದನ್ನು ಯಾರು ಮಾಡಿದ್ದು ಎಂದು ಪತ್ತೆ ಹಚ್ಚಿ ಮೂಲ ವ್ಯಕ್ತಿಗಳಿಗೆ ವಾಪಸ್ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...