Homeಮುಖಪುಟಮಣಿಪುರದ ಜನರನ್ನು ಭೇಟಿ ಮಾಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ - ಕಾಂಗ್ರೆಸ್‌

ಮಣಿಪುರದ ಜನರನ್ನು ಭೇಟಿ ಮಾಡಲು ಮೋದಿಗೆ ಇನ್ನೂ ಸಮಯ ಸಿಕ್ಕಿಲ್ಲ – ಕಾಂಗ್ರೆಸ್‌

- Advertisement -
- Advertisement -

ವಿಪಕ್ಷ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರದಿಂದ ಮುಂಬೈವರೆಗೆ ನಡೆದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಒಂದು ವರ್ಷವಾಗಿದ್ದು, ಆದರೂ, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಇನ್ನೂ ಭೇಟಿ ನೀಡಿಲ್ಲ ಎಂದು ನ್ಯಾಯ ಯಾತ್ರೆಯ ವಾರ್ಷಿಕೋತ್ಸವದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಮಣಿಪುರದ ಜನರನ್ನು

ನಿರುದ್ಯೋಗ, ಬೆಲೆ ಏರಿಕೆ ಮತ್ತು ಸಾಮಾಜಿಕ ನ್ಯಾಯದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ರಾಹುಲ್‌ ಗಾಂಧಿ ಅವರು 2024ರ ಜನವರಿ 14ರಂದು ಹಿಂಸಾಚಾರ ಪೀಡಿತ ಮಣಿಪುರದಿಂದ ‘ನ್ಯಾಯ ಯಾತ್ರೆ’ ಆರಂಭಿಸಿದ್ದರು. ಆ ವೇಳೆ ಕಾಂಗ್ರೆಸ್ ಪಕ್ಷವೂ, ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿ, ಸಂತ್ರಸ್ತರ ಅಳಲು ಆಲಿಸಬೇಕು ಮತ್ತು ಶಾಂತಿ ನೆಲೆಸುವಂತೆ ಮಾಡಬೇಕೆಂದು ಒತ್ತಾಯಿಸಿತ್ತು. ಅದಾಗ್ಯೂ, ಯಾತ್ರೆ ನಡೆದು ಒಂದು ವರ್ಷವಾದರೂ ಪ್ರಧಾನಿ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಪಕ್ಷವೂ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೋದಿ ಅವರಿಗೆ ಪ್ರಪಂಚದ ಎಲ್ಲ ಭಾಗಗಳಿಗೆ ಹೋಗಲು ಸಮಯ, ಒಲವು ಮತ್ತು ಶಕ್ತಿ ಇದೆ. ಆದರೆ, ಈಶಾನ್ಯ ರಾಜ್ಯದಲ್ಲಿ (ಮಣಿಪುರ) ಸಂಕಷ್ಟದಲ್ಲಿರುವ ಜನರನ್ನು ಭೇಟಿ ಮಾಡಲು ಅವರಿಗೆ ಸಮಯವಿಲ್ಲ. ಅದರ ಅಗತ್ಯವೂ ಅವರಿಗೆ ಇಲ್ಲ” ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಮಣಿಪುರದ ಜನರನ್ನು

ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿ, “ಇಂದಿಗೆ, ನಿಖರವಾಗಿ ಒಂದು ವರ್ಷದ ಹಿಂದೆ, ಮಣಿಪುರದಿಂದ ಕಾಂಗ್ರೆಸ್ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸಿತು. ಐತಿಹಾಸಿಕ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ನಡೆದ ಭಾರತ್ ಜೋಡೋ ಯಾತ್ರೆಯ ನಂತರ ನ್ಯಾಯ ಯಾತ್ರೆಯು 15 ರಾಜ್ಯಗಳ ಮೂಲಕ 6,600 ಕಿ.ಮೀ.ಗಳನ್ನು ಕ್ರಮಿಸಿತ್ತು. 2024ರ ಮಾರ್ಚ್ 16ರಂದು ಮುಂಬೈನಲ್ಲಿ ಸಮಾರೋಪಗೊಂಡಿತ್ತು.

ಪ್ರಧಾನಿಯವರ ಭೇಟಿಗಾಗಿ ಮಣಿಪುರ ಇನ್ನೂ ಕಾಯುತ್ತಿದೆ. ಅವರು ಪ್ರಪಂಚದಾದ್ಯಂತ ಹೋಗಲು ಸಮಯ, ಒಲವು ಮತ್ತು ಶಕ್ತಿಯನ್ನು ಹೊಂದಿದ್ದಾರೆ. ಆದರೆ, ಮಣಿಪುರದ ಸಂಕಷ್ಟದಲ್ಲಿರುವ ಜನರನ್ನು ಭೇಟಿ ಮಾಡುವುದು ಅವರಿಗೆ ಅಗತ್ಯವಿಲ್ಲ” ಎಂದು ಹೇಳಿದ್ದಾರೆ. “ಪ್ರಧಾನಿಯವರು ತಮ್ಮ ಪಕ್ಷದ ಶಾಸಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಮಣಿಪುರದ ರಾಜಕೀಯ ನಾಯಕರನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.

ಮಣಿಪುರದಲ್ಲಿ 2023ರ ಮೇ 3 ವೇಳೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರ ಇನ್ನೂ ಮುಂದುವರೆದಿದೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಅದಾಗ್ಯೂ, ಕಳೆದ ನವೆಂಬರ್‌ನಿಂದ ಈ ಹಿಂಸಾಚಾರ ಮತ್ತೇ ಹೆಚ್ಚಾಗಿವೆ.

ಇದನ್ನೂಓದಿ:  ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...