ಲೋಕಸಭೆ 2024ರ ಚುನಾವಣೆಯಲ್ಲಿ ಭಾರತದ ಆಡಳಿತ ಪಕ್ಷವು ಸೋತಿದೆ ಎಂದು ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದು ಇದೀಗ ವಿವಾದಕ್ಕೆ ಕಾರಣಗವಾಗಿದೆ. ಬಿಜೆಪಿ ಈ ಹೇಳಿಕೆಯನ್ನು ಭಾರತದ ವರ್ಚಸ್ಸಿಗೆ ಕಳಂಕ ಎಂದು ಪ್ರತಿಪಾದಿಸಿದ್ದು, ಹಾಗಾಗಿ ಈ ಬಗ್ಗೆ ಕ್ಷಮೆಯಾಚಿಸುವಂತೆ ಮೆಟಾಗೆ ಸಮನ್ಸ್ ಜಾರಿ ಮಾಡುವುದಾಗಿ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸತ್ತಿನ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮಂಗಳವಾರ ಹೇಳಿದ್ದಾರೆ. ಲೋಕಸಭೆ 2024ರ ಚುನಾವಣೆ
“ಈ ತಪ್ಪು ಮಾಹಿತಿಗಾಗಿ ಸಮಿತಿಯು ಮೆಟಾಗೆ ಸಮನ್ಸ್ ಜಾರಿ ಮಾಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರವೊಂದರ ಬಗ್ಗೆ ತಪ್ಪಾದ ಮಾಹಿತಿ ನೀಡುವುದು ಅದರ ವರ್ಚಸ್ಸಿಗೆ ಕಳಂಕ ತರುತ್ತದೆ. ಈ ತಪ್ಪಿಗಾಗಿ ಈ ಸಂಸ್ಥೆ ಭಾರತೀಯ ಸಂಸತ್ತಿನಲ್ಲಿ ಮತ್ತು ಇಲ್ಲಿನ ಜನರಲ್ಲಿ ಕ್ಷಮೆಯಾಚಿಸಬೇಕು” ಎಂದು ದುಬೆ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಕೊರೊನಾ ಸಾಂಕ್ರಾಮಿಕ ರೋಗದಿಂದ ಉದ್ಭವಿಸಿದ ಸಮಸ್ಯೆಗಳಿಂದಾಗಿ ಭಾರತದಲ್ಲಿ ಹಾಲಿ ಸರ್ಕಾರ 2024 ರಲ್ಲಿ ನಡೆದ ಚುನಾವಣೆಯಲ್ಲಿ ಸೋತಿದೆ ಎಂದು ಮೆಟಾ ಸಮೂಹದ ಕಂಪನಿಗಳಲ್ಲಿ ನಿಯಂತ್ರಣ ಪಾಲನ್ನು ಹೊಂದಿರುವ ಫೇಸ್‌ಬುಕ್ ಸಹ-ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಹೇಳಿದ್ದರು. ಅವರ ಹೇಳಿಕೆಯು “ವಾಸ್ತವಿಕವಾಗಿ ತಪ್ಪಾಗಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಜುಕರ್‌ಬರ್ಗ್ ಅವರಿಂದಲೇ ತಪ್ಪು ಮಾಹಿತಿ ಬಂದಿರುವುದು ನಿರಾಶಾದಾಯಕವಾಗಿದೆ. ಸತ್ಯ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯೋಣ” ಎಂದು ಅಶ್ವಿನಿ ವೈಷ್ಣವ್ ಅವರು ಎಕ್ಸ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮೆಟಾವನ್ನು ಟ್ಯಾಗ್ ಮಾಡಿದ್ದಾರೆ. ಲೋಕಸಭೆ 2024ರ ಚುನಾವಣೆ
“ಕೊರೊನಾ ಸಮಯದಲ್ಲಿ 800 ಮಿಲಿಯನ್ ಜನರಿಗೆ ಉಚಿತ ಆಹಾರ, 2.2 ಬಿಲಿಯನ್ ಉಚಿತ ಲಸಿಕೆಗಳು ಮತ್ತು ವಿಶ್ವಾದ್ಯಂತ ರಾಷ್ಟ್ರಗಳಿಗೆ ನೆರವು ನೀಡುವುದರಿಂದ ಹಿಡಿದು, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುನ್ನಡೆಸುವವರೆಗೆ, ಪ್ರಧಾನಿ ಮೋದಿಯವರ ನಿರ್ಣಾಯಕ 3 ನೇ ಅವಧಿಯ ಗೆಲುವು ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಅವರು ಹೇಳಿದ್ದಾರೆ.
ಜೋ ರೋಗನ್ ಪಾಡ್‌ಕ್ಯಾಸ್ಟ್‌ನಲ್ಲಿ ಕಾಣಿಸಿಕೊಂಡ ಜುಕರ್‌ಬರ್ಗ್, 2024 ಪ್ರಪಂಚದಾದ್ಯಂತ ದೊಡ್ಡ ಚುನಾವಣಾ ವರ್ಷವಾಗಿತ್ತು. ಈ ವರ್ಷದಲ್ಲಿ ಭಾರತದಂತಹ ಹಲವು ದೇಶಗಳಲ್ಲಿ, ಅಧಿಕಾರದಲ್ಲಿರುವವರು ಮತದಾನದಲ್ಲಿ ಸೋತರು ಎಂದು ಹೇಳಿದ್ದರು.
2024 ರ ಚುನಾವಣೆಯಲ್ಲಿ ಬಿಜೆಪಿ ತನ್ನ ಬಹುಮತವನ್ನು ಕಳೆದುಕೊಂಡಿತ್ತು. ಆದರೆ, ಪಕ್ಷದ ನೇತೃತ್ವದ ಆಡಳಿತ ಮೈತ್ರಿಕೂಟವು ಆರಾಮದಾಯಕ ಬಹುಮತವನ್ನು ಗಳಿಸಿತ್ತು.ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.
ಇದನ್ನೂಓದಿ: ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ


