Homeಮುಖಪುಟಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

ಡ್ರಗ್ಸ್ ಪ್ರಕರಣ : ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

- Advertisement -
- Advertisement -

ನಟಿ ರಾಗಿಣಿ ದ್ವಿವೇದಿ ವಿರುದ್ಧದ ಮಾದಕವಸ್ತು ಸೇವನೆ ಹಾಗೂ ಮಾರಾಟಕ್ಕೆ ರೇವ್‌ ಪಾರ್ಟಿ ಆಯೋಜಿಸಿದ್ದರು ಎನ್ನಲಾದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಭೌತಿಕ ಸಾಕ್ಷ್ಯಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್‌ ವಿಫಲವಾದ ಕಾರಣಕ್ಕೆ ಪ್ರಕರಣದ ಎಲ್ಲ ಪ್ರಕ್ರಿಯೆಗಳನ್ನು ರದ್ದುಪಡಿಸಿರುವುದಾಗಿ ನ್ಯಾಯಾಲಯ ಹೇಳಿದೆ. ಮತ್ತೊಬ್ಬ ಆರೋಪಿ ಪ್ರಶಾಂತ್ ರಂಕ ವಿರುದ್ಧದ ಪ್ರಕರಣವನ್ನು ಕೂಡ ರದ್ದುಪಡಿಸಲಾಗಿದೆ.

‘ಸ್ಯಾಂಡಲ್‌ವುಡ್‌ ಡ್ರಗ್‌ ಪ್ರಕರಣ’ ಎಂದೇ ಮಾಧ್ಯಮಗಳಲ್ಲಿ ವರದಿಯಾಗಿದ್ದ ಈ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಹಾಗೂ ನಾಲ್ಕನೇ ಆರೋಪಿ ಪ್ರಶಾಂತ್‌ ರಂಕ ಅವರು ಪ್ರಕರಣದ ರದ್ದುಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರ ಹೈಕೋರ್ಟ್ ಏಕಸದಸ್ಯ ಪೀಠ ಪುರಸ್ಕರಿಸಿದೆ.

“ಸಹ ಆರೋಪಿಗಳ ಹೇಳಿಕೆ ಮತ್ತು ಆರೋಪ ಪಟ್ಟಿಯಲ್ಲಿನ ಸಾಕ್ಷಿಗಳನ್ನು ಹೊರತುಪಡಿಸಿ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್‌ ರಂಕ ಅವರು ಮೋಜು ಕೂಟಗಳನ್ನು (ರೇವ್ ಪಾರ್ಟಿ) ಆಯೋಜಿಸಿದ್ದರು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿದ್ದರು ಎಂಬುವುದಕ್ಕೆ ಪ್ರಾಸಿಕ್ಯೂಷನ್‌ ಯಾವುದೇ ಭೌತಿಕ ಸಾಕ್ಷ್ಯಗಳನ್ನು ಒದಗಿಸಿಲ್ಲ” ಎಂದಿರುವ ನ್ಯಾಯಾಲಯ, ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ಕಳೆದ (2024) ಜೂನ್‌ನಲ್ಲಿ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿತ್ತು.

2020ರ ಜುಲೈ 5, 8 ಮತ್ತು 17ರಂದು ನಡೆದಿದ್ದ ಮೋಜು ಕೂಟಗಳನ್ನು (ರೇವ್ ಪಾರ್ಟಿ) ನಟಿ ರಾಗಿಣಿ ಮತ್ತು ಪ್ರಶಾಂತ್‌ ಅವರು ಆಯೋಜಿಸಿ, ಅಲ್ಲಿಗೆ ಬಂದವರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಅನುವು ಮಾಡಿಕೊಟ್ಟಿದ್ದಾರೆ ಎಂಬ ನಿರ್ದಿಷ್ಟ ಆರೋಪ ಮಾಡಲಾಗಿತ್ತು.

ಈ ಪ್ರಕರಣದ 16ನೇ ಆರೋಪಿ ಬಿ ಕೆ ರವಿಶಂಕರ್‌ ಎಂಬವರ ಸ್ವಯಂ ತಪ್ಪೊಪ್ಪಿಗೆ ಹೇಳಿಕೆ ಆಧರಿಸಿ ಅವರನ್ನು ಆರೋಪಿಯನ್ನಾಗಿಸಲಾಗಿದೆ ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ವೀರಣ್ಣ ಜಿ. ತಿಗಡಿ ಮತ್ತು ಅರ್ಜಿದಾರರ ಪರವಾಗಿ ವಕೀಲ ಎ ಮಹಮ್ಮದ್‌ ತಾಹೀರ್ ಮತ್ತು ವಿ ಭರತ್‌ ಕುಮಾರ್‌ ವಾದಿಸಿದ್ದರು.

ಪ್ರಕರಣದ ಹಿನ್ನೆಲೆ : ನಟಿ ರಾಗಿಣಿ ಮತ್ತು ಇತರರು ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಮೋಜು ಕೂಟಗಳನ್ನು ಆಯೋಜಿಸಿ, ಅನೇಕ ಗ್ರಾಹಕರನ್ನು ಕರೆಸಿ ಡ್ರಗ್‌ ಪೆಡ್ಲರ್‌ಗಳ ಮೂಲಕ ಕೂಟಕ್ಕೆ ಬರುವ ಉದ್ಯಮಿಗಳು, ಸೆಲೆಬ್ರಿಟಿಗಳು, ನಟ-ನಟಿಯರು, ಡಿಜೆಗಳು, ಸಾಫ್ಟ್‌ವೇರ್‌ ಉದ್ಯೋಗಿಗಳು ಇತರರಿಗೆ ಮಾದಕ ವಸ್ತುಗಳನ್ನು ಪೂರೈಸಿ, ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾರೆ ಎಂದು ಸಿಸಿಬಿಯ ಎಸಿಪಿ ಕೆ ಸಿ ಗೌತಮ್‌ ಅವರು ಕಾಟನ್‌ ಪೇಟೆ ಠಾಣೆಯಲ್ಲಿ 2020ರ ಸೆಪ್ಟೆಂಬರ್‌ 4ರಂದು ದೂರು ದಾಖಲಿಸಿದ್ದರು. ಪ್ರಕರಣದ ಕುರಿತು ತನಿಖೆ ಮಾಡುವಾಗ ಬಿ ಕೆ ರವಿಶಂಕರ್‌ ಎಂಬಾತನನ್ನು ವಶಕ್ಕೆ ಪಡೆದಿದ್ದ ಗೌತಮ್‌ ಅವರು ಮಾಹಿತಿ ಸಂಗ್ರಹಿಸಿದ್ದರು. ಈ ಮಾಹಿತಿ ಆಧಾರದಲ್ಲಿ ಪ್ರಕರಣ ದಾಖಲಿಸಿದ್ದರು.

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...