Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ| 'ಬಿಜೆಪಿ ವಿರುದ್ಧ ಒಗ್ಗಟ್ಟಿನ ಅಗತ್ಯವಿದೆ' ಎಂದ ಟಿಎಂಸಿ ಅಭಿಷೇಕ್ ಬ್ಯಾನರ್ಜಿ

ದೆಹಲಿ ವಿಧಾನಸಭೆ ಚುನಾವಣೆ| ‘ಬಿಜೆಪಿ ವಿರುದ್ಧ ಒಗ್ಗಟ್ಟಿನ ಅಗತ್ಯವಿದೆ’ ಎಂದ ಟಿಎಂಸಿ ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ವನ್ನು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಬುಧವಾರ ಬೆಂಬಲಿಸಿದ್ದಾರೆ. “ಪ್ರಾದೇಶಿಕ ಪಕ್ಷಗಳು ಒಗ್ಗೂಡಿ ಬಿಜೆಪಿ ವಿರುದ್ಧದ ಹೋರಾಟವನ್ನು ಬಲಪಡಿಸುವ ಅಗತ್ಯವಿದೆ” ಎಂದು ಅವರು ಒತ್ತಿ ಹೇಳಿದ್ದಾರೆ.

ಬಿಜೆಪಿಯನ್ನು ಸೋಲಿಸುವ ಸಾಮೂಹಿಕ ಗುರಿಯೊಂದಿಗೆ ರಚಿಸಲಾದ ವಿರೋಧ ಪಕ್ಷ ಐಎನ್‌ಡಿಐಎ ಬಣವು ತಮ್ಮ ಭದ್ರಕೋಟೆಗಳಲ್ಲಿ ಪ್ರಾದೇಶಿಕ ಪಕ್ಷಗಳನ್ನು ಸಬಲೀಕರಣಗೊಳಿಸಲು ನಿರ್ಧರಿಸಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಎಐಟಿಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬ್ಯಾನರ್ಜಿ ಇದೇ ಸಂದರ್ಭದಲ್ಲಿ ಪುನರುಚ್ಚರಿಸಿದ್ದಾರೆ.

ತಮಿಳುನಾಡು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ತಂತ್ರವನ್ನು ಅನುಸರಿಸಲಾಗಿದೆ ಮತ್ತು ದೆಹಲಿಗೂ ಅನ್ವಯಿಸಬೇಕು ಎಂದು ಅವರು ಗಮನಸೆಳೆದರು.

“ಇಂಡಿಯಾ ಬ್ಲಾಕ್ ರಚನೆಯಾದಾಗ, ಪ್ರಾದೇಶಿಕ ಪಕ್ಷಗಳು ಎಲ್ಲೆಲ್ಲಿ ಪ್ರಬಲವಾಗಿವೆಯೋ ಅಲ್ಲೆಲ್ಲಾ ಅವು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರಬೇಕೆಂದು ನಾವು ನಿರ್ಧರಿಸಿದ್ದೇವೆ. ದೆಹಲಿಯಲ್ಲಿ, ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯವಿರುವ ಪಕ್ಷ ಎಎಪಿ ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಕಳೆದ ಚುನಾವಣೆಯಲ್ಲಿ ಅವರು 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆದ್ದರು. ಬಿಜೆಪಿಯನ್ನು ಸೋಲಿಸಲು ಉತ್ತಮ ಅವಕಾಶ ಹೊಂದಿರುವ ಪಕ್ಷವನ್ನು ನಾವು ಏಕೆ ಬೆಂಬಲಿಸಬಾರದು? ಬಿಜೆಪಿಯನ್ನು ಸೋಲಿಸುವುದು ನಮ್ಮ ಅಂತಿಮ ಗುರಿಯಾಗಿದೆ, ಎಎಪಿಯನ್ನು ಬೆಂಬಲಿಸುವುದು ಈ ಉದ್ದೇಶದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಬ್ಯಾನರ್ಜಿ ಹೇಳಿದರು.

ಡೈಮಂಡ್ ಹಾರ್ಬರ್ ಕ್ಷೇತ್ರದ ಟಿಎಂಸಿ ಸಂಸದರು ನಡೆಸಿದ ಉಪಕ್ರಮದ ಭಾಗವಾಗಿ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾದಲ್ಲಿ ಆಯೋಜಿಸಲಾದ ‘ಸೇಬಾಶ್ರಯ್’ ಎಂಬ ಆರೋಗ್ಯ ಶಿಬಿರದಲ್ಲಿ ಅವರು ಮಾತನಾಡಿದರು.

ಇಂಡಿಯಾ ಮೈತ್ರಿಕೂಟದ ಪ್ರಾಥಮಿಕ ಗುರಿ ಬಿಜೆಪಿಯನ್ನು ಸೋಲಿಸುವುದು ಮತ್ತು ಪ್ರಬಲ ಸ್ಪರ್ಧಿಯಾಗಿ ಕಾಣುವ ದೆಹಲಿಯಲ್ಲಿ ಎಎಪಿಯನ್ನು ಬೆಂಬಲಿಸುವುದು ಅತ್ಯಗತ್ಯ ಎಂದು ಬ್ಯಾನರ್ಜಿ ಒತ್ತಿ ಹೇಳಿದರು.

“ದೆಹಲಿಯಲ್ಲಿ, ಬಿಜೆಪಿಯನ್ನು ಯಾರು ಸೋಲಿಸಬಹುದು? ಎಎಪಿ ಅಥವಾ ಕಾಂಗ್ರೆಸ್? ಬಿಜೆಪಿಯನ್ನು ಸೋಲಿಸುವುದು ನಮ್ಮ ಸಾಮೂಹಿಕ ಗುರಿಯಾಗಿದ್ದರೆ, ಅದನ್ನು ಸಾಧಿಸಲು ಕಠಿಣವಾಗಿ ಹೋರಾಡುತ್ತಿರುವ ಎಎಪಿಯನ್ನು ನಾವು ಬೆಂಬಲಿಸಬೇಕು” ಎಂದು ಅವರು ಹೇಳಿದರು.

ಕಾಂಗ್ರೆಸ್ ಪಾತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ಯಾನರ್ಜಿ, ರಾಷ್ಟ್ರ ರಾಜಧಾನಿಯಲ್ಲಿ ಎಎಪಿಯ ಯಶಸ್ಸು ಬಿಜೆಪಿಯನ್ನು ಎದುರಿಸಲು ಅದನ್ನು ಪ್ರಬಲ ಶಕ್ತಿಯಾಗಿ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

“ನಾವು ನಿಜವಾಗಿಯೂ ಬಿಜೆಪಿಯನ್ನು ಸೋಲಿಸಲು ಬಯಸಿದರೆ, ನಾವು ಬಲಿಷ್ಠವಾದ ಶಕ್ತಿಯನ್ನು ಸಬಲೀಕರಣಗೊಳಿಸಬೇಕು” ಎಂದು ಅವರು ಪ್ರತಿಪಾದಿಸಿದರು.

ದೆಹಲಿಯ ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದ್ದು, ಬಿಜೆಪಿ ಮತ್ಅಭಿ‍‍ಷೇಕ್ ಬ್ಯಾನರ್ಜಿತು ಕಾಂಗ್ರೆಸ್ ಸತತ ಮೂರನೇ ಅವಧಿಗೆ ಎಎಪಿ ಅಧಿಕಾರಕ್ಕೆ ಬರುವುದನ್ನು ತಡೆಯುವ ಗುರಿಯನ್ನು ಹೊಂದಿದ್ದು, ತ್ರಿಕೋನ ಸ್ಪರ್ಧೆ ನಡೆಯುತ್ತಿದೆ.

ಇದನ್ನೂ ಓದಿ; ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...