Homeಮುಖಪುಟಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

ಕೇರಳದ ಸಮಾಧಿ ಪ್ರಕರಣ | ಗೋಪನ್ ಸ್ವಾಮಿ ಶವ ಹೊರ ತೆಗೆದ ಪೊಲೀಸರು

- Advertisement -
- Advertisement -

ಕೇರಳದಲ್ಲಿ ಭಾರೀ ಸದ್ದು ಮಾಡಿರುವ ನಿವೃತ್ತ ಹೆಡ್‌ಲೋಡ್‌ ಕಾರ್ಮಿಕ ಗೋಪನ್‌ ಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ, ಕುಟುಂಬಸ್ಥರ ವಿರೋಧದ ನಡುವೆಯೂ ಗುರುವಾರ (ಜ.15) ಪೊಲೀಸರು ಗೋಪನ್‌ ಸ್ವಾಮಿಯವರ ಶವವನ್ನು ಸಮಾಧಿಯಿಂದ ಹೊರ ತೆಗೆದಿದ್ದಾರೆ.

ತಿರುವನಂತಪುರಂ ಜಿಲ್ಲೆಯ ನೆಯ್ಯತ್ತಿಂಕರ ಬಳಿಯ ಅರಳುಮೂಡುವಿನ ಮನೆ ಬಳಿ 72 ವರ್ಷದ ಗೋಪನ್ ಸ್ವಾಮಿಯವರ ಶವ ಹೂತಿದ್ದ ಕುಟುಂಬಸ್ಥರು ಸಮಾಧಿ ನಿರ್ಮಿಸಿದ್ದರು.

ಸ್ವಯಂ ಗೋಷಿತ ಗುರು ಎನ್ನಲಾದ ನಿವೃತ್ತ ಹೆಡ್‌ಲೋಡ್ ಕಾರ್ಮಿಕ ಗೋಪನ್ ಸ್ವಾಮಿ ಜನವರಿ 9ರಿಂದ ನಾಪತ್ತೆಯಾಗಿದ್ದರು. ಆ ಬಳಿಕ ಸ್ಥಳೀಯ ದೇವಸ್ಥಾನದ ಬಳಿ ಅವರ ಸಮಾಧಿ ಕಂಡು ಬಂದಿತ್ತು. ಗೋಪನ್ ಸ್ವಾಮಿ ಆಧ್ಯಾತ್ಮಿಕತೆಯ ಪರಾಕಾಷ್ಠೆಯನ್ನು ತಲುಪಿ ಸ್ವಇಚ್ಛೆಯಿಂದ ಸಮಾಧಿಯಾಗಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದರು.

ಈ ಪ್ರಕರಣದ ಹಿಂದೆ ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು. ಜನವರಿ 13ರಂದು ಸಮಾಧಿ ಬಳಿಗೆ ಬಂದ ಪೊಲೀಸರು ಮತ್ತು ಇತರ ಅಧಿಕಾರಿಗಳು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದರು. ಆದರೆ, ಇದಕ್ಕೆ ಗೋಪನ್ ಸ್ವಾಮಿ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಗೋಪನ್ ಸ್ವಾಮಿ ಪತ್ನಿ ಸುಲೋಚನಾ, ಮಕ್ಕಳಾದ ಸನಂದನ್, ರಾಜಸೇನನ್ ಸಮಾಧಿ ಬಳಿ ಅಡ್ಡಲಾಗಿ ನಿಂತು ಪೊಲೀಸರನ್ನು ತಡೆದಿದ್ದರು.

“ಗೋಪನ್ ಸ್ವಾಮಿ ಸಾವಿಗೂ ಮುನ್ನ ಆಧ್ಯಾತ್ಮಿಕತೆಯ ಬಗ್ಗೆ ಮಾತನಾಡಿದ್ದಾರೆ. ಅವರ ಸಾವನ್ನು ವೈದ್ಯರಲ್ಲ, ಶಿವನೇ ನಿರ್ಧರಿಸಿದ್ದಾನೆ. ಹಾಗಾಗಿ, ವೈದ್ಯಕೀಯ ದೃಢೀಕರಣದ ಅಗತ್ಯವಿಲ್ಲ ಎಂದು ಗೋಪನ್‌ ಸ್ವಾಮಿ ಪತ್ನಿ ಸುಲೋಚನಾ ಮಾಧ್ಯಮಗಳ ಮುಂದೆ ಹೇಳಿದ್ದರು.

ಆದರೆ, ಜಿಲ್ಲಾಧಿಕಾರಿ ಅನು ಕುಮಾರಿ ಅವರು ಗೋಪನ್‌ ಸ್ವಾಮಿ ನಾಪತ್ತೆ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಜಿಲ್ಲಾಧಿಕಾರಿ ಆದೇಶದ ವಿರುದ್ದ ಗೋಪನ್ ಸ್ವಾಮಿ ಕುಟುಂಬ ಹೈಕೋರ್ಟ್ ಮೊರೆ ಹೋಗಿತ್ತು. ನಮ್ಮ ಇಚ್ಛೆಯಂತೆ ಸಮಾಧಿ ಮಾಡುವುದು ನಮ್ಮ ಹಕ್ಕು. ನಮ್ಮ ಧಾರ್ಮಿಕ ನಂಬಿಕೆ ಆಚರಿಸಲು ಸಂವಿಧಾನದಲ್ಲಿ ಅವಕಾಶವಿದೆ. ಗೋಪನ್‌ ಸ್ವಾಮಿ ತನ್ನ ಧಾರ್ಮಿಕ ನಂಬಿಕೆಯಂತೆ ಸಮಾಧಿಯಾಗಿದ್ದಾರೆ. ಹಾಗಾಗಿ, ಸಮಾಧಿಯಿಂದ ಶವ ಹೊರ ತೆಗೆಯುವುದು ಸರಿಯಲ್ಲ ಎಂದು ಕುಟುಂಬಸ್ಥರು ವಾದಿಸಿದ್ದರು.

ಆದರೆ, ಗೋಪನ್ ಸ್ವಾಮಿ ಕುಟುಂಬದ ವಾದವನ್ನು ಪುರಸ್ಕರಿಸಿದ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶದಂತೆ ಸಮಾಧಿಯಿಂದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಗೋಪನ್ ಸ್ವಾಮಿ ಸಾವನ್ನಪ್ಪಿದರೆ ನೀವು ಮರಣ ಪ್ರಮಾಣ ಪತ್ರ ಏಕೆ ತೆಗೆದುಕೊಂಡಿಲ್ಲ ಎಂದು ಹೈಕೋರ್ಟ್ ಪ್ರಶ್ನಿಸಿತ್ತು.

ವರದಿಗಳ ಪ್ರಕಾರ, ಗುರುವಾರ ಪೊಲೀಸರು ಸಮಾಧಿ ತೆರೆದಾಗ ಅದರೊಳಗೆ ಗೋಪನ್ ಸ್ವಾಮಿಯವರ ಶವ ಬೂದಿ ಅಥವಾ ಭಸ್ಮ ಮತ್ತು ಸುಗಂಧ ದ್ರವ್ಯಗಳಿಂದ ಆವೃತ್ತವಾಗಿ ಕುಳಿತ ಸ್ಥಿತಿಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೀಘ್ರದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಶವ ಹೊರ ತೆಗೆಯುವ ಹಿನ್ನೆಲೆ ಗುರುವಾರ ಬೆಳಿಗ್ಗೆಯೇ ಸಮಾಧಿ ಸ್ಥಳದಲ್ಲಿ ದೊಡ್ಡ ಮಟ್ಟದಲ್ಲಿ ಪೊಲೀಸ್  ಮತ್ತು ಮೂರು ವಿಧಿವಿಜ್ಞಾನ ತಜ್ಞರ ತಂಡಗಳನ್ನು ನಿಯೋಜಿಸಲಾಗಿತ್ತು. ಗಲಾಟೆಯಾಗುವ ಮುನ್ಸೂಚನೆಯಿದ್ದ ಕಾರಣ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು.

ವರದಿಗಳ ಪ್ರಕಾರ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಿ ತನಿಖೆ ಮುಂದುವರಿಸಲಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಗೋಪನ್ ಸ್ವಾಮಿಯದ್ದು ಕೊಲೆಯೂ, ಇಲ್ಲಾ ಅವರೇ ಸಮಾಧಿಯಾದರೋ ಎಂಬುವುದು ಖಚಿತವಾಗಬೇಕಿದೆ.

ಕೋಮು ಬಣ್ಣ ಬಳಿದ ಹಿಂದುತ್ವ ಸಂಘಟನೆಗಳು :

ಗೋಪನ್ ಸ್ವಾಮಿ ಸಮಾಧಿ ಪ್ರಕರಣ ಅವರ ಕುಟುಂಬ ಮತ್ತು ಪೊಲೀಸರ ನಡುವಿನ ಸಂಘರ್ಷ. ಆದರೆ, ‘ಹಿಂದೂ ಐಕ್ಯ ವೇದಿ’ ಮತ್ತು ‘ವಿಎಸ್‌ಡಿಪಿ’ಯಂತಹ ಕೆಲ ಹಿಂದುತ್ವ ಸಂಘಟನೆಗಳು ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿದೆ.

ಮುಸ್ಲಿಮರು ಗೋಪನ್ ಸ್ವಾಮಿಯವರ ಸಮಾಧಿಯನ್ನು ಬಲವಂತವಾಗಿ ತೆರೆಯುವಂತೆ ಮಾಡಿ, ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದೆ. ಆದರೆ, ಪೊಲೀಸರು ಗೋಪನ್ ಸ್ವಾಮಿ ಸಮಾಧಿ ತೆರೆದಿರುವುದು ಹೈಕೋರ್ಟ್ ಆದೇಶದ ಹಿನ್ನಲೆಯಾಗಿದೆ.

ಸೈಫ್ ಅಲಿ ಖಾನ್ ಇರಿತ ಪ್ರಕರಣ; ದಾಳಿಕೋರನಿಗಾಗಿ 7 ಪೊಲೀಸ್ ತಂಡಗಳಿಂದ ಹುಡುಕಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...