Homeಕರ್ನಾಟಕಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

- Advertisement -
- Advertisement -

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ತಿರಸ್ಕರಿಸಿರುವ ಹೈಕೋರ್ಟ್‌, “ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು” ಎಂದು ಗುರುವಾರ (ಜ.16) ಮೌಖಿಕವಾಗಿ ಹೇಳಿದೆ.

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಿಆರ್‌ಪಿಸಿ ಸೆಕ್ಷನ್‌ 207ರ ಅಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇತ್ಯರ್ಥಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲಕ್ಕೂ ಒಂದು ಮಿತಿ ಇರಬೇಕು. ಇದು ಎಲ್ಲವನ್ನೂ ಮೀರಿದೆ. ಈ ರೀತಿಯ ಫೋಟೋಗಳನ್ನು ಯಾರು ಸೆರೆ ಹಿಡಿಯಲು ಸಾಧ್ಯ?” ಎಂದು ಪ್ರಜ್ವಲ್‌ ಪರ ವಕೀಲ ಜಿ ಅರುಣ್‌ ಅವರನ್ನು ನ್ಯಾಯಾಲಯವು ವಿಚಾರಣೆಯ ವೇಳೆ ಪ್ರಶ್ನಿಸಿತು ಎಂದು ವರದಿ ಹೇಳಿದೆ.

“ಸುಪ್ರೀಂ ಕೋರ್ಟ್‌ ಗೋಪಾಲಕೃಷ್ಣ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಪ್ರಕಾರ ಹಾಲಿ ಪ್ರಕರಣಕ್ಕೆ ಅಗತ್ಯವಾದ ಫೋಟೋ, ವಿಡಿಯೋಗಳನ್ನು ಪ್ರಾಸಿಕ್ಯೂಷನ್‌ ಒದಗಿಸಲಿದೆ. ಅದನ್ನು ಹೊರತುಪಡಿಸಿ ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ಫೋಟೋ, ವಿಡಿಯೋಗಳನ್ನು ನೀಡಲಾಗದು. ನೀವು ಏನೋ ಮಾಡಬೇಕು ಎಂಬುದಕ್ಕೆ ಬೇರೊಬ್ಬ ಮಹಿಳೆಯ ಖಾಸಗಿತನದ ಉಲ್ಲಂಘನೆಯಾಗುವುದಕ್ಕೆ ಅವಕಾಶ ನೀಡಲಾಗದು” ಎಂದು ನ್ಯಾಯಾಲಯ ಹೇಳಿದೆ ಎಂದಿದೆ.

ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ಜಿ ಅರುಣ್‌ ಅವರು “ನಾನು ಯಾವುದೇ ಅಶ್ಲೀಲ ಚಿತ್ರಗಳನ್ನು ಒದಗಿಸಿ ಎಂದು ಕೋರಿಲ್ಲ. ಪ್ರಾಸಿಕ್ಯೂಷನ್‌ ಎಫ್‌ಎಸ್‌ಎಲ್‌ ವರದಿಯಲ್ಲಿ ಎಷ್ಟು ಅಶ್ಲೀಲ ಚಿತ್ರಗಳಿವೆ ಎಂದು ಉಲ್ಲೇಖಿಸಿಲ್ಲ. 2024ರ ಏಪ್ರಿಲ್‌ 30ರ ಮಹಜರು ಸಂದರ್ಭ ಮಾಜಿ ಕಾರು ಚಾಲಕನ ಫೋನ್‌ ಮತ್ತು ಸಿಮ್‌ ಜಫ್ತಿ ಮಾಡಲಾಗಿದೆ” ಎಂದಿದ್ದಾರೆ.

ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ನ್ಯಾಯಾಲಯ ನಿರ್ದೇಶಿಸಿದರೆ ಕ್ಲೋನ್‌ ಮಾಡಿರುವ ಎಲ್ಲಾ ದಾಖಲೆಗಳನ್ನು ಒದಗಿಸಲಾಗುವುದು. ಆದರೆ, ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವಿಳಂಬಿಸಲು ಇಂಥ ಅರ್ಜಿಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ” ಎಂದು ಆಕ್ಷೇಪಿಸಿದರು ಎಂದು ವರದಿ ವಿವರಿಸಿದೆ.

ವಾದ-ಪ್ರತಿವಾದ ಆಲಿಸಿದ ಪೀಠವು ಹಾಲಿ ಸಲ್ಲಿಕೆ ಮಾಡಿರುವ ಅರ್ಜಿಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅರ್ಜಿ ಇತ್ಯರ್ಥಪಡಿಸಿದೆ ಎಂದು ವರದಿ ಹೇಳಿದೆ.

ಕೃಪೆ : ಬಾರ್ & ಬೆಂಚ್

ಬೀದರ್‌| ಗುಂಡು ಹಾರಿಸಿ ₹93 ಲಕ್ಷ ಹಣ ದೋಚಿದ ಬಂದೂಕುದಾರಿಗಳು; ಓರ್ವ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...