Homeಮುಖಪುಟಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!

ಪ್ರಧಾನಿ ಮೋದಿಗೆ ಭದ್ರತಾ ಲೋಪ ಪ್ರಕರಣ : 25 ಮಂದಿ ರೈತರ ವಿರುದ್ಧ ಬಂಧನ ವಾರೆಂಟ್‌!

- Advertisement -
- Advertisement -

ಜನವರಿ 5, 2022ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿ ವೇಳೆ ಸಂಭವಿಸಿದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಫಿರೋಝ್‌ಪುರ ಜಿಲ್ಲೆಯ ಭಾರತಿ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಮತ್ತು ಕ್ರಾಂತಿಕಾರಿ ಪೆಂಡು ಮಝ್ದೂರ್ ಯೂನಿಯನ್‌ನ 25 ಸದಸ್ಯರ (ರೈತರ) ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ ಎಂದು ವರದಿಯಾಗಿದೆ.

ಫಿರೋಝ್‌ಪುರದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿದ್ದ ಪ್ರಧಾನಿ ನರೇಂದ್ರ ಮೋದಿ, ಪಿಯರೇನಾ ಫ್ಲೈಓವರ್‌ನಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದ ಕಾರಣ ಕೆಲ ಹೊತ್ತು ರಸ್ತೆಯಲ್ಲೇ ಬಾಕಿ ಆಗಿದ್ದರು. ಬಳಿಕ ಅವರು ಹಿಂದಿರುಗಿದ್ದರು.

ಈ ಘಟನೆ ಸಂಬಂಧ ಜನವರಿ 6, 2022ರಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 283 (ಸಾರ್ವಜನಿಕ ದಾರಿಯಲ್ಲಿ ಅಡಚಣೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ.

ನಂತರ ದುರ್ಬಲ ಎಫ್‌ಐಆರ್ ಬಗ್ಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ, ಪ್ರಕರಣದ ತನಿಖೆಗೆ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿತ್ತು. ಆ ತಂಡದ ತನಿಖೆಯ ಆಧಾರದ ಮೇಲೆ, ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), 353 (ಸಾರ್ವಜನಿಕ ಸೇವಕನ ಮೇಲೆ ಹಲ್ಲೆ), 341 (ಸಂಯಮ ಮೀರಿ ವರ್ತಿಸುವುದು), 186 (ಕರ್ತವ್ಯಕ್ಕೆ ಅಡ್ಡಿ), 149 (ಅಕ್ರಮ ಸಭೆ) ಮತ್ತು ರಾಷ್ಟ್ರೀಯ ಹೆದ್ದಾರಿ ಕಾಯ್ದೆಯ 8-ಬಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಹೆಚ್ಚುವರಿ ಆರೋಪಗಳನ್ನು ಹೊರಿಸಲಾಗಿದೆ.

ಭಾರತಿ ಕಿಸಾನ್ ಯೂನಿಯನ್ (ಬಿಕೆಯು) ಕ್ರಾಂತಿಕಾರಿಯ ಪ್ರಧಾನ ಕಾರ್ಯದರ್ಶಿ ಬಲದೇವ್ ಸಿಂಗ್ ಝಿರಾ ಮತ್ತು ಕ್ರಾಂತಿಕಾರಿ ಪೆಂಡು ಮಝ್ದೂರ್ ಒಕ್ಕೂಟದ ಇತರ ಸದಸ್ಯರು ಮತ್ತು ನಾಯಕರು ಸೇರಿದಂತೆ 26 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆರೋಪಿಗಳಲ್ಲಿ ಒಬ್ಬರಾದ ಮೇಜರ್ ಸಿಂಗ್ ನಿಧನರಾಗಿದ್ದು, 25 ವ್ಯಕ್ತಿಗಳು ಬಂಧನದ ಭೀತಿಯಲ್ಲಿದ್ದಾರೆ.

ಜನವರಿ 3,2025ರಂದು ಫಿರೋಝ್‌ಪುರ ನ್ಯಾಯಾಲಯ ಹೊರಡಿಸಿದ ಬಂಧನ ವಾರೆಂಟ್‌ಗಳ ಪ್ರಕಾರ, ಆರೋಪಿಗಳು ಅನೇಕ ಸಮನ್ಸ್ ಮತ್ತು ವಾರೆಂಟ್‌ಗಳನ್ನು ನೀಡಿದ್ದರೂ ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗಿದ್ದಾರೆ. ಜನವರಿ 22ರೊಳಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕುಲ್‌ಗಢಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿಗೆ ಸೂಚಿಸಲಾಗಿದೆ.

ಫಿರೋಝ್‌ಪುರ ಪೊಲೀಸರು ಬಂಧನ ವಾರೆಂಟ್‌ ಹೊರಡಿಸಿರುವುದನ್ನು ದೃಢಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆರೋಪಿಗಳಲ್ಲಿ ಒಬ್ಬರಾದ ಪಿಯರೇನಾದ ಕಮಲ್‌ಜೀತ್ ಸಿಂಗ್ (37) ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜನವರಿ 14 ರಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ವರೀಂದರ್ ಅಗರ್ವಾಲ್ ಅವರು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಪಂಜಾಬ್ ಪೊಲೀಸರು ಆರೋಪಿಗಳಿಗೆ ಬಂಧನ ವಾರೆಂಟ್‌ಗಳನ್ನು ಕಳುಹಿಸುತ್ತಿದ್ದಾರೆ. ಅವರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ, ತನಿಖೆಗೆ ಸಹಕರಿಸಲು ಕುಟುಂಬ ಸದಸ್ಯರ ಮೇಲೆ ಒತ್ತಡ ಹೇರುತ್ತಿದ್ದಾರೆ. ಪ್ರತಿಭಟನಾ ನಿರತ ರೈತರನ್ನು ಗುರಿಯಾಗಿಸಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಇದನ್ನು ಮಾಡಲಾಗುತ್ತಿದೆ” ಎಂದು ಬಿಕೆಯು ಕ್ರಾಂತಿಕಾರಿಯ ಅಧ್ಯಕ್ಷ ಸುರ್ಜೀತ್ ಸಿಂಗ್ ಫುಲ್ ಆರೋಪಿಸಿದ್ದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

“ರೈತರನ್ನು ಗುರಿಯಾಗಿಸಬೇಡಿ ಎಂದು ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ. ಮೇಲ್ಸೇತುವೆಯಲ್ಲಿ (ಪಿಯರೇನಾ ಫ್ಲೈಓವರ್‌) ಯಾವುದೇ ಘರ್ಷಣೆ ನಡೆದಿಲ್ಲವಾದ್ದರಿಂದ ಕೊಲೆ ಯತ್ನದ ಆರೋಪಗಳು ಆಧಾರರಹಿತವಾಗಿವೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆಯ ಮೇರೆಗೆ ನಾವು ಪ್ರಧಾನಿಯವರ ಭೇಟಿಯ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದೆವು. ಎಫ್‌ಐಆರ್ ಮತ್ತು ನಂತರದ ಕ್ರಮವು ರೈತ ಒಕ್ಕೂಟದ ನಾಯಕರನ್ನು ಬೆದರಿಸಲು ಕೇಂದ್ರ ಸರ್ಕಾರದ ಒತ್ತಡದ ಪರಿಣಾಮವಾಗಿದೆ” ಎಂದು ಸುರ್ಜೀತ್ ಸಿಂಗ್ ಕಿಡಿಕಾರಿದ್ದಾರೆ.

ಜಾತ್ಯತೀತತೆ ಸಂರಕ್ಷಣೆಗೆ ಆರಾಧನಾ ಸ್ಥಳಗಳ ಕಾಯ್ದೆ ಅಗತ್ಯ : ಸುಪ್ರೀಂ ಮೊರೆ ಹೋದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...