Homeಮುಖಪುಟಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

- Advertisement -
- Advertisement -

ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ 190 ಮಿಲಿಯನ್ ಪೌಂಡ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ತಪ್ಪಿತಸ್ಥರು ಎಂದು ಪಾಕಿಸ್ತಾನದ ನ್ಯಾಯಾಲಯ ಶುಕ್ರವಾರ (ಜ.17) ಘೋಷಿಸಿದ್ದು, ಅವರಿಗೆ ಕ್ರಮವಾಗಿ 14 ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆಯ ಜೊತೆಗೆ, ಇಮ್ರಾನ್ ಖಾನ್‌ ಅವರಿಗೆ 10 ಲಕ್ಷ ರೂಪಾಯಿ ಮತ್ತು ಬುಶ್ರಾ ಬೀಬಿ ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಖಾನ್‌ಗೆ ಆರು ತಿಂಗಳು ಮತ್ತು ಬೀಬಿಗೆ ಮೂರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಇಮ್ರಾನ್ ಖಾನ್ ದಂಪತಿ ಸ್ಥಾಪಿಸಿದ ಅಲ್-ಖಾದಿರ್ ವಿಶ್ವವಿದ್ಯಾಲಯದ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಇಮ್ರಾನ್ ಖಾನ್ ಈಗಾಗಲೇ ಜೈಲಿನಲ್ಲಿದ್ದು, ಬುಶ್ರಾ ಬೀಬಿಯನ್ನು ನ್ಯಾಯಾಲಯದಿಂದ ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಜನವರಿ 13ನೇ ತಾರೀಕು ಸೇರಿದಂತೆ ಮೂರು ಬಾರಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ತೀರ್ಪನ್ನು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ನಾಸಿರ್ ಜಾವೇದ್ ರಾಣಾ ಅವರು ಇಂದು (ಜ.17) ಪ್ರಕಟಿಸಿದ್ದಾರೆ.

ಅಡಿಲಾ ಜೈಲಿನಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

“ಇಂದಿನ ತೀರ್ಪು ನ್ಯಾಯಾಂಗದ ಖ್ಯಾತಿಗೆ ಕಳಂಕ ತಂದಿದೆ. ಈ ಪ್ರಕರಣದಲ್ಲಿ ನನಗೆ ಲಾಭವೂ ಆಗಿಲ್ಲ, ಸರ್ಕಾರಕ್ಕೆ ನಷ್ಟವೂ ಆಗಿಲ್ಲ. ನನಗೆ ಯಾವುದೇ ಪರಿಹಾರ ಬೇಡ ಮತ್ತು ಎಲ್ಲಾ ಪ್ರಕರಣಗಳನ್ನು ಎದುರಿಸುತ್ತೇನೆ. ಸರ್ವಾಧಿಕಾರಿಯೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ” ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಅವರ ಪಕ್ಷ ತಿಳಿಸಿದೆ.

ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೊ(ಎನ್‌ಎಬಿ) 2023ರ ಡಿಸೆಂಬರ್‌ನಲ್ಲಿ ಇಮ್ರಾನ್ ಖಾನ್ (72), ಬುಶ್ರಾ ಬೀಬಿ (50) ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು. ದೇಶದ ಖಜಾನೆಗೆ ಇಮ್ರಾನ್ ಖಾನ್ ದಂಪತಿ 190 ಮಿಲಿಯನ್ ಪೌಂಡ್‌ಗಳಷ್ಟು (ಪಾಕಿಸ್ತಾನ ರೂಪಾಯಿಯಲ್ಲಿ 50 ಶತಕೋಟಿ) ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಒಬ್ಬ ಉದ್ಯಮಿ ಸೇರಿ ಪ್ರಕರಣದ ಇತರೆ ಆರೋಪಿಗಳು ದೇಶದಿಂದ ಹೊರಗಿರುವ ಕಾರಣ ಖಾನ್ ಮತ್ತು ಬೀಬಿ ವಿರುದ್ಧ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ವ್ಯವಹಾರವೊಂದರ ಇತ್ಯರ್ಥದ ಬಳಿಕ ರಿಯಲ್‌ ಎಸ್ಟೇಟ್ ಉದ್ಯಮಿಯೊಬ್ಬರಿಂದ 50 ಶತಕೋಟಿ ರೂಪಾಯಿಯನ್ನು ಬ್ರಿಟನ್‌ನ ರಾಷ್ಟ್ರೀಯ ಅಪರಾಧ ಸಂಸ್ಥೆಯು ಪಾಕಿಸ್ತಾನಕ್ಕೆ ಹಿಂದಿರುಗಿಸಿತ್ತು. ಆ ಹಣವನ್ನು ಇಮ್ರಾನ್ ಖಾನ್ ದಂಪತಿ, ಮತ್ತಿತರರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುವುದು ಆರೋಪ.

ರಾಷ್ಟ್ರೀಯ ಖಜಾನೆಗೆ ಸೇರಬೇಕಿದ್ದ ಈ ಹಣವನ್ನು ಬೀಬಿ ಮತ್ತು ಖಾನ್‌ಗೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಹಾಯ ಮಾಡಿದ ಉದ್ಯಮಿಯ ವೈಯಕ್ತಿಕ ಲಾಭಕ್ಕಾಗಿ ತಿರುಗಿಸಿದ್ದರು ಎಂದು ದೂರಲಾಗಿದೆ.

ಅಲ್-ಖಾದಿರ್ ಟ್ರಸ್ಟ್‌ನ ಟ್ರಸ್ಟಿಯಾಗಿರುವ ಬುಶ್ರಾ ಬೀಬಿ, ಈ ಇತ್ಯರ್ಥದಿಂದ ಲಾಭ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಝೇಲಂನಲ್ಲಿರುವ ಅಲ್-ಖಾದಿರ್ ವಿಶ್ವವಿದ್ಯಾಲಯಕ್ಕಾಗಿ 458 ಕನಾಲ್ ((57 ಎಕರೆ) ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು ಸೇರಿದೆ.

ಇಮ್ರಾನ್ ಖಾನ್ ಮತ್ತು ಅವರ ಪಕ್ಷದ ಇತರ ಹಲವಾರು ನಾಯಕರ ಜೈಲು ಶಿಕ್ಷೆಯಿಂದಾಗಿ ದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಪರಿಹರಿಸಲು ಸರ್ಕಾರ ಮತ್ತು ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಡುವೆ ನಡೆಯುತ್ತಿರುವ ಮಾತುಕತೆಯ ಮಧ್ಯೆ ನ್ಯಾಯಾಲಯದ ತೀರ್ಪು ಹೊರ ಬಿದ್ದಿದೆ.

ಇಲ್ಲಿಯವರೆಗೆ ಮೂರು ಸುತ್ತಿನ ಮಾತುಕತೆಗಳು ನಡೆದಿದ್ದು, ಪಿಟಿಐ ತನ್ನ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಲಿಖಿತವಾಗಿ ಮಂಡಿಸಿದೆ.

2022ರಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಖಾನ್ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರು ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಶಂಕಿತನ ಬಂಧಿಸಿದ ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...