ಆದೇಶ ಮಾಡಿದ ದಿನಾಂಕದಿಂದ ಆರು ತಿಂಗಳೊಳಗೆ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಮೀಸಲಾತಿಯನ್ನು ಜಾರಿಗೆ ತರುವಂತೆ ಕೇರಳ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಎ. ಮುಹಮ್ಮದ್ ಮುಸ್ತಾಕ್ ಮತ್ತು ಪಿ. ಕೃಷ್ಣ ಕುಮಾರ್ ಅವರ ಪೀಠವು ನವೆಂಬರ್ 28, 2024 ರಂದು ಈ ಆದೇಶ ಹೊರಡಿಸಿದ್ದು, ಅದನ್ನು ಜನವರಿ 14, 2025 ರಂದು ಹೈಕೋರ್ಟ್‌ನ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗಿದೆ.
ಟ್ರಾನ್ಸ್‌ಜೆಂಡರ್ ಮಹಿಳೆ ಅನೀರಾ ಕಬೀರ್ ಅವರು ಕೇರಳ ಸಾರ್ವಜನಿಕ ಸೇವಾ ಆಯೋಗವು ಇನ್ನೂ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಮೀಸಲಾತಿಯನ್ನು ಜಾರಿಗೆ ತಂದಿಲ್ಲ ಎಂದು ಎತ್ತಿ ತೋರಿಸಿ ಸಲ್ಲಿಸಿದ ಅರ್ಜಿಯನ್ನು ಅನುಸರಿಸಿ ಈ ಆದೇಶವನ್ನು ಹೊರಡಿಸಲಾಗಿದೆ. ಶಿಕ್ಷಣ ಮತ್ತು ಸಾರ್ವಜನಿಕ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಅವರು ಕೋರಿದ್ದರು.
ರಾಜ್ಯ ಸರ್ಕಾರವು 2015 ರಿಂದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಸಹಾಯ ಮಾಡಲು ವಿವಿಧ ಕ್ರಮಗಳನ್ನು ಪರಿಚಯಿಸಿದ್ದರೂ, ಅವರಿಗೆ ಮೀಸಲಾತಿಯನ್ನು ಖಚಿತಪಡಿಸಿಕೊಳ್ಳಲು ನೀತಿಗಳನ್ನು ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿದೆ ಎಂದು ಪೀಠವು ಹೇಳಿದೆ. ನ್ಯಾಯಾಲಯವು ಸಾಮಾನ್ಯವಾಗಿ ನೀತಿ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವಾದರೂ, ಮೂಲಭೂತ ಹಕ್ಕುಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಅದರ ನ್ಯಾಯಾಂಗ ಮಧ್ಯಪ್ರವೇಶ ಕಡ್ಡಾಯವಾಗುತ್ತದೆ ಎಂದು ಅದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಸ್ಪಷ್ಟ ಕಾನೂನು ಮತ್ತು ಸಾಂವಿಧಾನಿಕ ಬಾಧ್ಯತೆಗಳ ಹೊರತಾಗಿಯೂ, ಸರ್ಕಾರವು ನಿರಂತರವಾಗಿ ನಿಷ್ಕ್ರಿಯವಾಗಿರುವುದರಿಂದ, ಈ ನ್ಯಾಯಾಲಯವು ಸಾಂವಿಧಾನಿಕ ಮತ್ತು ಕಾನೂನು ಆದೇಶದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ನಿರ್ದೇಶನಗಳನ್ನು ನೀಡುವುದನ್ನು ಪರಿಗಣಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ನಲ್ಸಾ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ ಪೀಠ ಹೇಳಿದೆ.
2014ರ ಸುಪ್ರಿಂಕೋರ್ಟ್‌ನ ಈ ತೀರ್ಪು ವ್ಯಕ್ತಿಗಳಿಗೆ ತಮ್ಮ ಲಿಂಗವನ್ನು ಸ್ವಯಂ ಗುರುತಿಸಿಕೊಳ್ಳುವ ಹಕ್ಕನ್ನು ನೀಡಿತು. ಜೊತೆಗೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅವರಿಗೆ ಮೀಸಲಾತಿಗಳನ್ನು ಒದಗಿಸುವ ಆದೇಶ ಸೇರಿದಂತೆ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಕಲ್ಯಾಣಕ್ಕಾಗಿ ಹಲವಾರು ನಿರ್ದೇಶನಗಳನ್ನು ನೀಡಿತ್ತು.
ಕೇರಳದ ಯಾವುದೇ ಸಾರ್ವಜನಿಕ ಉದ್ಯೋಗ ಅಧಿಸೂಚನೆಗಳು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಮೀಸಲಾತಿಯನ್ನು ಉಲ್ಲೇಖಿಸಿಲ್ಲ ಎಂದು ಹೈಕೋರ್ಟ್ ಪೀಠ ಇದೇ ವೇಳೆ ಹೇಳಿದೆ. ಕೇರಳ
“ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಪ್ರಕರಣದಲ್ಲಿ (ಸುಪ್ರಾ) ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ, ಸರ್ಕಾರವು ಅವರಿಗೆ ಮೀಸಲಾತಿ ನೀಡುವಲ್ಲಿ ಅವರ ಹಕ್ಕುಗಳ ಅನುಷ್ಠಾನವನ್ನು ವಿಳಂಬ ಮಾಡಲು ಸಾಧ್ಯವಿಲ್ಲ. ಅಂತಹ ಸಂದರ್ಭಗಳಲ್ಲಿ, ಈ ತೀರ್ಪಿನ ಪ್ರತಿಯನ್ನು ಸ್ವೀಕರಿಸಿದ ದಿನಾಂಕದಿಂದ ಆರು ತಿಂಗಳೊಳಗೆ ಟ್ರಾನ್ಸ್‌ಜೆಂಡರ್‌ಗಳಿಗೆ (ವ್ಯಕ್ತಿಗಳಿಗೆ) ಮೀಸಲಾತಿಯನ್ನು ಒದಗಿಸುವ ಕ್ರಮಗಳನ್ನು ಸರ್ಕಾರ ಜಾರಿಗೆ ತರಬೇಕು ಎಂದು ನಾವು ಭಾವಿಸುತ್ತೇವೆ” ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಇದನ್ನೂಓದಿ: ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು
ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು


