Homeಕರ್ನಾಟಕಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ : ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು...

ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ : ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ತುರ್ತು ಸಭೆ

- Advertisement -
- Advertisement -

ದಕ್ಷಿಣದ ಕನ್ನಡ ಜಿಲ್ಲೆಯ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ (ಕೋಟೆಕಾರು ಬ್ಯಾಂಕ್) ಕೆ.ಸಿ.ರೋಡ್ ಶಾಖೆಗೆ ನುಗ್ಗಿದ ಐದು ಮಂದಿ ಬಂದೂಕುಧಾರಿಗಳು ದರೋಡೆ ಮಾಡಿರುವ ಘಟನೆ ಇಂದು (ಜ.17) ನಡೆದಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ.

ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಸಿಎಂ ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್‌ನ ಐಜಿ ಅಮಿತ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಎಸ್‌ಪಿ ಯತೀಶ್, ಡಿವೈಎಸ್‌ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ, “ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್‌ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ.

ಸಹಕಾರಿ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

ಎಲ್ಲಾ ಟೋಲ್‌ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ.

ಕಾರಿನಲ್ಲಿ ಬಂದ ಐವರು ದರೋಡೆಕೋರರು ಬ್ಯಾಂಕ್ ಕಚೇರಿಗೆ ನುಗ್ಗಿ ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಈ ವೇಳೆ ಕೆಲಸದಲ್ಲಿ ನಿರತರಾಗಿದ್ದ ಮಹಿಳಾ ಸಿಬ್ಬಂದಿ ಬೊಬ್ಬೆ ಹೊಡೆಯಲು ಮುಂದಾದಾಗ ಅವರನ್ನು ಹೆದರಿಸಿದ ದರೋಡೆ ಕೋರರು ನಗ ನಗದು ದೋಚಿ ಪರಾರಿಯಾಗಿದ್ದಾರೆ.

ನಿನ್ನೆ ಬೀದರ್‌ನಲ್ಲಿ ದರೋಡೆ

ನಿನ್ನೆ (ಜ.16) ಬೀದರ್‌ನಲ್ಲಿ ಎಟಿಎಂಗೆ ತುಂಬಲು ತಂದಿದ್ದ 93 ಲಕ್ಷ ರೂಪಾಯಿ ಹಣವನ್ನು ದೋಚಿದ್ದ ದರೋಡೆಕೋರರು ಒಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದರು.

ಇದನ್ನೂ ಓದಿ : ಕೆಪಿಸಿಸಿ ನಾಯಕತ್ವ ಬದಲಾವಣೆ ವದಂತಿಗಳನ್ನು ತಳ್ಳಿಹಾಕಿದ ರಣದೀಪ್ ಸಿಂಗ್ ಸುರ್ಜೇವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...