Homeಮುಖಪುಟಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು

ಗುಜರಾತ್: 12 ದರ್ಗಾ ಮತ್ತು ಸ್ಮಾರಕಗಳು ಸೇರಿದಂತೆ 335 ಕಟ್ಟಡಗಳ ತೆರವು

- Advertisement -
- Advertisement -

ಅಹಮದಾಬಾದ್: ಗುಜರಾತ್‌ನ ಬೆಟ್ ದ್ವಾರಕ ಜಿಲ್ಲಾ ಆಡಳಿತವು ಈ ವಾರದಲ್ಲಿ ದರ್ಗಾಗಳು (ಮುಸ್ಲಿಂ ದೇವಾಲಯ), ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ಸೇರಿದಂತೆ ಸುಮಾರು 335 ಕಟ್ಟಡಗಳನ್ನು ಕೆಡವಿದೆ. ಅವುಗಳನ್ನು “ಅತಿಕ್ರಮಣ” ಕಟ್ಟಡಗಳು ಎಂದು ಅದು ಘೋಷಿಸಿದೆ.

ಕಳೆದ ಶನಿವಾರದಿಂದ ಬೆಟ್ ದ್ವಾರಕ ದ್ವೀಪದ ಬಾಲಪರ್ ಗ್ರಾಮದಲ್ಲಿ ಬೃಹತ್ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು.

ಈ ಬೃಹತ್ ಮಟ್ಟದ ತೆರವು ಕಾರ್ಯಾಚರಣೆಯ ವೀಡಿಯೊಗಳನ್ನು ಗುಜರಾತ್‌ನ ಗೃಹ ಸಚಿವ ಹರ್ಷ ಸಂಘವಿಯವರು ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

53,04,25,500 ರೂ. ಮೌಲ್ಯದ 1,00,642 ಚದರ ಮೀಟರ್ ಭೂಮಿಯಲ್ಲಿ ತೆರವುಗೊಳಿಸಲಾಗಿದೆ. ಇವುಗಳಲ್ಲಿ 314 ವಸತಿ ಕಟ್ಟಡಗಳು, 9 ವಾಣಿಜ್ಯ ಕಟ್ಟಡಗಳು ಮತ್ತು 12 ಧಾರ್ಮಿಕ ಸ್ಥಳಗಳು ಮತ್ತು ಸ್ಮಾರಕಗಳು ಸೇರಿವೆ ಎಂದು ಸಂಘವಿ ಹೇಳಿದ್ದಾರೆ.

ಗೌರವಾನ್ವಿತ ಮುಖ್ಯಮಂತ್ರಿ ಭೂಪೇಂದ್ರ ಪಾಟೀಲ್ ನೇತೃತ್ವದಲ್ಲಿ ಈ ಭೂಮಿಯಲ್ಲಿ ಶೀಘ್ರದಲ್ಲೇ ಜನರಿಗೆ ಹೊಸ ಸೌಲಭ್ಯಗಳನ್ನು ಒದಗಿಸಲಿದ್ದೇವೆ. ಎಲ್ಲರ ಉತ್ತಮ ಭವಿಷ್ಯದತ್ತ ಒಂದು ಉತ್ತಮ ಹೆಜ್ಜೆ!” ಎಂದು ಅವರು ಹೇಳಿದರು.

ಆದಾಗ್ಯೂ, ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕುವ ಹೆಸರಿನಲ್ಲಿ ಸರ್ಕಾರವು ಧಾರ್ಮಿಕ ಸ್ಥಳಗಳು ಮತ್ತು ಸ್ಮಾರಕಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಹೇಳಿದೆ.

“ಗುಜರಾತ್‌ನ ಬೆಟ್ ದ್ವಾರಕಾದಲ್ಲಿ ನಡೆಯುತ್ತಿರುವ ಬೃಹತ್ ಮತ್ತು ನಿರಂತರ ಧ್ವಂಸ ಕಾರ್ಯಾಚರಣೆಯಲ್ಲಿ, 13,12,72,000 ರೂ. ಮೌಲ್ಯದ ವಸತಿ ಆಸ್ತಿಗಳು ಮತ್ತು ಹಜರತ್ ಪಂಜ್ ಪೀರ್ ದರ್ಗಾವನ್ನು ಭಾನುವಾರ ಮಾತ್ರವೇ ಕೆಡವಲಾಯಿತು. ಇಲ್ಲಿ ಮುಸ್ಲಿಂ ಪೂಜಾ ಸ್ಥಳಗಳು ಮತ್ತು ಮುಸ್ಲಿಂ ಸ್ಮಾರಕಗಳು ಅನಿವಾರ್ಯವಾಗಿ ಗುರಿಯಾಗಿವೆ ಎಂದು ಹೇಳಬೇಕಾಗಿಲ್ಲ” ಎಂದು SDPI ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಹೇಳಿದರು.

ಸರ್ಕಾರವು ವಿಶ್ವದ ಇತರ ಭಾಗಗಳಲ್ಲಿನ ನಿರ್ಮಾಣದ ಮೇಲೆ ಕೇಂದ್ರೀಕರಿಸಿದೆ. ಆದಾಗ್ಯೂ, ಮೋದಿ ಸರ್ಕಾರವು ತೆರವು ಮತ್ತು ವಿನಾಶಗಳ ಮೇಲೆ ಕೇಂದ್ರೀಕರಿಸಿದೆ ಎಂದು ಅವರು ಹೇಳಿದ್ದಾರೆ.

“ಬುಲ್ಡೋಜರ್ ಬಿಜೆಪಿ ಆಡಳಿತಗಾರರ ವಜ್ರಾಯುಧವಾಗಿದೆ ಮತ್ತು ‘ಅತಿಕ್ರಮಣ’ ಮತ್ತು ‘ಅನಧಿಕೃತ ಅಥವಾ ಅಕ್ರಮ ನಿರ್ಮಾಣವು ಅವರ ಟ್ರಂಪ್ ಕಾರ್ಡ್ ಆಗಿದೆ. ಬುಲ್ಡೋಜರ್‌ನಿಂದ ಹೊಡೆದುರುಳಿಸಲ್ಪಡುವವರು ಯಾವಾಗಲೂ ಮುಸ್ಲಿಮರು ಆಗಿದ್ದಾರೆ” ಎಂದು ಫರಂಗಿಪೇಟೆ ತಿಳಿಸಿದರು.

ಈ ಕಟ್ಟಡಗಳ ತೆರವು ಕಾರ್ಯಾಚರಣೆಯು ಭಾರೀ ಪೊಲೀಸ್ ಭದ್ರತೆಯಲ್ಲಿ ಪ್ರಾರಂಭವಾಗಿದೆ. ಇದಕ್ಕಾಗಿ ಇತರ ಜಿಲ್ಲೆಗಳಿಂದ ಪೊಲೀಸ್ ಸಿಬ್ಬಂದಿಯನ್ನು ಕರೆತರಲಾಗಿದೆ ಮತ್ತು 1,000 ಸಿಬ್ಬಂದಿಯನ್ನು ಬೆಟ್ ದ್ವಾರಕದಲ್ಲಿ ನಿಯೋಜಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ದೇವಭೂಮಿ ದ್ವಾರಕ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ಪಾಂಡೆ, “ಜಿಲ್ಲಾಡಳಿತವು ಬೆಟ್ ದ್ವಾರಕದ ಬಾಲಪರ್ ಪ್ರದೇಶದಲ್ಲಿ ಅಕ್ರಮ ನಿರ್ಮಾಣಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು SRP ಮತ್ತು ಮೆರಿನ್ ಟಾಸ್ಕ್ ಫೋರ್ಸ್ ಸೇರಿದಂತೆ ಸುಮಾರು 1,000 ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಕರಾವಳಿ ಭದ್ರತೆಯನ್ನು ಕಾಪಾಡಿಕೊಳ್ಳಲು, ಪೊಲೀಸ್ ದೋಣಿ ಗಸ್ತು ಮುಂದುವರೆಯಿತು ಮತ್ತು ನಾವು ಕಣ್ಗಾವಲುಗಾಗಿ ಡ್ರೋನ್‌ಗಳನ್ನು ಸಹ ಬಳಸುತ್ತಿದ್ದೇವೆ” ಎಂದಿದ್ದಾರೆ.

ತೆರವು ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಶುಕ್ರವಾರದಿಂದ ಪ್ರದೇಶವನ್ನು ಸುತ್ತುವರೆದಿದ್ದಾರೆ ಮತ್ತು ಹೊರಗಿನವರನ್ನು ಒಳಗೆ ಬಿಡುತ್ತಿಲ್ಲವೆಂದು ವರದಿಗಳು ಹೇಳಿವೆ.

ಬೆಟ್ ದ್ವಾರಕವನ್ನು ಓಖಾ ಕರಾವಳಿಗೆ ಸಂಪರ್ಕಿಸುವ ಭಾರತದ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯಾದ ಸುದರ್ಶನ ಸೇತುಗೆ ಕಳೆದ ವರ್ಷ ಫೆಬ್ರವರಿ 25ರಂದು ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು. ಪ್ರತಿ ವರ್ಷ ಲಕ್ಷಾಂತರ ಭಕ್ತರು ಬೆಟ್ ದ್ವಾರಕಕ್ಕೆ ಭೇಟಿ ನೀಡುತ್ತಾರೆ ಮತ್ತು ಸೇತುವೆ ತೆರೆದ ನಂತರ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚುತ್ತಿದೆ.

ಈ ಹಿಂದೆ, ಅಕ್ಟೋಬರ್ 2022ರಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಗುಜರಾತ್‌ನ ಗಿರ್-ಸೋಮನಾಥ್ ಜಿಲ್ಲೆಯ ವೆರಾವಲ್ ಪ್ರದೇಶದಲ್ಲಿ ಅತಿಕ್ರಮಣಗಳನ್ನು ತೆರವುಗೊಳಿಸುವ  ಕಾರ್ಯಾಚರಣೆಯ ಭಾಗವಾಗಿ ಮಸೀದಿಗಳು ಮತ್ತು ದರ್ಗಾಗಳು ಸೇರಿದಂತೆ ಒಂಬತ್ತು ಧಾರ್ಮಿಕ ಸ್ಥಳಗಳನ್ನು ತೆರವುಗೊಳಿಸಲಾಗಿತ್ತು. ಆನಂತರ ಧಾರ್ಮಿಕ ಸ್ಥಳಗಳನ್ನು ಅಕ್ರಮವಾಗಿ ನೆಲಸಮ ಮಾಡಿದ್ದಕ್ಕಾಗಿ ಗುಜರಾತ್ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮಾಲೀಕರಿಗೆ 15 ದಿನಗಳ ಪೂರ್ವ ಸೂಚನೆ ಇಲ್ಲದೆ ಮತ್ತು ಕಾನೂನುಬದ್ಧ ಮಾರ್ಗಸೂಚಿಗಳನ್ನು ಅನುಸರಿಸದೆ ಯಾವುದೇ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಬಾರದು ಎಂದು ನಿರ್ದೇಶಿಸುವ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿದೆ.

ನೋಟಿಸ್ ಅನ್ನು ನೋಂದಾಯಿತ ಅಂಚೆ ಮೂಲಕ ಮಾಲೀಕರಿಗೆ ತಲುಪಿಸಬೇಕು ಮತ್ತು ಕಟ್ಟಡದ ಹೊರ ಭಾಗದಲ್ಲಿ ಅಂಟಿಸಬೇಕು. ನೋಟಿಸ್ ಅನಧಿಕೃತ ನಿರ್ಮಾಣದ ಸ್ವರೂಪ, ನಿರ್ದಿಷ್ಟ ಉಲ್ಲಂಘನೆಯ ವಿವರಗಳು ಮತ್ತು ತೆರವಿಗೆ ಕಾರಣಗಳನ್ನು ಒಳಗೊಂಡಿರಬೇಕು. ತೆರವು ಕಾರ್ಯಾಚರಣೆಯನ್ನು ವೀಡಿಯೊಗ್ರಾಫ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಾನೂನು ಉಲ್ಲಂಘನೆಗಳು ಕಾನೂನುಬಾಹಿರತೆಯನ್ನು ಉತ್ತೇಜಿಸಬಹುದು ಮತ್ತು ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾಗರಿಕ ಹಕ್ಕುಗಳ ರಕ್ಷಣೆ ಅತ್ಯಗತ್ಯ ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠ ಹೇಳಿದೆ.

ಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...