Homeಕರ್ನಾಟಕಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು - ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

- Advertisement -
- Advertisement -

ಮುಡಾದ 142 ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಬಿಜೆಪಿ ಶನಿವಾರ ಒತ್ತಾಯಿಸಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ಹೇಳಿದೆ. ಇಡಿಯಿಂದ

ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ, 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಸುಮಾರು 300 ಕೋಟಿ ರೂ. ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ತಿಳಿಸಿತ್ತು.

ಮುಡಾ ಹಗರಣದ ಬಗ್ಗೆ ವಿವರಿಸಿದ ಇಡಿ, “ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಶ್ರೀಮತಿ ಬಿ ಎಂ ಪಾರ್ವತಿ ಅವರ ಹೆಸರಿನಲ್ಲಿ 14 ನಿವೇಶನಗಳ (ಪ್ಲಾಟ್‌ಗಳು) ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಭೂಮಿಯನ್ನು ಮೂಲತಃ ಮುಡಾ 3,24,700 ರೂ.ಗಳಿಗೆ ಸ್ವಾಧೀನಪಡಿಸಿಕೊಂಡಿತ್ತು. ಐಷಾರಾಮಿ ಪ್ರದೇಶದಲ್ಲಿ 14 ನಿವೇಶನಗಳ ರೂಪದಲ್ಲಿ ನೀಡಲಾದ ಪರಿಹಾರವು 56 ಕೋಟಿ ರೂ. (ಅಂದಾಜು) ಮೌಲ್ಯದ್ದಾಗಿದೆ” ಎಂದು ಇಡಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಾರ್ವತಿ ಅವರಿಗೆ ಅಕ್ರಮವಾಗಿ ಪರಿಹಾರ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಮಾಜಿ ಮುಡಾ ಆಯುಕ್ತ ಡಿ ಬಿ ನಟೇಶ್ ಪಾತ್ರವು ಪ್ರಮುಖ ಪಾತ್ರ ವಹಿಸಿದೆ ಎಂದು ಇಡಿ ಆರೋಪಿಸಿದೆ. ಇಡಿಯಿಂದ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣದ ವಿರುದ್ಧದ ಹೋರಾಟದಲ್ಲಿ ಇದು ಪ್ರಮುಖ ವಿಜಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಣ್ಣಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಇಡಿ ತನಿಖೆಯು ಸಿದ್ದರಾಮಯ್ಯ ಅವರ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಲು ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಿ ಇಡಿ ತನಿಖೆ ನಡೆಸುತ್ತಿದೆ. ಪ್ರಭಾವಿ ವ್ಯಕ್ತಿಗಳ ‘ಬೇನಾಮಿ’ ಮತ್ತು ಡಮ್ಮಿಗಳಿಗೆ ನಿವೇಶನಗಳ ಹಂಚಿಕೆಯು ವ್ಯವಸ್ಥಿತ ಭ್ರಷ್ಟಾಚಾರವನ್ನು ಮತ್ತಷ್ಟು ಎತ್ತಿ ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

 

ಕರ್ನಾಟಕ ಹೈಕೋರ್ಟ್ ಕೂಡ ರಾಜ್ಯಪಾಲರ ನಿರ್ಧಾರವನ್ನು ಎತ್ತಿಹಿಡಿದಿದೆ ಎಂಬುವುದನ್ನು ಎತ್ತಿತೋರಿಸಿರುವ ವಿಜಯೇಂದ್ರ, ಮುಖ್ಯಮಂತ್ರಿ ಕುಟುಂಬದ ವಿರುದ್ಧದ ಆರೋಪಗಳು ತೀವ್ರ ತನಿಖೆಗೆ ಅರ್ಹವಾಗಿವೆ ಎಂದು ಒತ್ತಿ ಹೇಳಿದ್ದಾರೆ.

ಇಡಿಯನ್ನು ಶ್ಲಾಘಿಸಿರುವ ವಿಜಯೇಂದ್ರ, ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ತನಿಖೆಯನ್ನು ಬುಡಮೇಲು ಮಾಡಲು ಸಿಎಂ ಸಿದ್ದರಾಮಯ್ಯ ಮಾಡಿದ ದುರುದ್ದೇಶಪೂರಿತ ಪ್ರಯತ್ನವನ್ನು ತನಿಖಾ ಸಂಸ್ಥೆ ಇಡಿ ವಿಫಲಗೊಳಿಸಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಅವರ ಬೆಂಬಲಿಗರ ಈ ಸ್ಪಷ್ಟ ಅಧಿಕಾರ ದುರುಪಯೋಗದ ವಿರುದ್ಧ ವಿಧಾನಸಭೆಯ ಒಳಗೆ ಮತ್ತು ಹೊರಗೆ ಬಿಜೆಪಿ ಮತ್ತು ಮಿತ್ರಪಕ್ಷ ಜೆಡಿಎಸ್ ನಿರಂತರ ಪ್ರತಿಭಟನೆ ನಡೆಸುತ್ತವೆ ಎಂದು ಅವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, ಲೋಕಾಯುಕ್ತ ಪೊಲೀಸರು ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ‘ಮೈಸೂರು ಚಲೋ’ ಮೆರವಣಿಗೆ ನಡೆಸಿದ್ದನ್ನು ವಿಜಯೇಂದ್ರ ನೆನಪಿಸಿಕೊಂಡಿದ್ದು, “ಇಡಿಯ ವರದಿಗಳು ಭ್ರಷ್ಟಾಚಾರದ ವಿರುದ್ಧದ ನಮ್ಮ ನಿರಂತರ ಹೋರಾಟವನ್ನು ದೃಢೀಕರಿಸುವುದಲ್ಲದೆ, ಕಣ್ಣಿಗೆ ಕಾಣುವುದಕ್ಕಿಂತ ಇದರಲ್ಲಿ ಹೆಚ್ಚು ಅಕ್ರಮ ನಡೆದಿದೆ ಎಂಬುದನ್ನು ಸಾಬೀತುಪಡಿಸುತ್ತದೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಅಭಿಯಾನವನ್ನು ಅಪಹಾಸ್ಯ ಮಾಡಿದವರಿಗೆ ಇದು ದೊಡ್ಡ ಹೊಡೆತವಾಗಿದೆ!” ಎಂದು ಅವರು ಹೇಳಿದ್ದಾರೆ.

ಇಡಿ ಬಹಿರಂಗಪಡಿಸಿರುವ ಈ ವರದಿ ಕೇವಲ ಮಂಜುಗಡ್ಡೆಯ ತುದಿ ಮಾತ್ರ. ಈ ಹಗರಣದಲ್ಲಿ ಸಾವಿರಾರು ಕೋಟಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಹಗರಣವನ್ನು ಸಂಪೂರ್ಣವಾಗಿ ಬಹಿರಂಗಪಡಿಸಲು ಸಮಗ್ರ ಸಿಬಿಐ ತನಿಖೆ ಅಗತ್ಯವಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂಓದಿ:  ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...