Homeಮುಖಪುಟರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ...

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

- Advertisement -
- Advertisement -

ಐದು ತಿಂಗಳ ಹಿಂದೆ ಆಗಿನ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬಹಳ ಅಬ್ಬರದಿಂದ ಪ್ರಾರಂಭಿಸಿದ ರಾಷ್ಟ್ರೀಯ ವೈದ್ಯಕೀಯ ನೋಂದಣಿ(ಎನ್‌ಎಂಆರ್)ಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದ ಎಂಬಿಬಿಎಸ್ ವೈದ್ಯರಲ್ಲಿ ಕೇವಲ 3% ದಷ್ಟು ಜನರು ಮಾತ್ರ ಇಲ್ಲಿಯವರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಆರ್‌ಟಿಐ ಮೂಲಕ ಕೇಳಲಾಗಿದ್ದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಭಾರತದಲ್ಲಿ 13 ಲಕ್ಷಕ್ಕೂ ಹೆಚ್ಚು ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು (RMP) ಇದ್ದಾರೆ.

ಆರ್‌ಟಿಐ ಉತ್ತರದ ಪ್ರಕಾರ, ಜನವರಿ 14 ರವರೆಗೆ ಎನ್‌ಎಂಆರ್ 8,598 ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಅವುಗಳಲ್ಲಿ 8,318 ಅರ್ಜಿಗಳಿಗೆ ಅನುಮೋದನೆ ಇನ್ನೂ ಬಾಕಿ ಇದ್ದು, ಎರಡು ತಿರಸ್ಕರಿಸಲಾಗಿದೆ ಎಂದು ತಿಳಿದುಬಂದಿದೆ. ಆರ್‌ಟಿಐ ಹೋರಾಟಗಾರ ಡಾ. ಕೆ.ವಿ. ಬಾಬು ಅವರ ಪ್ರಕಾರ, ಅಲೋಪತಿ ವೈದ್ಯರ ಅರ್ಜಿಗಳಲ್ಲಿ ಕೇವಲ 3% ಮಾತ್ರ ಅನುಮೋದನೆ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಲ್ಲಿಸಿದ 8,598 ಅರ್ಜಿಗಳಲ್ಲಿ, 8,318 ಇನ್ನೂ ಅನುಮೋದನೆಗಾಗಿ ಕಾಯುತ್ತಿವೆ. ಆರ್‌ಟಿಐ ಉತ್ತರದ ಪ್ರಕಾರ ಎನ್‌ಎಂಸಿ ಇಲ್ಲಿಯವರೆಗೆ ಕೇವಲ 278 ಅರ್ಜಿಗಳನ್ನು ಮಾತ್ರ ಅನುಮೋದಿಸಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಡಾ. ಬಾಬು ಹೇಳಿದ್ದಾರೆ. ಸಚಿವ ಜೆಪಿ ನಡ್ಡ ಅವರಿಂದ ಪೋರ್ಟಲ್ ಪ್ರಾರಂಭವಾದಾಗಿನಿಂದ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವೈದ್ಯರ ಸಂಖ್ಯೆಯನ್ನು ತಿಳಿಯಲು ಡಿಸೆಂಬರ್ 30 ರಂದು ಅವರು ಆರ್‌ಟಿಐ ಸಲ್ಲಿಸಿದ್ದರು.

97% ಅರ್ಜಿಗಳನ್ನು ಅನುಮೋದಿಸದಿರುವ ಪರಿಣಾಮಗಳನ್ನು NMC ಅರ್ಥಮಾಡಿಕೊಳ್ಳಬೇಕು ಎಂದು ಜನವರಿ 14 ರಂದು ಉತ್ತರ ಪಡೆದ ಡಾ. ಬಾಬು ಹೇಳಿದ್ದಾರೆ. “ಇದರರ್ಥ ಸುಮಾರು ಐದು ತಿಂಗಳಲ್ಲಿ 13 ಲಕ್ಷ ಭಾರತೀಯ ವೈದ್ಯರಲ್ಲಿ 9,000 ಕ್ಕಿಂತ ಕಡಿಮೆ ಜನರು ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚಿನ ಅರ್ಜಿಗಳನ್ನು ಅನುಮೋದಿಸದಷ್ಟೂ ಕಡಿಮೆ ಹೊಸ ಅರ್ಜಿಗಳು ಬರುತ್ತವೆ” ಎಂದು ಅವರು ಹೇಳಿದ್ದಾರೆ.

ಎನ್‌ಎಂಆರ್‌ ಅನ್ನು ಎನ್‌ಎಂಸಿ ಕಾಯ್ದೆ, 2019 ರ ಸೆಕ್ಷನ್ 31 ರ ಅಡಿಯಲ್ಲಿ ಕಡ್ಡಾಯಗೊಳಿಸಲಾಗಿದೆ. ಇದು ಎನ್‌ಎಂಸಿಯ ನೈತಿಕತೆ ಮತ್ತು ವೈದ್ಯಕೀಯ ನೋಂದಣಿ ಮಂಡಳಿ (EMRB) ಪರವಾನಗಿ ಪಡೆದ ಸೇವೆಯಲ್ಲಿರುವ ವೈದ್ಯರು ಹೊಂದಿರುವ ಹೆಸರು, ವಿಳಾಸ ಮತ್ತು ಎಲ್ಲಾ ಮಾನ್ಯತೆ ಪಡೆದ ಅರ್ಹತೆಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ ರೂಪದಲ್ಲಿ ರಾಷ್ಟ್ರೀಯ ನೋಂದಣಿಯನ್ನು ನಿರ್ವಹಿಸುತ್ತದೆ ಎಂದು ಹೇಳುತ್ತದೆ.

ಮೇ 10, 2023 ರ ಗೆಜೆಟ್ ಅಧಿಸೂಚನೆಯ ಪ್ರಕಾರ, ಎನ್‌ಎಂಆರ್‌ನಲ್ಲಿ ದಾಖಲಾಗುವುದು ಕಡ್ಡಾಯವಾಗಿದೆ. ಇದರ ಪ್ರಾರಂಭಿಸುವ ವೇಳೆ ಸಚಿವ ನಡ್ಡಾ, ಭಾರತದ ಅಲೋಪತಿ (MBBS) ನೋಂದಾಯಿತ ವೈದ್ಯರಿಗೆ ಸಮಗ್ರ ಮತ್ತು ಕ್ರಿಯಾತ್ಮಕ ಡೇಟಾಬೇಸ್ ಎಂದು ವಿವರಿಸಿದ್ದರು.

ವೈದ್ಯರ ಹೆಸರುಗಳು ಅಥವಾ ರಾಜ್ಯ ವೈದ್ಯಕೀಯ ಮಂಡಳಿಯ ಹೆಸರುಗಳು ಪ್ರಸ್ತುತ ದತ್ತಾಂಶಕ್ಕೆ ಹೊಂದಿಕೆಯಾಗದಿದ್ದರೆ ಆಧಾರ್ ಅನ್ನು ಅಪ್‌ಲೋಡ್ ಮಾಡಲು ಮತ್ತು ಅಫಿಡವಿಟ್ ಸಲ್ಲಿಸಲು ಕೇಳಲಾಗುತ್ತಿರುವುದರಿಂದ ನೋಂದಣಿ ವಿಳಂಬವಾಗುತ್ತಿದೆ ಎಂದು ಡಾ. ಬಾಬು ಹೇಳಿದ್ದಾರೆ.

ವೈದ್ಯರ ನೋಂದಣಿ ತುಂಬಾ ಜಟಿಲವಾದ ಹಿನ್ನಲೆ, 4 ಲಕ್ಷ ಸದಸ್ಯರನ್ನು ಹೊಂದಿರುವ ಭಾರತೀಯ ವೈದ್ಯಕೀಯ ಸಂಘವು ಕಳೆದ ಅಕ್ಟೋಬರ್‌ನಲ್ಲಿ ಎನ್‌ಎಂಸಿಯೊಂದಿಗೆ ಈ ವಿಷಯವನ್ನು ಚರ್ಚೆ ನಡೆಸಿದೆ.

ಇದನ್ನೂಓದಿ:  ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ವೈದ್ಯನ ವಿರುದ್ಧ ದಲಿತ ಮಹಿಳೆಯಿಂದ ಲೈಂಗಿಕ ಕಿರುಕುಳ ದೂರು; ಎಸ್‌ಪಿಯಿಂದ ವಿವರಣೆ ಕೇಳಿದ ಎನ್‌ಸಿಎಸ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...