Homeಅಂತರಾಷ್ಟ್ರೀಯGaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

- Advertisement -
- Advertisement -

ಫ್ಯಾಲೆಸ್ತೀನಿನ ಗಾಜಾದಲ್ಲಿ ಕಳೆದ 15 ತಿಂಗಳಿನಿಂದ ಯುದ್ಧದಲ್ಲಿರುವ ಇಸ್ರೇಲ್ ಮತ್ತು ಹಮಾಸ್ ನಡುವೆ ಭಾನುವಾರ (ಜನವರಿ 19, 2025) ಬೆಳಿಗ್ಗೆ ಕದನ ವಿರಾಮ ಜಾರಿಗೆ ಬರಲಿದ್ದು, ಕೆಲವು ಗಂಟೆಗಳ ನಂತರ ಒತ್ತೆಯಾಳು ಬಿಡುಗಡೆ ಮಾಡಲಾಗುವುದು ಎಂದು ವರದಿಯಾಗಿದೆ. ಈಜಿಪ್ಟ್, ಕತಾರ್ ಮತ್ತು ಅಮೆರಿಕ ಮಧ್ಯಸ್ಥಿಕೆಯಲ್ಲಿ ತಿಂಗಳುಗಳ ಕಾಲ ನಡೆದ ಮಾತುಕತೆಗಳ ನಂತರ ಕದನ ವಿರಾಮ ಒಪ್ಪಂದವು ತೀರ್ಮಾನವಾಗಿತ್ತು. Gaza ceasefire

ಕದನ ವಿರಾಮ ಒಪ್ಪಂದದ ಹಿನ್ನಲೆ ಇಸ್ರೇಲಿ ಪಡೆಗಳು ಗಾಜಾದ ರಫಾ ಪ್ರದೇಶಗಳಿಂದ ಈಜಿಪ್ಟ್ ಮತ್ತು ಗಾಜಾ ನಡುವಿನ ಗಡಿಯುದ್ದಕ್ಕೂ ಫಿಲಡೆಲ್ಫಿ ಕಾರಿಡಾರ್‌ಗೆ ಹಿಂತೆಗೆದುಕೊಳ್ಳಲು ಪ್ರಾರಂಭಿಸಿದವು ಎಂದು ಹಮಾಸ್ ಪರ ಮಾಧ್ಯಮಗಳು ಭಾನುವಾರ ಮುಂಜಾನೆ ವರದಿ ಮಾಡಿವೆ. ಹಾಗಾಗಿ, ಯುದ್ಧ ಪೀಡಿತ ಗಾಜಾ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. Gaza ceasefire

ಜನವರಿ 20 ರಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನಕ್ಕೆ ಮೊದಲು ಕದನ ವಿರಾಮ ಘೋಷಣೆಯಾಗಿದೆ. ಶನಿವಾರ ರಾಷ್ಟ್ರವನ್ನುದ್ದೇಶಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಾಡಿದ ಭಾಷಣದಲ್ಲಿ, ಮತ್ತೆ ಯುದ್ಧ ಅಗತ್ಯವಿದ್ದರೆ ಇಸ್ರೇಲ್‌ಗೆ ಅಮೆರಿಕದ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

42 ದಿನಗಳ ಮೊದಲ ಹಂತವನ್ನು “ತಾತ್ಕಾಲಿಕ ಕದನ ವಿರಾಮ” ಎಂದು ಕರೆದ ಅವರು, “ಒಂದು ವೇಳೆ ಯುದ್ಧವನ್ನು ಪುನರಾರಂಭಿಸುವಂತೆ ಏನಾದರೂ ನಡೆದರೆ, ನಾವು ಮತ್ತೆ ರಣರಂಗಕ್ಕೆ ಇಳಿಯಲಿದ್ದೇವೆ” ಎಂದು ಹೇಳಿದ್ದರು.

ಅದಾಗ್ಯೂ, ಸ್ಥಳೀಯ ಸಮಯ ಬೆಳಿಗ್ಗೆ 8:30 ಕ್ಕೆ ಕದನ ವಿರಾಮ ಪ್ರಾರಂಭವಾಗಲಿದ್ದು, ಒಪ್ಪಂದ ಪ್ರಾರಂಭವಾಗುವ ಗಡುವು ಮುಗಿದರೂ, ಹಮಾಸ್ ಬಿಡುಗಡೆ ಮಾಡುವ ಒತ್ತೆಯಾಳುಗಳ ಪಟ್ಟಿಯನ್ನು ಹಸ್ತಾಂತರಿಸಲಾಗಿಲ್ಲ ಎಂದು ಇಸ್ರೇಲ್‌ನ ಉನ್ನತ ಮಿಲಿಟರಿ ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಹಗರಿ ಹೇಳಿದ್ದಾರೆ. “ಸೈನ್ಯವು ಗಾಜಾದಲ್ಲಿ ಈಗಲೂ ದಾಳಿ ಮಾಡುವುದನ್ನು ಮುಂದುವರೆಸಿದೆ. ಹಮಾಸ್ ಒಪ್ಪಂದವನ್ನು ಪಾಲಿಸುವವರೆಗೆ ದಾಳಿ ನಡೆಸಲಿದೆ” ಎಂದು ಅವರು ಹೇಳಿದ್ದಾರೆ.

ಪಟ್ಟಿಯನ್ನು ತಲುಪಿಸಲಾಗುವುದು ಮತ್ತು ಒಪ್ಪಂದವು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ ಎಂದು ಮಧ್ಯವರ್ತಿಗಳು ಭರವಸೆ ನೀಡಿದ್ದಾರೆ ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ನಡುವೆಯು ಇಸ್ರೇಲ್ ದಾಳಿಯಿಂದ ಗಾಜಾದಾದ್ಯಂತ ಕನಿಷ್ಠ ಎಂಟು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್‌ಜಝೀರಾ ವರದಿ ಮಾಡಿದೆ.

ಈ ನಡುವೆ, ಬಂಧಿತರು ಮತ್ತು ಕೈದಿಗಳ ವಿನಿಮಯ ಒಪ್ಪಂದದ ಮೊದಲ ಹಂತದಲ್ಲಿ ಬಿಡುಗಡೆಗೊಳ್ಳುವ ಬಂಧಿತರ ಹೆಸರನ್ನು ಹಮಾಸ್ ಬಿಡುಗಡೆ ಮಾಡುವವರೆಗೆ ಗಾಜಾದಲ್ಲಿ ಕದನ ವಿರಾಮ ಪ್ರಾರಂಭವಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ತಾಂತ್ರಿಕ ಕಾರಣದಿಂದ ಕದನ ವಿರಾಮ ವಿಳಂಬವಾಗುತ್ತಿದೆ ಎಂದು ಪ್ಯಾಲೇಸ್ತೀನಿ ಹೋರಾಟಗಾರರು ಹೇಳಿದ್ದಾರೆ.

ಕದನ ವಿರಾಮದ ಮೊದಲ ದಿನದಂದು, ಇಸ್ರೇಲ್-ಹಮಾಸ್ ಒಪ್ಪಂದದ ಪ್ರಕಾರ ಗಾಜಾದಲ್ಲಿ ಕದನ ವಿರಾಮಕ್ಕೆ, ಮೂವರು ಇಸ್ರೇಲಿ ಬಂಧಿತರನ್ನು ಮತ್ತು ಸುಮಾರು 95 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7, 2023 ರಿಂದ ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ನರಮೇಧದಿಂದ ಕನಿಷ್ಠ 46,899 ಪ್ಯಾಲೆಸ್ತೀನಿಯರು ಹತ್ಯೆಯಾಗಿದ್ದು, ಸುಮಾರು 1,10,725 ಜನರು ಗಾಯಗೊಂಡಿದ್ದಾರೆ. ಅದೇ ದಿನ ಪ್ಯಾಲೆಸ್ತೀನ್ ಹೋರಾಟಗಾರ ಗುಂಪು ಹಮಾಸ್ ನೇತೃತ್ವದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕನಿಷ್ಠ 1,139 ಜನರು ಸಾವನ್ನಪ್ಪಿದ್ದರು ಮತ್ತು 200 ಕ್ಕೂ ಹೆಚ್ಚು ಜನರನ್ನು ಅವರು ಸೆರೆಯಾಳುಗಳನ್ನಾಗಿ ಕರೆದೊಯ್ದಿದ್ದರು.

ಇದನ್ನೂಓದಿ:  ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಗಾಝಾ ಕದನ ವಿರಾಮ ಒಪ್ಪಂದ ಅನುಮೋದಿಸಿದ ಇಸ್ರೇಲ್ ಸಂಪುಟ

ಇದನ್ನೂಓದಿ:  ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ರಾಷ್ಟ್ರೀಯ ವೈದ್ಯಕೀಯ ನೋಂದಣಿ | ದಾಖಲಾಗಿದ್ದು ದೇಶದಾದ್ಯಂತ ಕೇವಲ 278 ವೈದ್ಯರು; ಭಾರಿ ಅಬ್ಬರದಿಂದ ಪ್ರಾರಂಭಿಸಿದ್ದ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...