HomeUncategorizedಮಥುರಾ ಶಾಹಿ ಮಸೀದಿ ಸಮೀಕ್ಷೆಗೆ ನೀಡಿದ್ದ ತಡೆ ವಿಸ್ತರಿಸಿದ ಸುಪ್ರೀಂಕೋರ್ಟ್

ಮಥುರಾ ಶಾಹಿ ಮಸೀದಿ ಸಮೀಕ್ಷೆಗೆ ನೀಡಿದ್ದ ತಡೆ ವಿಸ್ತರಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ. ಶಾಹಿ ಮಸೀದಿಯು ಮಥುರಾದ ದೇವಾಲಯದ ಪಕ್ಕವೆ ಇರುವುದರಿಂದ ಬಿಜೆಪಿ ಬೆಂಬಲಿಗರ ಕುಮ್ಮಕ್ಕಿನಿಂದ ಮಸೀದಿಯು ಈ ಹಿಂದೆ ದೇವಸ್ಥಾನವಿದ್ದ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಮಥುರಾ ಶಾಹಿ ಮಸೀದಿ

ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಲಾಗುತ್ತಿರುವ ಸಮೀಕ್ಷೆಯ ವಿರುದ್ಧ ಟ್ರಸ್ಟ್ ಶಾಹಿ ಮಸೀದಿ ಈದ್ಗಾದ ನಿರ್ವಹಣಾ ಸಮಿತಿಯ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 1ರ ನಂತರರ ವಾರದಲ್ಲಿ ಮುಂದೂಡುವುದಾಗಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠ ಹೇಳಿದೆ. ಮಥುರಾ ಶಾಹಿ ಮಸೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಾಗಾಗಿ, ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆದ ಸಮೀಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್‌ನ ಮಧ್ಯಂತರ ಆದೇಶವು ಮುಂದುವರಿಯಲಿದೆ ಎಂದು ಪೀಠ ಹೇಳಿದೆ. ಕಳೆದ ವರ್ಷ ಜನವರಿ 16 ರಂದು ಡಿಸೆಂಬರ್ 14, 2023 ರಂದು ಹೈಕೋರ್ಟ್‌ ನೀಡಿದ್ದ ಆದೇಶದ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಈಗ ಮೂರು ಪ್ರಕರಣಗಳು ಬಾಕಿ ಉಳಿದಿದ್ದು, ಅವೆಲ್ಲವೂ ನ್ಯಾಯಾಲಯದೊಳಗಿನ ಮೇಲ್ಮನವಿಯ ಪ್ರಕರಣಗಳಾಗಿವೆ. ಮತ್ತೊಂದು, ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ, 1991 ರ ಪ್ರಕರಣವಾಗಿದೆ ಎಂದು ಸಿಜೆಐ ಹೇಳಿದ್ದು, ಅವುಗಳನ್ನು ಏಪ್ರಿಲ್ 1 ರಿಂದ ಪ್ರಾರಂಭವಾಗುವ ವಾರದಲ್ಲಿ ಪಟ್ಟಿ ಮಾಡುವುದಾಗಿ ಹೇಳಿದೆ.

ಅದಕ್ಕೂ ಹಿಂದೆ, ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿತ್ತು ಮತ್ತು ಅದರ ಮೇಲ್ವಿಚಾರಣೆಗೆ ನ್ಯಾಯಾಲಯ ಆಯುಕ್ತರ ನೇಮಕಕ್ಕೆ ಒಪ್ಪಿಕೊಂಡಿತ್ತು. ಬಿಜೆಪಿ ಪರ ಅರ್ಜಿದಾರರು, ಮಸೀದಿಯ ಆವರಣದಲ್ಲಿ ಒಂದು ಕಾಲದಲ್ಲಿ ದೇವಾಲಯವಿತ್ತು ಎಂದು ವಾದಿಸಿ ಈ ಪ್ರಕರಣ ದಾಖಲಿಸಿದ್ದರು. ಇದನ್ನು ವಿರೋಧಿಸಿ ಮುಸ್ಲಿಮರು ಸುಪ್ರಿಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ಪರ ಅರ್ಜಿದಾರರು, ಮಥುರಾದಲ್ಲಿ, ಶಾಹಿ ಈದ್ಗಾ ಮಸೀದಿಯನ್ನು ಶ್ರೀ ಕೃಷ್ಣ ಜನ್ಮಭೂಮಿ ಟ್ರಸ್ಟ್‌ನ 13.37 ಎಕರೆ ಭೂಮಿಯ ಒಂದು ಭಾಗದಲ್ಲಿ ನಿರ್ಮಿಸಲಾಗಿದ್ದು, ಅದನ್ನು ಸ್ಥಳಾಂತರಿಸುವಂತೆ ಸಿವಿಲ್ ನ್ಯಾಯಾಧೀಶರ ಹಿರಿಯ ವಿಭಾಗ (III) ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು.

1991 ರ ಪೂಜಾ ಸ್ಥಳಗಳ ಕಾಯ್ದೆಯು ದೇಶದ ಸ್ವಾತಂತ್ರ್ಯದ ದಿನದಂದು ಅಸ್ತಿತ್ವದಲ್ಲಿದ್ದ ಯಾವುದೇ ದೇವಾಲಯದ ಧಾರ್ಮಿಕ ಸ್ವರೂಪವನ್ನು ಬದಲಾಯಿಸುವುದನ್ನು ನಿಷೇಧಿಸುತ್ತದೆ. ಅದಾಗ್ಯೂ, ಈ ಕಾಯ್ದೆಯು ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದವನ್ನು ಮಾತ್ರ ಅದರ ವ್ಯಾಪ್ತಿಯಿಂದ ವಿನಾಯಿತಿ ನೀಡಿತ್ತು.

ಇದನ್ನೂಓದಿ:  ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ

ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...