Homeಕರ್ನಾಟಕಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

ಬಿಜೆಪಿಯ ದಲಿತ ವಿರೋಧಿ ಜನರಿಂದ ಈವರೆಗೂ ನನಗೆ ನ್ಯಾಯ ದೊರಕಿಲ್ಲ: ರಾಧಿಕಾ ವೇಮುಲ

- Advertisement -
- Advertisement -

ದಲಿತ ಸಮುದಾಯದ ವಿದ್ಯಾರ್ಥಿಗಳ ಮೇಲೆ ದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ ಮತ್ತು ಕಿರುಕುಳದ ವಿರುದ್ಧ ‘ರೋಹಿತ್ ಕಾಯ್ದೆ’ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ಬೆಂಗಳೂರಿನ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಇಂದು ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಮಾಲೋಚನಾ ಸಭೆ ನಡೆಯಿತು.

ದೇಶದಾದ್ಯಂತ ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಹಲವು ವಿದ್ಯಾರ್ಥಿ ಹಾಗೂ ದಲಿತ ಸಂಘಟನೆಗಳು ಹಕ್ಕೊತ್ತಾಯ ಮಾಡಿದ್ದು, ಕರ್ನಾಟಕದಲ್ಲಿಯೂ ದಲಿತ, ವಿದ್ಯಾರ್ಥಿ ಮತ್ತು ನಾಗರಿಕ ಸಮಾಜದ ಹಲವಾರು ಸಂಘಟನೆಗಳು ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳು ಎದುರಿಸುತ್ತಿರುವ ಜಾತಿ ತಾರತಮ್ಯ ಮತ್ತು ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸಲು ರೋಹಿತ್ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಒಕ್ಕೋರಲಿನಿಂದ ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಾತಿ ವಿರೋಧಿ ಕಾರ್ಯಕರ್ತರಾದ ರಾಧಿಕಾ ವೇಮುಲ, “ಶಾಂತ ಸ್ವಭಾವದ, ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ತಮ್ಮ ಮಗ ರೋಹಿತ್ ವೇಮುಲ ಹೀಗೆ ಒಂದು ದಿನ ಕಣ್ಮರೆಯಾಗುತ್ತಾನೆ ಎಂದು ಊಹಿಸಿರಲಿಲ್ಲ” ಎಂದು ಕಣ್ಣೀರಾದ ಅವರು, ದಲಿತ ವಿದ್ಯಾರ್ಥಿಗಳು ಸಾಂಸ್ಥಿಕವಾಗಿ ಹೇಗೆ ತಾರತಮ್ಯಕ್ಕೆ ಒಳಗಾಗಿದ್ದರೆ ಎಂಬುದನ್ನು ವಿವರಿಸಿದರು.

“ಐಐಎಂ-ಬಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿರುವ ಪ್ರೊ.ಗೋಪಾಲ ದಾಸ್‌ರವರ ಜೊತೆಗೆ ನಾವಿದ್ದೇವೆ. ಬಿಜೆಪಿ ಪಕ್ಷದಲ್ಲಿರುವ ದಲಿತ ವಿರೋಧಿ ಜನರಿಂದ ನನಗೆ ಈವರೆಗೂ ನ್ಯಾಯ ದೊರಕಿಲ್ಲ. ಜಾತಿ ನಿರ್ಮೂಲನೆಗಾಗಿ ನಾನು ನನ್ನ ಹೋರಾಟವನ್ನು ಹೀಗೆ ನಿರಂತರವಾಗಿ ಮುಂದುವರೆಸುತ್ತೇನೆ. ಏಕೆಂದರೆ, ನಾನು ಅನುಭಸಿದ ನೋವನ್ನು ಬೇರಾವ ತಾಯಿಯು ಅನುಭವಿಸಬಾರದು” ಎಂದು ಭಾವುಕರಾದರು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಮಾತನಾಡಿ, “ಮೂಲಭೂತ ಹಕ್ಕುಗಳಿಗಾಗಿ ನಡೆಯುತ್ತಿರುವ ಜನರ ಆಂದೋಲನಗಳ ಬಗ್ಗೆ ಒಕ್ಕೂಟ ಸರ್ಕಾರ ಅಸಹಿಸ್ಣುತೆಯಿಂದ ನಡೆದುಕೊಳ್ಳುತ್ತಿದೆ” ಎಂದರು.

“ಬಿಜೆಪಿ ಸರ್ಕಾರದ ಕೋಮುವಾದಿ ಅಜೆಂಡಾದ ಫಲವಾಗಿ ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ನಾಶವಾಗುತ್ತಿದೆ. ಈ ಹಿಂದೆ, ಸಿದ್ದರಾಮಯ್ಯ ಅವರ ಸರ್ಕಾರ ಮೂಢನಂಬಿಕೆಗಳ ವಿರುದ್ಧ ಕರಡು ಕಾಯ್ದೆಯನ್ನು ತಂದಿದ್ದರು. ಆದರೆ, ಅದು ಕಾನೂನಾಗಲಿಲ್ಲ. ಅದೇ ರೀತಿ, ಡಾ.ಸಿದ್ಧಲಿಂಗಯ್ಯ ರವರು ಅಂತರ್ಜಾತಿ ವಿವಾಹವಾದ ದಂಪತಿಗಳ ಮಕ್ಕಳಿಗೆ ಮೀಸಲಾತಿ ತರಬೇಕೆಂದು ಒತ್ತಾಯಿಸಿದ್ದರು. ಆದರೆ, ಅದು ಸಹ ಜಾರಿಯಾಗಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ದಲಿತ ಮಹಿಳೆಯರು ಮಾಡುವ ಮಧ್ಯಾಹ್ನದ ಬಿಸಿ ಊಟವನ್ನು ಮಕ್ಕಳು ನಿರಾಕರಿಸುವಂತೆ ಈ ಜಾತಿ ವ್ಯವಸ್ಥೆಯು ಅವರಿಗೆ ಹೇಳಿಕೊಡುತ್ತದೆ. ಜಾತಿವಾದವು ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಟು ವ್ಯಾಪಕವಾಗಿದ್ದರೆ, ಇದರ ವಿರುದ್ಧ ಹೋರಾಡಲು ರೋಹಿತ್ ಕಾಯ್ದೆಯಂತಹ ವಿಶೇಷ ಕಾನೂನಿನ ಅಗತ್ಯವಿದೆ” ಎಂದು ಆಗ್ರಹಿಸಿದರು.

ರೋಹಿತ್ ವೆಮುಲಾ ಸಹಪಾಠಿಯಾದ ದೋಂತ ಪ್ರಶಾತ್ ರವರು ಮಾತನಾಡಿ, “ವಿನಾಕಾರಣ ಮೂರು ಬಾರಿ ರೋಹಿತ್ ವೇಮುಲ ಮತ್ತು ಅವರ ಮೂರು ಜನ ಸ್ನೇಹಿತರನ್ನು ಶಿಕ್ಷೆಗೆ ಒಳಪಡಿಸಿ, ಎಲ್ಲರ ಮೇಲೂ ಸಾಮಾಜಿಕ ಬಹಿಷ್ಕಾರ ಹೇರಿದ್ದರು” ಎಂದರು.

“ನಮ್ಮನ್ನು ‘ಗೂಂಡಾಗಳು’ ಎಂದು ಕರೆಯುತ್ತಿದ್ದರು, ದೇಶದಾದ್ಯಂತ ದಲಿತರನ್ನು ಇದೇ ರೀತಿ ಅವಮಾನಿಸುತ್ತಾರೆ, ಇದು ನಮ್ಮ ಘನತೆಗೆ ಧಕ್ಕೆಯುಂಟು ಮಾಡುವ ವಿಷಯ. ವಿಶ್ವವಿದ್ಯಾಲಯಗಳು ವ್ಯವಸ್ಥಿತವಾಗಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳನ್ನು ಬೇರ್ಪಡಿಸುತ್ತಿವೆ. ಇದಕ್ಕಾಗಿಯೇ ರೋಹಿತ್ ಕಾಯ್ದೆಯ ಅಗತ್ಯವಿದೆ” ಎಂದರು.

ಪ್ರಗತಿಪರ ಚಿಂತಕರು ಹಾಗು ಬರಹಗಾರರಾದ ವಿಕಾಸ್ ಮೌರ್ಯ ಮಾತನಾಡಿ, “ಸರ್ಕಾರ, ಶೈಕ್ಷಣಿಕ ಸಂಸ್ಥೆಗಳಲ್ಲಿ ಎಷ್ಟು ಜನ ಎಸ್‌ಸಿ/Sಎಸ್‌ಟಿ ವಿಧ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ಅಂಕಿ ಅಂಶಗಳನ್ನು ಸಂಸತ್ತಿನಲ್ಲಿ ಮಂಡಿಸಿದರು. ಆದರೆ, ಇದನ್ನು ತಡೆಯಲು ಏನು ಮಾಡಬೇಕು ಎಂದು ‌ಮಾತ್ರ ಸರ್ಕಾರ ಯೋಚಿಸುತ್ತಿಲ್ಲ. ಭಾರತದಲ್ಲಿ ಬ್ರಾಹ್ಮಣವಾದ ಹಾಗೂ ಬಂಡವಾಳಶಾಹಿ ಪದ್ದತಿ ಎರಡು ಸೇರಿ ದಲಿತ ಬಹುಜನ ವಿಧ್ಯಾರ್ಥಿಗಳನ್ನು ಮೂಲೆಗುಂಪು ಮಾಡುತ್ತಿದೆ. ಸ್ವಾತಂತ್ರ್ಯ ಸಿಕ್ಕಿ ಇಷ್ಟು ದಶಕಗಳ ನಂತರವೂ ನಮ್ಮ ಶೈಕ್ಷಣಿಕ ಸಂಸ್ಥೆಗಳಲ್ಲಿ ಇಷ್ಡೊಂದು ಅಸಮಾನತೆ ಹಾಗೂ ತಾರತಮ್ಯ ಇರುವುದು ಬೇಸರದ ವಿಷಯ” ಎಂದರು.

ಆಲ್ ಇಂಡಿಯಾ ವಿಧ್ಯಾರ್ಥಿ ಸಂಘಟನೆಯ ಲೇಖಾ ಅಡವಿ ಅವರು ಮಾತನಾಡಿ, ” ಶೈಕ್ಷಣಿಕ ಸಂಸ್ಥೆಗಳಲ್ಲಿ ‌ನಡೆಯುತ್ತಿರುವ ಜಾತಿ ತಾರತಮ್ಯವನ್ನು ತಡೆಯುವುದಕ್ಕೆ ಆಗುತ್ತಿಲ್ಲ. ಇಂದು ಜಾತಿ ತಾರತಮ್ಯದಿಂದ ದಲಿತ ವಿಧ್ಯಾರ್ಥಿಗಳಿಗೆ ಕಾಲೇಜು ಪ್ರವೇಶಿಸುವುದು ಕಷ್ಟವಾಗಿದೆ. ಕಾಲೇಜು ಸೇರಿಕೊಂಡ ಮೇಲೆ ಅಲ್ಲಿ ತಾರತಮ್ಯ ಎದುರಿಸುತಿದ್ದಾರೆ, ಕೆಲವರಿಗೆ ತಮ್ಮ ಓದು ಮುಂದುವರಿಸಲಾಗುತ್ತಿಲ್ಲ. ಈ ತಾರತಮ್ಯ ಹಾಗೂ ಮಾನಸಿಕ ಹಿಂಸೆ ತಡೆಯಲಾರದೆ ಕೆಲ ವಿಧ್ಯಾರ್ಥಿಗಳು ತಮ್ಮ ಪ್ರಾಣತ್ಯಾಗ ಮಾಡುತಿದ್ದಾರೆ. ಹಾಗಾಗಿ, ನಾವು ಹಲವು ಸಂಘಟನೆಗಳು ಸೇರಿ ರೋಹಿತ್ ಕಾಯ್ದೆಗಾಗಿ ಜನಾಂದೋಲನದ ಅಡಿಯಲ್ಲಿ ಬಂದಿದ್ದೇವೆ. ರೋಹಿತ್ ಕಾಯ್ದೆಯು, ಜಾತಿ ತಾರತಮ್ಯ ತಡಿಯುವುದಲ್ಲದೆ , ಎಸ್‌ಸಿ/ಎಸ್‌ಟಿ ವಿಧ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದಕ್ಕೆ,‌ಕಾಲೇಜುಗಳಲ್ಲಿ ಅಕ್ಯಾಡೆಮಿಕ್ ಬೆಂಬಲ‌ ಸಹ ನೀಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ರೋಹಿತ್ ವೇಮುಲಾರ ತಾಯಿ ರಾಧಿಕಾ ವೇಮುಲ, ರಾಜ ವೇಮುಲ, ದಲಿತ ಸಂಘರ್ಷ ಸಮಿತಿಯ ನಾಯಕರಾದ ಮಾವಳ್ಳಿ ಶಂಕರ್, ದೊಂತ ಪ್ರಶಾಂತ್, ಲೇಖಕರಾದ ವಿಕಾಸ್ ಆರ್ ಮೌರ್ಯ ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸ್ಸೋಸಿಟೇಷನ್ (ಎಐಎಸ್‌ಎ) ನ ಲೇಖ ಅಡವಿ ಉಪಸ್ಥಿತರಿದ್ದರು.

ಇದನ್ನೂ ಓದಿ; ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...