Homeಮುಖಪುಟಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

ಬಾಬಾ ರಾಮ್‌ದೇವ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಕೋರ್ಟ್

- Advertisement -
- Advertisement -

ಸ್ವಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಉದ್ಯಮ ಪಾಲುದಾರ ಆಚಾರ್ಯ ಬಾಲಕೃಷ್ಣ ವಿರುದ್ದ ಕೇರಳದ ಪಾಲಕ್ಕಾಡ್‌ನ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಬಂಧನ ವಾರೆಂಟ್ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

ಔಷಧ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತು ನೀಡಲಾಗಿದೆ ಎಂದು ಆರೋಪಿಸಿ ಕೇರಳದ ಔಷಧ ನಿಯಂತ್ರಣ ಇಲಾಖೆ ದಾಖಲಿಸಿದ ಪ್ರಕರಣದಲ್ಲಿ ಇಬ್ಬರ ವಿರುದ್ದವೂ ಜಾಮೀನು ನೀಡಬಹುದಾದ ಬಂಧನ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಹರಿದ್ವಾರ ಮೂಲದ ಆಯುರ್ವೇದ ಔಷಧ ತಯಾರಿಕಾ ಕಂಪನಿ ಪತಂಜಲಿ ಆಯುರ್ವೇದದ ಮುಖ್ಯಸ್ಥರಾಗಿರುವ ಬಾಬಾ ರಾಮ್‌ದೇವ್‌ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ದ ಭಾರತ ವಿವಿಧ ರಾಜ್ಯಗಳಲ್ಲಿ ಇದೇ ರೀತಿಯ ಪ್ರಕರಣಗಳಿವೆ. ಆದರೆ, ಮೊದಲ ಬಾರಿಗೆ ಬಂಧನ ವಾರೆಂಟ್ ಹೊರಡಿಸಲಾಗಿದೆ.

ಪ್ರಕರಣದ ಇಬ್ಬರೂ ಆರೋಪಿಗಳು ಹಲವು ಬಾರಿ ಸಮನ್ಸ್ ನೀಡಿದರೂ ಪ್ರತಿಕ್ರಿಯಿಸದ ಕಾರಣ ವಾರೆಂಟ್ ಜಾರಿಗೊಳಿಸಲಾಗಿದೆ ಎಂದು ವರದಿಗಳು ಹೇಳಿವೆ.

ಪತಂಜಲಿ ಉತ್ಪನ್ನಗಳು ಅಧಿಕ ರಕ್ತದೊತ್ತಡ ಮತ್ತು ಮಧುಮೇಹವನ್ನು ಗುಣಪಡಿಸುತ್ತದೆ ಎಂದು ತಮ್ಮ ದಿವ್ಯಾ ಫಾರ್ಮಸಿ ಮೂಲಕ ಸುದ್ದಿ ಮಾಧ್ಯಮಗಳಲ್ಲಿ ತಪ್ಪುದಾರಿಗೆಳೆಯುವ ಜಾಹೀರಾತು ನೀಡಿರುವ ಆರೋಪ ರಾಮ್‌ದೇವ್ ಮತ್ತು ಬಾಲಕೃಷ್ಣ ಮೇಲಿದೆ.

ಅಕ್ಟೋಬರ್ 2024ರಲ್ಲಿ ಈ ಸಂಬಂಧ ಕೇರಳದ ಪಾಲಕ್ಕಾಡ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಜನವರಿ 16, 2025ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಇಬ್ಬರಿಗೂ ಸಮನ್ಸ್ ನೀಡಲಾಗಿತ್ತು. ಆದರೆ, ಅವರು ಗೈರಾಗಿದ್ದರು. ಈ ಹಿನ್ನೆಲೆ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ ಎಂದು ವರದಿಯಾಗಿದೆ.

ವಾಲ್ಮೀಕಿ ಅರ್ಚಕರನ್ನು ಗೌರವಧನದಿಂದ ಹೊರಗಿಟ್ಟ ಕೇಜ್ರಿವಾಲ್ ದಲಿತ ವಿರೋಧಿ: ಕಾಂಗ್ರೆಸ್‌ನ ಉದಿತ್ ರಾಜ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...