Homeಮುಖಪುಟವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಅಮೆರಿಕದ ಅಧ್ಯಕ್ಷರಾಗಿ ಸೋಮವಾರ (ಜ.20) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ (ಡಬ್ಲ್ಯುಹೆಚ್‌ಒ) ಹೊರ ಬರುವ ಕಾರ್ಯಕಾರಿ ಆದೇಶಕ್ಕೆ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಇತರ ಅಂತಾರಾಷ್ಟ್ರೀಯ ಆರೋಗ್ಯ ಬಿಕ್ಕಟ್ಟುಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಸದಸ್ಯ ರಾಷ್ಟ್ರಗಳ ರಾಜಕೀಯ ಪ್ರಭಾವದಿಂದ ಡಬ್ಲ್ಯುಹೆಚ್‌ಒ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಡಬ್ಲ್ಯುಹೆಚ್‌ಒಗೆ ಆರ್ಥಿಕ ಸಹಾಯ ನೀಡುವ ವಿಷಯದಲ್ಲೂ ಅಮೆರಿಕಕ್ಕೆ ಅನ್ಯಾಯವಾಗಿದೆ. ಚೀನಾದಂತ ದೊಡ್ಡ ದೇಶಗಳು ಅವರ ಪಾಲನ್ನು ಸರಿಯಾಗಿ ಕೊಡದ ಕಾರಣ, ಅಮೆರಿಕ ಹೆಚ್ಚಿನ ಹೊರೆ ಹೊತ್ತುಕೊಳ್ಳಬೇಕಾಗಿದೆ” ಎಂದು ಟ್ರಂಪ್ ತಿಳಿಸಿದ್ದಾರೆ.

“ಡಬ್ಲ್ಯುಹೆಚ್ಒ ನಮ್ಮನ್ನು ಅಳಿಸಿ ಹಾಕಲು ನೋಡಿತು, ಎಲ್ಲರೂ ನಮ್ಮನ್ನು ತುಳಿಯಲು ನೋಡಿದರು. ಆದರೆ, ಇದು ಇನ್ನು ಮುಂದೆ ನಡೆಯುವುದಿಲ್ಲ” ಎಂದು ಆದೇಶಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಟ್ರಂಪ್ ಹೇಳಿದ್ದಾರೆ.

ಟ್ರಂಪ್ ಕ್ರಮದಿಂದ ಅಮೆರಿಕ ಮುಂದಿನ 12 ತಿಂಗಳ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯನ್ನು ತೊರೆಯಲಿದೆ ಮತ್ತು ಎಲ್ಲಾ ಹಣಕಾಸಿನ ನೆರವನ್ನು ನಿಲ್ಲಿಸಲಿದೆ. ಅಮೆರಿಕ ಡಬ್ಲ್ಯುಹೆಚ್ಒನ ಅತಿದೊಡ್ಡ ಆರ್ಥಿಕ ಬೆಂಬಲಿಗನಾಗಿದ್ದು, ಅದರ ಒಟ್ಟಾರೆ ನಿಧಿಯ ಸುಮಾರು 18ರಷ್ಟು ಪಾಲು ನೀಡುತ್ತಿದೆ. ಡಬ್ಲ್ಯುಹೆಚ್ಒನ 2024-2025ರ ಬಜೆಟ್ 6.8 ಬಿಲಿಯನ್ ಡಾಲರ್ ಆಗಿತ್ತು.

ಟ್ರಂಪ್ ಡಬ್ಲ್ಯುಹೆಚ್‌ಒನಿಂದ ಹೊರ ಬರಲು ಮುಂದಾಗಿರುವುದು ಅನಿರೀಕ್ಷಿತವಲ್ಲ. ಅವರು 2020ರಲ್ಲಿ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ, “ಕೋವಿಡ್ ಮೂಲಕ ಜಗತ್ತನ್ನು ದಾರಿ ತಪ್ಪಿಸುವ ಚೀನಾದ ಪ್ರಯತ್ನಗಳಿಗೆ ಡಬ್ಲ್ಯುಹೆಚ್‌ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿ ಅದರಿಂದ ಹೊರ ಬರಲು ಕ್ರಮ ಕೈಗೊಂಡಿದ್ದರು.

ಟ್ರಂಪ್ ಆರೋಪಗಳನ್ನು ನಿರಾಕರಿಸಿರುವ ಡಬ್ಲ್ಯುಹೆಚ್‌ಒ, ಕೋವಿಡ್ ಸೋಂಕಿತ ಪ್ರಾಣಿಗಳೊಂದಿಗಿನ ಮಾನವ ಸಂಪರ್ಕದಿಂದ ರೋಗ ಹರಡಿದೆಯೇ ಅಥವಾ ದೇಶೀಯ ಪ್ರಯೋಗಾಲಯದಲ್ಲಿ ಇದೇ ರೀತಿಯ ವೈರಸ್‌ಗಳ ಸಂಶೋಧನೆಯಿಂದಾಗಿ ಹರಡಿದೆಯೇ ಎಂಬುವುದನ್ನು ನಿರ್ಧರಿಸಲು ಮಾಹಿತಿ ಹಂಚಿಕೊಳ್ಳಲು ಚೀನಾವನ್ನು ಒತ್ತಾಯಿಸುತ್ತಲೇ ಇದ್ದೇವೆ ಎಂದು ಹೇಳಿದೆ.

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...