ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿ ಬೆಂಗಳೂರು ನಗರ ಪೊಲೀಸ್ ಮತ್ತು ಪರಿಹಾರ ತಂಡದ ವತಿಯಿಂದ ಮಕ್ಕಳ ಜಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 
ಮಕ್ಕಳ ಜಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅಧ್ಯಕ್ಷತೆ ವಹಿಸಿದ್ದರು. ನಟ ರಾಕಿಂಗ್‌ಸ್ಟಾರ್ ಯಶ್, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಹೆಚ್ಚುವರಿ ಆಯುಕ್ತ ಉಮೇಶ್ ಭಾಗಿಯಾಗಿದ್ದರು. ವಿವಿಧ ಖಾಸಗಿ ಶಾಲೆಯ ಮಕ್ಕಳು ಕಾರ್ಯಕ್ರಮದಲ್ಲಿದ್ದರು.

ಮಕ್ಕಳ ದಿನಾಚರಣೆ ಹಿನ್ನೆಲೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆದವು. ಗ್ರಾಮೀಣ ಸೊಗಡಿನ ಆಟಿಕೆಗಳ ಪ್ರದರ್ಶನ, ವಿವಿಧ ಕಲಾ ತಂಡಗಳಿಂದ ಡೊಳ್ಳು ಕುಣಿತ, ಸಾಮಾಜಿಕ ಕಳಕಳಿಯನ್ನು ಸಾರುವ ನೃತ್ಯ ಪ್ರದರ್ಶನ ಗಮನ ಸೆಳೆದವು. ವಿವಿಧ ವೇಷಭೂಷಣ ತೊಟ್ಟ ಮಕ್ಕಳು ಯಶ್ ಕಂಡು ಖುಷಿಪಟ್ಟರು.
ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಯಶ್, ಮುದ್ದು ಮಕ್ಕಳಿಗೆ ಅಷ್ಟೇ ಮುದ್ದಾಗಿ ಸಲಹೆ ನೀಡಿದರು. ಯಶ್ ಅವರ ಕೆ.ಜಿ.ಎಫ್ ಡೈಲಾಗ್‌ಗೆ ಮಕ್ಕಳ ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.


