Homeಕರ್ನಾಟಕದಲಿತ ಚಳವಳಿಯ ಪ್ರಮುಖ ಹೋರಾಟಗಾರ ಕೆ.ಎಂ. ಕೊಮ್ಮಣ್ಣ ನಿಧನ

ದಲಿತ ಚಳವಳಿಯ ಪ್ರಮುಖ ಹೋರಾಟಗಾರ ಕೆ.ಎಂ. ಕೊಮ್ಮಣ್ಣ ನಿಧನ

- Advertisement -
- Advertisement -

ದಲಿತ ಚಳವಳಿಯ ಪ್ರಮುಖ ಹೋರಾಟಗಾರರಾದ ಕೆ.ಎಂ. ಕೊಮ್ಮಣ್ಣ ಅವರು ಬುಧವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ. ಹಲವು ತಿಂಗಳಿಂದ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಕೋಲಾರದ ಬಂಗಾರಪೇಟೆಯಲ್ಲಿ ಇಂಗ್ಲೀಷ್‌ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಕೊಮ್ಮಣ್ಣ ಅವರು, ವಿದ್ಯಾರ್ಥಿ ದೆಸೆಯಿಂದಲೇ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಕೋಲಾರ ಹೊರವಲಯದ ತೇರಹಳ್ಳಿ ಬೆಟ್ಟದಲ್ಲಿರುವ ಆದಿಮ ಸಾಂಸ್ಕೃತಿಕ ಕೇಂದ್ರದ ಸಂಸ್ಥಾಪಕರಲ್ಲಿ ಒಬ್ಬರಾದ ಅವರು, ಹಲವು ವರ್ಷಗಳಿಂದ ಆದಿಮ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು. ದಲಿತ ಚಳವಳಿಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದಲಿತ ಹಕ್ಕುಗಳ ಹೋರಾಟಗಳಲ್ಲಿ ನಿರಂತರವಾಗಿ ಕ್ರಿಯಾಶೀಲರಾಗಿದ್ದ ಕೊಮ್ಮಣ್ಣ ಅವರು, ನಾಗಸಂದ್ರ ಭೂ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕೊಮ್ಮಣ್ಣ ಅವರ ಅಗಲಿಕೆ ಹಲವಾರು ಹೋರಾಟಗಾರರು ಸಂತಾಪ ವ್ಯಕ್ತಪಡಿಸಿದ್ದಾರೆ.

“ಕೊಮ್ಮಣ್ಣ ಅವರ ನಿಧನ ಬಹಳ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ” ಎಂದು ಆದಿಮ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಎನ್‌. ಮುನಿಸ್ವಾಮಿ ಹೇಳಿದ್ದಾರೆ. ಹ.ಮಾ. ರಾಮಚಂದ್ರ, ಅರಿವು ಶಿವಪ್ಪ, ಜೆ ಜಿ ನಾಗರಾಜ್‌, ಅಮಾಸ‌ ಕೆ.ವಿ.ನಾಯಕ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಮೃತ ಕೊಮ್ಮಣ್ಣ ಅವರು ಪತ್ನಿ, ಮಗ, ಅಣ್ಣ, ಇಬ್ಬರು ತಂಗಿಯರಿದ್ದು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನಕ್ಕಾಗಿ ಕೋಲಾರದ ಗೋಕುಲ ಕಾಲೇಜು ಹತ್ತಿರದ ಹೌಸಿಂಗ ಬೋರ್ಡ್‌ನ ಮನೆಯ ಹತ್ತಿರ ನಾಳೆ ಬೆಳಿಗ್ಗೆ 7ರಿಂದ ಮದ್ಯಾಹ್ನ 1 ರವರಿಗೆ ಇಡಲಾಗುತ್ತದೆ. ನಂತರ ಅವರು ತಮ್ಮ ದೇಹವನ್ನ ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಿದ್ದು ಅಲ್ಲಿಗೆ ಕಳುಹಿಸಲಾಗುತ್ತದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂಓದಿ:  ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...