ಮಹಾರಾಷ್ಟ್ರದ ಜಲಗಾಂವ್ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. “13 ಜನರಲ್ಲಿ, ನಾವು ಇಲ್ಲಿಯವರೆಗೆ ಎಂಟು ಶವಗಳನ್ನು ಗುರುತಿಸಿದ್ದೇವೆ, ಅವುಗಳಲ್ಲಿ ಎರಡು ಮೃತದೇಹಗಳನ್ನು ಅವರ ಆಧಾರ್ ಕಾರ್ಡ್‌ಗಳಿಂದ ಗುರುತಿಸಿದ್ದೇವೆ” ಎಂದು ವಿಶೇಷ ಪೊಲೀಸ್ ಮಹಾನಿರ್ದೇಶಕ ದತ್ತಾತ್ರಯ ಕರಾಳೆ ಪಿಟಿಐಗೆ ತಿಳಿಸಿದ್ದಾರೆ. ಜಲಗಾಂವ್ ರೈಲು ಅಪಘಾತ
ಮುಂಬೈಗೆ ತೆರಳುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್‌ನ ಕೆಲವು ಪ್ರಯಾಣಿಕರು ಬೆಂಕಿ ವದಂತಿಯ ಭಯಕ್ಕೆ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಕ್ಕದ ಹಳಿಯ ಬಳಿ ರೈಲಿನಿಂದ ಇಳಿದಿದ್ದು, ಈ ವೇಳೆ ಬೆಂಗಳೂರಿನಿಂದ ದೆಹಲಿಗೆ ಹೋಗುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಗುರುತಿಸಲಾದ ಎಂಟು ಮೃತರಲ್ಲಿ ನೇಪಾಳದ ನಾಲ್ವರು ಸೇರಿದ್ದಾರೆ ಎಂದು ಜಲಗಾಂವ್ ಜಿಲ್ಲಾ ಮಾಹಿತಿ ಅಧಿಕಾರಿ ಯುವರಾಜ್ ಪಾಟೀಲ್ ಪಿಟಿಐಗೆ ತಿಳಿಸಿದ್ದಾರೆ. ಜಲಗಾಂವ್ ರೈಲು ಅಪಘಾತ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅಧಿಕಾರಿಗಳು ಒದಗಿಸಿದ ಪಟ್ಟಿಯ ಪ್ರಕಾರ, ನೇಪಾಳದ ನಾಲ್ವರು ಬಲಿಪಶುಗಳನ್ನು ಕಮಲಾ ನವೀನ್ ಭಂಡಾರಿ (43) (ಮುಂಬೈನ ಕೊಲಾಬಾದಲ್ಲಿ ವಾಸಿಸುತ್ತಿದ್ದರು), ಜವಕಲಾ ಭಾಟೆ (60) (ಥಾಣೆಯ ಭಿವಂಡಿಯಲ್ಲಿ ವಾಸಿಸುತ್ತಿದ್ದರು), ಲಚ್ಚಿರಾಮ್ ಖತಾರು ಪಾಸಿ (40) ಮತ್ತು ಇಮ್ತಿಯಾಜ್ ಅಲಿ (11) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡ 15 ಜನರಲ್ಲಿ 10 ಜನರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂಬತ್ತು ಮಂದಿ ಪಚೋರಾ ಸಿವಿಲ್ ಆಸ್ಪತ್ರೆಯಲ್ಲಿ ಮತ್ತು ಒಬ್ಬರು ಜಲಗಾಂವ್ ನಗರದ ವೈದ್ಯಕೀಯ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ, ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್ ಗುರುವಾರ ಬೆಳಗಿನ ಜಾವ 1.20 ರ ಸುಮಾರಿಗೆ ಮಹಾರಾಷ್ಟ್ರ ರಾಜಧಾನಿಯಲ್ಲಿರುವ ತನ್ನ ಅಂತಿಮ ತಾಣವಾದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ತಲುಪಿದೆ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ರೈಲ್ವೆಯ ಜನರಲ್ ಮ್ಯಾನೇಜರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಹ ರಾತ್ರಿ ಅಪಘಾತ ಸ್ಥಳಕ್ಕೆ ತಲುಪಿ ಸ್ಥಳವನ್ನು ಪರಿಶೀಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಅವರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಕರೆದೊಯ್ಯಲಾದ ಆಸ್ಪತ್ರೆಗಳಿಗೂ ಭೇಟಿ ನೀಡಿದ್ದಾರೆ.
ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಚೋರಾ ಪಟ್ಟಣದ ಬಳಿಯ ಮಹೇಜಿ ಮತ್ತು ಪರ್ಧಾಡೆ ನಿಲ್ದಾಣಗಳ ನಡುವೆ ಬುಧವಾರ ಸಂಜೆ 4.45 ರ ಸುಮಾರಿಗೆ ಯಾರೋ ತುರ್ತು ಸರಪಳಿ ಎಳೆದ ನಂತರ ಪುಷ್ಪಕ್ ಎಕ್ಸ್‌ಪ್ರೆಸ್ ನಿಂತಾಗ ಈ ಅಪಘಾತ ಸಂಭವಿಸಿದೆ ಎಂದು ಕೇಂದ್ರ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್, ಬೋಗಿಯೊಳಗಿನ ಯಾವುದೇ ಕಿಡಿ ಅಥವಾ ಬೆಂಕಿಯ ಬಗ್ಗೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿಲ್ಲ ಎಂದು ಹೇಳಿದ್ದಾರೆ.
जळगाव जिल्ह्यातील दुर्दैवी अपघातातील मृतांच्या वारसांना 5 लाख रुपये आर्थिक सहाय्य राज्य सरकारतर्फे करण्यात येईल आणि जखमींचा संपूर्ण खर्च सुद्धा राज्य सरकार करेल.
जखमींच्या प्रकृतीत लवकर सुधारणा व्हावी, अशी मी ईश्वरचरणी प्रार्थना करतो.#jalgaon pic.twitter.com/NHTUr1JTqw— Devendra Fadnavis (@Dev_Fadnavis) January 22, 2025
ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಿಂದ ಬುಧವಾರ ವೀಡಿಯೊ ಸಂದೇಶದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, “ರೈಲಿನಲ್ಲಿದ್ದ ಕೆಲವು ಪ್ರಯಾಣಿಕರು ರೈಲಿನಿಂದ ಹೊಗೆ ಬರುತ್ತಿದೆ ಎಂದು ತಪ್ಪಾಗಿ ಭಾವಿಸಿ ಹಾರಿದ್ದಾರೆ. ದುರದೃಷ್ಟವಶಾತ್, ಅವರು ಮತ್ತೊಂದು ರೈಲುಗೆ ಸಿಲುಕಿದರು.” ಎಂದು ಹೇಳಿದ್ದಾರೆ. ದುರಂತದಲ್ಲಿ ಮೃತಪಟ್ಟ ಪ್ರಯಾಣಿಕರ ಹತ್ತಿರದ ಸಂಬಂಧಿಕರಿಗೆ ತಲಾ 5 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಮುಖ್ಯಮಂತ್ರಿ ಘೋಷಿಸಿದ್ದಾರೆ.
ಮೃತರ ಕುಟುಂಬಕ್ಕೆ ರೈಲ್ವೆ ಮಂಡಳಿ ಪ್ರತ್ಯೇಕವಾಗಿ 1.5 ಲಕ್ಷ ರೂಪಾಯಿ, ಗಂಭೀರ ಗಾಯಗಳಿಗೆ 50,000 ರೂಪಾಯಿ ಮತ್ತು ಸಾಮಾನ್ಯ ಗಾಯಗಳಿಗೆ 5,000 ರೂಪಾಯಿ ಪರಿಹಾರ ಘೋಷಿಸಿದೆ.
ಇದನ್ನೂಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್ ಬಚ್ಚಿಡುವ ಸತ್ಯಗಳಿವು
ನೇತಾಜಿ ಸುಭಾಷ್ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್ ಬಚ್ಚಿಡುವ ಸತ್ಯಗಳಿವು


