Homeಮುಖಪುಟಮುಂದುವರಿದ ನಿಗೂಢ ಸಾವು : 500 ಗ್ರಾಮಸ್ಥರನ್ನು ಕ್ವಾರಂಟೈನ್ ಮಾಡಿದ ಸರ್ಕಾರ

ಮುಂದುವರಿದ ನಿಗೂಢ ಸಾವು : 500 ಗ್ರಾಮಸ್ಥರನ್ನು ಕ್ವಾರಂಟೈನ್ ಮಾಡಿದ ಸರ್ಕಾರ

- Advertisement -
- Advertisement -

ನಿಗೂಢ ಅನಾರೋಗ್ಯದಿಂದ ಒಬ್ಬರ ಹಿಂದೆ ಒಬ್ಬರಂತೆ ಸಾವನ್ನಪ್ಪುತ್ತಿರುವ ಹಿನ್ನೆಲೆ ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಲ್ ಗ್ರಾಮದ ಸುಮಾರು 400-500 ನಿವಾಸಿಗಳನ್ನು ಸರ್ಕಾರ ಕ್ವಾರಂಟೈನ್‌ ಕೇಂದ್ರಗಳಿಗೆ ಸ್ಥಳಾಂತರಿಸಿದೆ.

ಡಿಸೆಂಬರ್ 2024ರಿಂದ ಇದುವರೆಗೆ ನಿಗೂಢ ಅನಾರೋಗ್ಯದಿಂದ ಬಾಧಲ್ ಗ್ರಾಮದಲ್ಲಿ 17 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಎರಡು ದಿನಗಳಲ್ಲಿ ಹೊಸದಾಗಿ ಐವರು ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆ, ರಾಜೌರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗ್ರಾಮವನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿ ಅನಾರೋಗ್ಯಕ್ಕೆ ತುತ್ತಾದವರ ಕುಟುಂಬಸ್ಥರು ಮತ್ತುಅವರ ಸಂಬಂಧಿಕರನ್ನು ಕ್ವಾರಂಟೈನ್ ಕೇಂದ್ರಕ್ಕೆ ಸ್ಥಳಾಂತರಿಸುವ ನಿರ್ಧಾರ ಕೈಗೊಂಡಿದ್ದಾರೆ.

“ಇಡೀ ಗ್ರಾಮಸ್ಥರನ್ನು ಕ್ವಾರಂಟೈನ್‌ ಕೇಂದ್ರಕ್ಕೆ ಸ್ಥಳಾಂತರಿಸಿಲ್ಲ. ಅನಾರೋಗ್ಯಕ್ಕೆ ಒಳಗಾದವರು, ಅವರ ಸಂಬಂಧಿಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಕ್ವಾರಂಟೈನ್‌ ಮಾಡಿದ್ದೇವೆ” ಎಂದು ಶಾಸಕ ಜಾವೇದ್ ಇಕ್ಬಾಲ್ ಹೇಳಿದ್ದಾರೆ.

ಗ್ರಾಮಸ್ಥರನ್ನು ಜಿಎಂಸಿ ರಾಜೌರಿ, ಹಳೆಯ ಆಸ್ಪತ್ರೆ ರಾಜೌರಿ, ನರ್ಸಿಂಗ್ ಕಾಲೇಜು ರಾಜೌರಿ ಮತ್ತು ಬಾಲಕರ ಹೈಯರ್ ಸೆಕೆಂಡರಿ ಶಾಲೆಯ ಕ್ವಾರಂಟೈನ್ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಅಲ್ಲಿ ಸರ್ಕಾರದ ವತಿಯಿಂದ ನಿಯಮಿತ ತಪಾಸಣೆ, ಆಹಾರ ಹಾಗೂ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ.

ಡಿಸೆಂಬರ್ 2, 2024ರಂದು ಫಝಲ್ ಹುಸೇನ್ ಎಂಬವರ ಮನೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಊಟ ಮಾಡಿದ್ದ ಜನರು, ಡಿಸೆಂಬರ್ 7, 2024ರ ಹೊತ್ತಿಗೆ ನಿಗೂಢ ಕಾಯಿಲೆಗೆ ತುತ್ತಾಗಿದ್ದರು. ಅನಾರೋಗ್ಯಕ್ಕೆ ಒಳಗಾಗಿದ್ದವರಲ್ಲಿ ಫಝಲ್ ಮತ್ತು ಅವರ ನಾಲ್ವರು ಹೆಣ್ಣುಮಕ್ಕಳು ಐದು ದಿನಗಳಲ್ಲಿ ನಿಧನರಾಗಿದ್ದರು.

ಜನವರಿ 9ರಂದು, ನಿವಾಸಿಗಳು ಶೋಕ ಆಚರಿಸುವ ವೇಳೆ ಫಝಲ್ ಅವರ ಮನೆಯಲ್ಲಿ ಮತ್ತೊಂದು ಸಾಮುದಾಯಿಕ ಭೋಜನವನ್ನು ನೀಡಲಾಗಿತ್ತು. ಹಲವು ಗ್ರಾಮಸ್ಥರು ಈ ಕೂಟದಲ್ಲಿ ಭಾಗವಹಿಸಿದ್ದರು. ಆದರೆ, ಕೇವಲ ಮೂರು ಕುಟುಂಬಗಳ ಸದಸ್ಯರು ಅಸ್ವಸ್ಥರಾಗಿ ಸಾವನ್ನಪ್ಪಿದ್ದರು.

ಜನವರಿ 15ರಂದು, ಜಮ್ಮು ಮತ್ತು ಕಾಶ್ಮೀರ ಸರ್ಕಾರ ಈ ವಿಷಯದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆ ಬಳಿಕವೂ ಸರಣಿ ಸಾವು ಮುಂದುವರೆದಿದೆ. ಇದುವರೆಗೆ 17 ಜನರು ಸಾವಿಗೀಡಾಗಿದ್ದಾರೆ.

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...