Homeಕರ್ನಾಟಕರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್...

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ನಟರಾದ ದರ್ಶನ್‌, ಪವಿತ್ರಾಗೌಡ ಸೇರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ಏಳು ಮಂದಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ (ಜ.24) ನೋಟಿಸ್ ಜಾರಿ ಮಾಡಿದ್ದು, ಜಾಮೀನು ರದ್ದತಿಗೆ ನಿರಾಕರಿಸಿದೆ ಎಂದು ವರದಿಯಾಗಿದೆ.

ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್‌ ಮಹದೇವನ್‌ ಅವರ ವಿಭಾಗೀಯ ಪೀಠ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ನಾಲ್ಕು ವಾರಗಳಲ್ಲಿ ತಮ್ಮ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಅವರು “ರೇಣುಕಾಸ್ವಾಮಿ ಕೊಲೆಯು ಆಘಾತಕಾರಿ ಪ್ರಕರಣವಾಗಿದ್ದು, ಹೈಕೋರ್ಟ್‌ ಇಡೀ ಪ್ರಕರಣವನ್ನು ಮರೆಮಾಚಲು ಪ್ರಯತ್ನಿಸಿದೆ. ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿದೆ. ದರ್ಶನ್‌ಗೆ ಪವಿತ್ರಾಗೌಡ ಗೆಳತಿ ಎಂಬ ಕಾರಣಕ್ಕಾಗಿ..” ಎಂದು ವಾದ ಮಂಡಿಸಿದ್ದಾರೆ.

ಆಗ ನ್ಯಾ. ಪರ್ದಿವಾಲಾ ಅವರು “ಜಾಮೀನು ರದ್ದುಪಡಿಸಬೇಕು ಎಂದು ಕೇಳುತ್ತಿದ್ದೀರಾ?” ಎಂದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಲೂಥ್ರಾ ಅವರು “ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ. ಹೈಕೋರ್ಟ್‌ ಯಾವುದನ್ನೂ ಪರಿಗಣಿಸಿಲ್ಲ. ಪ್ರಕರಣದಲ್ಲಿನ ಸಹ ಆರೋಪಿಗಳು ಹೈಕೋರ್ಟ್‌ನ ಈ ತೀರ್ಮಾನಗಳನ್ನು ಆಧಾರವಾಗಿಸಿಕೊಂಡು ಜಾಮೀನು ಪಡೆಯಲು ಅನುಮತಿಸಬಾರದು. ಹೈಕೋರ್ಟ್‌ನ ತೀರ್ಮಾನಗಳು ಸಮಸ್ಯಾತ್ಮಕವಾಗಿದೆ” ಎಂದಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಮೇಲ್ಮನವಿ ವಿಚಾರಣೆಗೂ ಮುನ್ನ  ಮಾತನಾಡಿದ್ದ ಗೃಹ ಸಚಿವ ಡಾ. ಜಿ ಪರಮೇಶ್ವರ್, “ನಾವು ನಮ್ಮ ಕೆಲಸ ಮಾಡಿದ್ದೇವೆ. ಪೊಲೀಸರು ವಕೀಲರ ಮೂಲಕ ಸುಪ್ರೀಂ ಕೋರ್ಟ್‌ಗೆ ಸಂಬಂಧಿತ ದಾಖಲೆಗಳು ಮತ್ತು ಸಾಮಗ್ರಿಗಳನ್ನು ಸಲ್ಲಿಸಿದ್ದಾರೆ. ಪೊಲೀಸರ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ತೀರ್ಪು ಏನಾಗುತ್ತದೆ ಎಂಬುದನ್ನು ನಾವು ನೋಡುತ್ತೇವೆ. ನಂತರ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಐವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರು ಆರೋಪಿಗಳ ಬಂಧನಕ್ಕೆ ನಿರ್ದಿಷ್ಟ ಆಧಾರಗಳನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿದ್ದರು. ಪ್ರಬೀರ್ ಪುರ್ಕಾಯಸ್ಥ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಉಲ್ಲೇಖಿಸಿದ್ದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಆರೋಪಿಗಳ ಬಂಧನದ ಆಧಾರಗಳು ಮತ್ತು ಕಾರಣಗಳ ನಡುವಿನ ವ್ಯತ್ಯಾಸವನ್ನು ಒತ್ತಿ ಹೇಳಿದ್ದರು.

ಹೈಕೋರ್ಟ್ ಜಾಮೀನು ಆದೇಶವನ್ನು ಪ್ರಶ್ನಿಸಿ ಜನವರಿ 6 ರಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಆರಂಭದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ದರ್ಶನ್ ಅವರಿಗೆ ಹೈಕೋರ್ಟ್ ಮಧ್ಯಂತರ ವೈದ್ಯಕೀಯ ಜಾಮೀನು ನೀಡಿತ್ತು. ನಂತರ ಅದನ್ನು ನಿಯಮಿತ (ರೆಗ್ಯುಲರ್)  ಜಾಮೀನು ಆಗಿ ಪರಿವರ್ತಿಸಿತ್ತು.

ಇದನ್ನೂ ಓದಿ : ಬೆಳಗಾವಿ| ಗ್ರಾಮ ತೊರೆಯುವಂತೆ ದಲಿತ ವ್ಯಕ್ತಿ ಕುಟುಂಬಕ್ಕೆ ಒತ್ತಡ ಹಾಕಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...