Homeಮುಖಪುಟಪತಂಜಲಿ ಕೆಂಪು ಮೆಣಸಿನ ಪುಡಿ ಹಿಂಪಡೆಯಲು ಆಹಾರ ಪ್ರಾಧಿಕಾರ ಆದೇಶ

ಪತಂಜಲಿ ಕೆಂಪು ಮೆಣಸಿನ ಪುಡಿ ಹಿಂಪಡೆಯಲು ಆಹಾರ ಪ್ರಾಧಿಕಾರ ಆದೇಶ

ಸುರಕ್ಷತಾ ಮಾನದಂಡ ಅನುಸರಿಸಲು ವಿಫಲವಾದ ರಾಮ್‌ದೇವ್ ಕಂಪೆನಿ

- Advertisement -
- Advertisement -

ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಕಾರಣ ಪ್ಯಾಕ್ ಮಾಡಿದ ಕೆಂಪು ಮೆಣಸಿನ ಪುಡಿಯ ಬ್ಯಾಚ್ ಅನ್ನು ಹಿಂಪಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರವು ಪತಂಜಲಿ ಫುಡ್ಸ್‌ಗೆ ಆದೇಶಿಸಿದೆ ಎಂದು ಕಂಪನಿಯು ಗುರುವಾರ ತಿಳಿಸಿದೆ. ಆಹಾರ ಸುರಕ್ಷತಾ ಪ್ರಾಧಿಕಾರವು ಜನವರಿ 13 ರಂದು ಸಂಪೂರ್ಣ ಕೆಂಪು ಮೆಣಸಿನ ಪುಡಿಯನ್ನು ಹಿಂಪಡೆಯಲು ಆದೇಶವನ್ನು ನೀಡಿದ್ದು, ಕಂಪನಿಯು ಜನವರಿ 16 ರಂದು ಆದೇಶವನ್ನು ಸ್ವೀಕರಿಸಿದೆ ವರದಿಯಾಗಿದೆ.

ಕೆಂಪು ಮೆಣಸಿನ ಪುಡಿಯ ಬ್ಯಾಚ್ ಆಹಾರ ಸುರಕ್ಷತೆ ಮತ್ತು ಮಾನದಂಡಗಳು (ಮಾಲಿನ್ಯಕಾರಕಗಳು, ವಿಷಗಳು ಮತ್ತು ಉಳಿಕೆಗಳು) ನಿಯಮಗಳು, 2011 ಅನ್ನು ಅನುಸರಿಸಲು ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಕಂಡುಬಂದ ಉಲ್ಲಂಘನೆಗಳ ಸ್ವರೂಪ ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಪತಂಜಲಿ ಫುಡ್ಸ್ ಕಂಪೆನಿಯು ಯೋಗ ಗುರು ರಾಮ್‌ದೇವ್ ನೇತೃತ್ವದ ಪತಂಜಲಿ ಆಯುರ್ವೇದ ಸಮೂಹದ ಭಾಗವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಏಪ್ರಿಲ್‌ನಲ್ಲಿ ಕೂಡಾ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರವು ದೇಶಾದ್ಯಂತದ ಎಲ್ಲಾ ಬ್ರಾಂಡ್‌ಗಳಿಂದ ಪುಡಿ ಮಾಡಿದ ಮಸಾಲೆಗಳ ಮಾದರಿಗಳನ್ನು ಅವುಗಳ ಗುಣಮಟ್ಟವನ್ನು ಪರಿಶೀಲಿಸಲು ಪ್ರಾರಂಭಿಸಿತ್ತು. ಪುಡಿ ಮಾಡಿದ ಮಸಾಲೆ ತಯಾರಕರಾದ ಎವರೆಸ್ಟ್ ಮತ್ತು MDH ಮಾರಾಟ ಮಾಡುವ ಉತ್ಪನ್ನಗಳಲ್ಲಿ ಎಥಿಲೀನ್ ಆಕ್ಸೈಡ್ ಇರುವ ಬಗ್ಗೆ ಹಾಂಗ್ ಕಾಂಗ್ ಮತ್ತು ಸಿಂಗಾಪುರ ಎಚ್ಚರಿಕೆ ನೀಡಿದ ನಂತರ ಪ್ರಾಧಿಕಾರವು ಈ ಪರಿಶೀಲನೆ ನಡೆಸಿದೆ.

ಏಪ್ರಿಲ್ 5 ರಂದು, ಹಾಂಗ್ ಕಾಂಗ್‌ನ ಆಹಾರ ಸುರಕ್ಷತಾ ಕೇಂದ್ರವು MDH ಮದ್ರಾಸ್ ಕರಿ ಪೌಡರ್, MDH ಸಾಂಬಾರ್ ಮಸಾಲ, MDH ಕರಿ ಪೌಡರ್ ಮತ್ತು ಎವರೆಸ್ಟ್ ಫಿಶ್ ಕರಿ ಮಸಾಲಗಳ ಮಾರಾಟವನ್ನು ನಿಷೇಧಿಸಿದ್ದು, ಅವುಗಳನ್ನು ಹಿಂಪಡೆದಿದೆ. ಮಾದರಿಗಳಲ್ಲಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇರುವುದು ಕಂಡುಬಂದ ನಂತರ ಈ ಕ್ರಮವನ್ನು ಕೈಗೊಂಡಿದೆ.

ಎವರೆಸ್ಟ್‌ನ ಫಿಶ್ ಕರಿ ಮಸಾಲೆ ಮಿಶ್ರಣವು ಅನುಮತಿಸಲಾದ ಮಟ್ಟಕ್ಕಿಂತ ಹೆಚ್ಚಿನ ಎಥಿಲೀನ್ ಆಕ್ಸೈಡ್ ಅನ್ನು ಹೊಂದಿದೆ ಎಂಬ ಕಾರಣಕ್ಕೆ ಸಿಂಗಾಪುರ್ ಆಹಾರ ಸಂಸ್ಥೆಯು ಅದನ್ನು ಹಿಂಪಡೆಯಿತು. ಉತ್ಪನ್ನಗಳ ಶೆಲ್ಫ್ ಜೀವಿತಾವಧಿಯನ್ನು ವಿಸ್ತರಿಸಲು ತಯಾರಕರು ಹೆಚ್ಚಾಗಿ ಎಥಿಲೀನ್ ಆಕ್ಸೈಡ್ ಅನ್ನು ಫ್ಯೂಮಿಗಂಟ್ ಮತ್ತು ಕ್ರಿಮಿನಾಶಕವಾಗಿ ಬಳಸುತ್ತಾರೆ, ಆದರೆ ಭಾರತದ ಆಹಾರ ಸುರಕ್ಷತಾ ನಿಯಂತ್ರಕವು ಅದರ ಬಳಕೆಯನ್ನು ಅನುಮತಿಸುವುದಿಲ್ಲ.

ಇದನ್ನೂಓದಿ:  ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...