Homeಫ್ಯಾಕ್ಟ್‌ಚೆಕ್FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ...

FACT CHECK | ಕುಂಭಮೇಳದಲ್ಲಿ ಸಾಧುವಿನ ವೇಷ ಧರಿಸಿ ಬಂಧಿತನಾದ ಮುಸ್ಲಿಂ ಯುವಕ ಎಂದು ಪ್ರತಿಪಾದಿಸುವ ಈ ಚಿತ್ರ AI ರಚಿತ!

- Advertisement -
- Advertisement -

ಸಾಧುವಿನ ವೇಷ ಧರಿಸಿದ್ದ ಆಯೂಬ್ ಖಾನ್ ಎಂಬ ಭಯೋತ್ಪಾದಕನನ್ನು ‘ಕುಂಭಮೇಳ – 2025’ ನಡೆಯುತ್ತಿರುವ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಹೇಳಿಕೆಯಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗುತ್ತಿದೆ. FACT CHECK Maha Kumbh Mela, Muslim youth arrested for dressing up as a saint, image created by AI,

ಈ ಚಿತ್ರದಲ್ಲಿ ಸಾಧುವಿನಂತೆ ವೇಷ ಧರಿಸಿದ ವ್ಯಕ್ತಿಯನ್ನು ಇಬ್ಬರು ಪೊಲೀಸರು ಬಂಧಿಸುತ್ತಿರುವ ಫೋಟೋ ಇದ್ದು, ಅದನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ. FACT CHECK

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಕೀವರ್ಡ್‌ಗಳನ್ನು ಬಳಸಿ ಸರ್ಚ್ ಮಾಡಿದಾಗ, ಅಯೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂಬ ವರದಿಗಳು ಲಭ್ಯವಾಗಿವೆ. ಅವುಗಳನ್ನು ಇಲ್ಲಿ ನೋಡಬಹುದು.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ವರದಿಗಳ ಪ್ರಕರ, ಜನವರಿ 14, 2025 ರಂದು, ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಮಹಾ ಕುಂಭಮೇಳದಲ್ಲಿ ಯತಿ ನರಸಿಂಹಾನಂದ ಗಿರಿ ಅವರ ಶಿಬಿರದ ಬಳಿ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿರುವುದು ಕಂಡುಬಂದಿದೆ.

ಈ ವೇಳೆ ಯತಿ ನರಸಿಂಹಾನಂದರ ಕೆಲವು ಅನುಯಾಯಿಗಳು ಅವನನ್ನು ಹಿಡಿದು ಪ್ರಶ್ನಿಸಿದ್ದಾರೆ. ಆರಂಭದಲ್ಲಿ, ಅವನು ಯತಿ ನರಸಿಂಹಾನಂದರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿಕೊಂಡು ತನ್ನನ್ನು ಆಯುಷ್ ಎಂದು ಪರಿಚಯಿಸಿಕೊಂಡಿದ್ದಾನೆ. ಆತನ ನಡವಳಿಕೆಯ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ವಿಚಾರಣೆಯ ಸಮಯದಲ್ಲಿ, ಅವನ ನಿಜವಾದ ಹೆಸರು ಅಯೂಬ್ ಮತ್ತು ಅವನು ಮುಸ್ಲಿಂ ಎಂದು ತಿಳಿದುಬಂದಿದೆ.

ಹಿಂದೂಸ್ತಾನ್ ಟೈಮ್ಸ್‌ ಮತ್ತು ಇಂಡಿಯಾ ಟಿವಿ ಪ್ರಕಟಿಸಿದ ವರದಿಗಳ ಪ್ರಕಾರ, ಅಯೂಬ್ ಅಲಿ ಉತ್ತರ ಪ್ರದೇಶದ ಎಟಾದ ಅಲಿಗಂಜ್‌ನವನು. ಅವನ ತಂದೆಯ ಹೆಸರು ಶಕೀರ್ ಅಲಿ, ಮತ್ತು ಅವನಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ, ಅಯೂಬ್ ಅಲಿ ಎಟಾದವನಾಗಿದ್ದು, ಅವರನ್ನು ಎಸ್‌ಒಟಿ ಮತ್ತು ಎಸ್‌ಟಿಎಫ್ ವಿಚಾರಣೆ ನಡೆಸಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ, ಆಯುಬ್ ಅಲಿಯನ್ನು ವಶಕ್ಕೆ ಪಡೆದಿದ್ದ ಮಹಾ ಕುಂಭಮೇಳದ ಅಖಾರ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ಅವರನ್ನು ಫ್ಯಾಕ್ಟ್‌ಲಿ ತಂಡ ಸಂಪರ್ಕಿಸಿದ್ದು, ಅವರು ಕೆಳಗಿನಂತೆ ಮಾಹಿತಿ ನೀಡಿದ್ದಾರೆ.

“ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಎಂದು ಎಸ್‌ಒಟಿ ಮತ್ತು ಎಟಿಎಸ್ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಅವರು ಉತ್ತರ ಪ್ರದೇಶದ ಇಟಾದಲ್ಲಿರುವ ಅಲಿಗಂಜ್‌ನವರು. ಅವರ ತಂದೆಯ ಹೆಸರು ಶಕೀರ್ ಅಲಿ. ಅವರಿಗೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ, ದಿನಗೂಲಿ ಕಾರ್ಮಿಕರಾಗಿರುವ ಅವರನ್ನು ಬಂಧಿಸಿದಾಗ ಸಂತನಂತೆ ವೇಷ ಧರಿಸಿರಲಿಲ್ಲ.” ಎಂದು ಅವರು ಹೇಳಿದ್ದಾರೆ. ಜೊತೆಗೆ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಇದಲ್ಲದೆ, ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಫೋಟೋ AI-ರಚಿತವಾಗಿದೆ ಎಂದು ತೋರುತ್ತದೆ. ಇದನ್ನು ಪರಿಶೀಲಿಸಲು,  ಹೈವ್ ಮತ್ತು ವಾಸಿಟ್‌ಎಐನಂತಹ ಹಲವಾರು AI ಪತ್ತೆ ಸಾಧನಗಳನ್ನು ಬಳಸಿದಾಗ. ಹೈವ್‌ನ ಫಲಿತಾಂಶಗಳು ಶೇ 99.8% ವೈರಲ್ ಚಿತ್ರವು AI ನಿಂದ ರಚಿತವಾಗಿದೆ ಎಂದು ದೃಢಪಡಿಸಿದೆ.

FACT CHECK, ಮಹಾ ಕುಂಭಮೇಳ, ಸಾಧುವಿನ ವೇಷ ಧರಿಸಿ,  ಬಂಧಿತ, ಮುಸ್ಲಿಂ ಯುವಕ, ಚಿತ್ರ AI ರಚಿತ, Maha Kumbh Mela, Muslim youth arrested for dressing up as a saint, image created by AI,

ಒಟ್ಟಾರೆಯಾಗಿ ಹೇಳುವುದಾದರೆ, 2025 ರ ಮಹಾ ಕುಂಭಮೇಳದಲ್ಲಿ ಬಂಧಿಸಲ್ಪಟ್ಟ ಅಯೂಬ್ ಅಲಿ ಭಯೋತ್ಪಾದಕನಲ್ಲ ಮತ್ತು ಬಂಧನದ ಸಮಯದಲ್ಲಿ ಸಂತನ ವೇಷ ಧರಿಸಿರಲಿಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

(This story was originally published by Factly, and republished by ನಾನುಗೌರಿ.ಕಾಂ as part of the Shakti Collective)

ಇದನ್ನೂಓದಿ:  ಎಲ್ಗರ್ ಪರಿಷತ್ ಪ್ರಕರಣ : ಆರು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ರೋನಾ ವಿಲ್ಸನ್, ಸುಧೀರ್ ಧಾವಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...