Homeಮುಖಪುಟಕೇಂದ್ರದ 'ಕೃಷಿ ಮಾರುಕಟ್ಟೆ ನೀತಿ' ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಕೇಂದ್ರದ ‘ಕೃಷಿ ಮಾರುಕಟ್ಟೆ ನೀತಿ’ ತಿರಸ್ಕರಿಸಿದ ರೈತ ಸಂಘಗಳು : ದೇಶದಾದ್ಯಂತ ಬೃಹತ್ ಹೋರಾಟಕ್ಕೆ ನಿರ್ಧಾರ

ಹೊಸ ಮಾರುಕಟ್ಟೆ ನೀತಿ ಹಿಂಪಡೆದ ಕೃಷಿ ಕಾನೂನಿನ ಮರುಹುಟ್ಟು ಎಂದ ಎಸ್‌ಕೆಎಂ

- Advertisement -
- Advertisement -

ಕೇಂದ್ರ ಕೃಷಿ ಸಚಿವಾಲಯದ ‘ರಾಷ್ಟ್ರೀಯ ಕೃಷಿ ಮಾರುಕಟ್ಟೆ ನೀತಿ’ (NPFAM) ಕರಡನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ಇದರ ವಿರುದ್ದ ದೇಶದ ಎಲ್ಲಾ ರಾಜ್ಯಗಳಲ್ಲಿ ಮಹಾ ಪಂಚಾಯತ್‌, ಬೃಹತ್ ಪ್ರತಿಭಟನಾ ಸಭೆಗಳನ್ನು ನಡೆಸಲು ನಿರ್ಧರಿಸಿವೆ.

ಈ ಹಿಂದೆ ವಾಪಸ್ ಪಡೆದಿರುವ ಮೂರು ಕರಾಳ ಕೃಷಿ ಕಾನೂನುಗಳನ್ನು ಕೃಷಿ ಮಾರುಕಟ್ಟೆ ನೀತಿಯ ಹೆಸರಿನಲ್ಲಿ ಹಿಂಬಾಗಿಲ ಮೂಲಕ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಹೊಸ ನೀತಿಯ ವಿರುದ್ದ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸುವಂತೆ ಆಗ್ರಹಿಸಿ ಫೆಬ್ರವರಿ 8 ಮತ್ತು 9ರಂದು ದೇಶದಾದ್ಯಂತ ಎಲ್ಲಾ ಸಂಸದರ ನಿವಾಸ, ಕಚೇರಿಗಳ ಮುಂದೆ ಸಾಮೂಹಿಕ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಶುಕ್ರವಾರ (ಜನವರಿ 24, 2025) ನವದೆಹಲಿಯಲ್ಲಿ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಮಹಾಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

“ಕೇಂದ್ರದ ಕೃಷಿ ಮಾರುಕಟ್ಟೆ ನೀತಿಯು ಈ ಹಿಂದೆ ಹಿಂಪಡೆಯಲಾದ ಮೂರು ಕೃಷಿ ಕಾನೂನುಗಳ ಹೊಸ ರೂಪವಾಗಿದೆ. ರಾಜ್ಯ ಸರ್ಕಾರಗಳ ಮೂಲಕ ಹಿಂಬಾಗಿಲಲ್ಲಿ ಬಲವಂತವಾಗಿ ಇದನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ. ಈ ನೀತಿಯು ರೈತ ವಿರೋಧಿ ಮತ್ತು ರಾಜ್ಯ ಸರ್ಕಾರಗಳ ವಿರೋಧಿಯಾಗಿದೆ” ಎಂದು 2020-21ರಲ್ಲಿ ಸಾಮೂಹಿಕ ರೈತ ಆಂದೋಲನದ ನೇತೃತ್ವ ವಹಿಸಿದ್ದ ಕೃಷಿ ಸಂಘಗಳ ಒಕ್ಕೂಟವಾದ ಎಸ್‌ಕೆಎಂ ಹೇಳಿದೆ.

ಮಾರ್ಚ್ 5ರಿಂದ ‘ಪ್ರತಿರೋಧ ರ್‍ಯಾಲಿ’

ಎಸ್‌ಕೆಎಂ ರಾಜ್ಯ ಸಮಿತಿಗಳ ನಾಯಕರು ಆಯಾ ರಾಜ್ಯಗಳ ಮುಖ್ಯಮಂತ್ರಿಯನ್ನು ಭೇಟಿಯಾಗಿ ಹೊಸ ಕೃಷಿ ಮಾರುಕಟ್ಟೆ ನೀತಿಯ ವಿರುದ್ದ ವಿಧಾನಸಭೆಗಳಲ್ಲಿ ನಿರ್ಣಯ ಅಂಗೀಕರಿಸುವಂತೆ ಮತ್ತು ಅದನ್ನು ವಾಪಸ್ ಹಿಂಪಡೆಯಲು ಕೇಂದ್ರವನ್ನು ಆಗ್ರಹಿಸುವಂತೆ ಮನವಿ ಮಾಡಲಿದ್ದಾರೆ. ಯಾವುದಾದರು ರಾಜ್ಯ ಸರ್ಕಾರ ರೈತರ ಮನವಿಯನ್ನು ಗಣನೆಗೆ ತೆಗೆದುಕೊಳ್ಳದಿದ್ದರೆ, ಆ ರಾಜ್ಯದ ರಾಜಧಾನಿ, ಜಿಲ್ಲಾ ಕೇಂದ್ರಗಳು ಮತ್ತು ಉಪ ಜಿಲ್ಲಾ ಕೇಂದ್ರಗಳಲ್ಲಿ ಮಾರ್ಚ್ 5ರಿಂದ ಮಹಾಪಂಚಾಯತ್, ರೈತ ಸಮಾವೇಶಗಳನ್ನು
ಆಯೋಜಿಸುವ ಮೂಲಕ ಮಹಾ ಪ್ರತಿರೋಧ ರ್‍ಯಾಲಿ ನಡೆಸಲಾಗುವುದು ಎಂದು ಎಸ್‌ಕೆಂಎಂ ಎಚ್ಚರಿಸಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಎಂಎನ್‌ಸಿಗಳಿಗೆ ಸಹಾಯ ಮಾಡುವ ಹುನ್ನಾರ

ಹೊಸ ನೀತಿಯು ಸರ್ಕಾರಿ ಬೆಂಬಲಿತ ಕೃಷಿ ಮಾರುಕಟ್ಟೆಗಳ ಮೇಲಿನ ನೇರ ದಾಳಿಯಾಗಿದೆ. ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಸಹಾಯ ಮಾಡುವ ಸಲುವಾಗಿ ಮಾರುಕಟ್ಟೆಗಳನ್ನು ಖಾಸಗೀಕರಣಗೊಳಿಸುವ ಗುರಿಯನ್ನು ಹೊಂದಿದೆ. ದೊಡ್ಡ ಕಂಪನಿಗಳು ಕೃಷಿ ಚಿಲ್ಲರೆ ವ್ಯಾಪಾರ ಮತ್ತು ಕೃಷಿ ಸಂಸ್ಕರಣಾ ಉದ್ಯಮವನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ ಎಂದು ಎಸ್‌ಕೆಎಂ ಆರೋಪಿಸಿದೆ.

ಹೊಸ ಕೃಷಿ ಮಾರುಕಟ್ಟೆ ನೀತಿಯು ರೈತ ಉತ್ಪಾದಕ ಸಂಸ್ಥೆಗಳು (ಎಫ್‌ಪಿಒ) ಮತ್ತು ಇ-ರಾಷ್ಟ್ರೀಯ ಕೃಷಿ ಮಾರುಕಟ್ಟೆಯ ಮೂಲಕ ಸ್ಥಳೀಯ ಗ್ರಾಮೀಣ ಮಂಡಿಗಳನ್ನು ಜೋಡಿಸುತ್ತದೆ. ಎಫ್‌ಪಿಒ, ಸಹಕಾರಿ ಸಂಘಗಳು ಮತ್ತು ಸ್ವಸಹಾಯ ಗುಂಪುಗಳ ಮೂಲಕ ಒಪ್ಪಂದ ಕೃಷಿಯನ್ನು ಜಾರಿಗೊಳಿಸುತ್ತದೆ. ಆಹಾರ ಸಂಸ್ಕಾರಕ ಮೌಲ್ಯವರ್ಧಿತ ಸರಪಳಿಗಳಿಗೆ ಅಗ್ಗದ ಪೂರೈಕೆಯನ್ನು ಖಚಿತಪಡಿಸುತ್ತದೆ ಮತ್ತು ಕೃಷಿಯನ್ನು ಭವಿಷ್ಯದ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯೊಂದಿಗೆ ಸಂಪರ್ಕಿಸುತ್ತದೆ. ಇವೆಲ್ಲವೂ ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮತ್ತು ವಿಶ್ವಬ್ಯಾಂಕ್ ಅನತಿಯಂತೆ ನಡೆಯುತ್ತಿವೆ ಎಂದು ಎಸ್‌ಕೆಎಂ ಹೇಳಿದೆ.

ಶುಕ್ರವಾರ (ಜ.24) ನಡೆದ ಎಸ್‌ಕೆಎಂ ಮಹಾಸಭೆ

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಣೆ, ಸರ್ಕಾರಿ ಸಂಗ್ರಹಣೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಪೂರೈಕೆಗಾಗಿ ಆಹಾರ ಸಂಗ್ರಹಣೆ ಸೇರಿದಂತೆ ಯಾವುದೇ ವಿಚಾರಗಳು ಹೊಸ ಕೃಷಿ ಮಾರುಕಟ್ಟೆ ನೀತಿಯಲ್ಲಿ ಇಲ್ಲ. ಇದು ಬಫರ್ ಸ್ಟಾಕ್‌ಗಳನ್ನು ಮಾತ್ರ ಪೂರೈಸುತ್ತದೆ ಎಂದು ಎಸ್‌ಕೆಂ ತಿಳಿಸಿದೆ.

ರೈತ ಸಂಘಗಳ ನಾಯಕರಾದ ಹನ್ನನ್ ಮೊಲ್ಲಾ, ಜೋಗಿಂದರ್ ಸಿಂಗ್ ಉಗ್ರನ್, ರಾಕೇಶ್ ಟಿಕಾಯತ್, ರೇವುಲಾ ವೆಂಕಯ್ಯ, ಸತ್ಯವಾನ್ ಮತ್ತು ಡಾ. ಸುನಿಲಂ ಜೊತೆ 12 ರಾಜ್ಯಗಳ 73 ರೈತ ಸಂಘಟನೆಗಳ 165 ಪ್ರತಿನಿಧಿಗಳು ಎಸ್‌ಕೆಎಂನ ಸಾಮಾನ್ಯ ಸಭೆಯಲ್ಲಿ ಹಾಜರಿದ್ದರು.

ಸಭೆಯು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಕ್ರಮವನ್ನೂ ಖಂಡಿಸಿದೆ ಮತ್ತು ಕಾರ್ಮಿಕ ಸಂಘಗಳ ಪ್ರತಿರೋಧದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಆರ್‌ಎಸ್‌ಎಸ್‌ ಸೇರುವಂತೆ ಸರ್ಕಾರಿ ಕಾಲೇಜು ಆಡಳಿತದಿಂದ ಒತ್ತಡ : ಹೈಕೋರ್ಟ್ ಮೆಟ್ಟಿಲೇರಿದ ಉಪನ್ಯಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...